ಧಾರವಾಡ: ದೇಶದ ರಾಜಕೀಯದಲ್ಲಿ ಮಹಿಳೆಗೆ ಮಹತ್ವದ ಸ್ಥಾನ
ಕ್ರೀಡಾ ಕ್ಷೇತ್ರ ಪುರುಷರಿಗೆ ಮಾತ್ರ ಸೀಮಿತವಾಗಿತ್ತು.
Team Udayavani, Mar 18, 2024, 2:17 PM IST
ಉದಯವಾಣಿ ಸಮಾಚಾರ
ಧಾರವಾಡ: ಕವಿವಿ ಮಹಿಳಾ ಸಂಶೋಧನಾ ಅಧ್ಯಯನ ಕೇಂದ್ರ ಮತ್ತು ಮಹಿಳಾ ಅಧ್ಯಯನ ವಿಭಾಗಗಳ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ “ವೇಗದ ಪ್ರಗತಿಯಲ್ಲಿ ಸ್ಫೂರ್ತಿದಾಯಕ ಮಹಿಳೆಯರು’ ಎಂಬ ವಿಷಯದ ಕುರಿತ ವಿಚಾರ ಸಂಕಿರಣ ಸಮಾರೋಪಗೊಂಡಿತು.
ವಿಚಾರ ಸಂಕಿರಣದಲ್ಲಿ ವಿವಿಧ ವಿಷಯಗಳ ಕುರಿತು 62 ಸಂಶೋಧಕರು ಪ್ರಬಂಧ ಮಂಡಿಸಿದರು. ಉತ್ತಮ ಪ್ರಬಂಧ ಮಂಡನೆಗೆ ಹಾಗೂ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ-ಪ್ರಮಾಣಪತ್ರ ವಿತರಿಸಲಾಯಿತು.
ಕರ್ನಾಟಕ ಕಾನೂನು ವಿವಿ ಹಿರಿಯ ಪ್ರಾಧ್ಯಾಪಕಿ ಡಾ| ರತ್ನಾ ಭರಮಗೌಡರ ಮಾತನಾಡಿ, ಭಾರತೀಯ ರಾಜಕೀಯದಲ್ಲಿ ಮಹಿಳೆಗೆ ಮಹತ್ವದ ಸ್ಥಾನಮಾನಗಳನ್ನು ನೀಡಲಾಗಿದೆ. ಇತಿಹಾಸವನ್ನು ಅವಲೋಕಿಸಿದಾಗ ಅನೇಕ ಮಹಿಳೆಯರು ರಾಜಕೀಯದಲ್ಲಿ ಸಾಧನೆ ಮಾಡಿದ್ದು, ಮಹಿಳೆ ಎಲ್ಲಾ ಕ್ಷೇತ್ರದಲ್ಲಿ ತನ್ನದೇ ಸಾಮರ್ಥ್ಯ ಹೊಂದಿದ್ದಾಳೆ ಎಂಬುದಕ್ಕೆ ಇಂದಿರಾಗಾಂಧಿ, ಪ್ರತಿಭಾ ಪಾಟೀಲ್, ದ್ರೌಪದಿ ಮುರ್ಮು, ನಿರ್ಮಲಾ ಸೀತಾರಾಮನ್ ಸೇರಿದಂತೆ ಇಂದು ರಾಜಕೀಯ ಕ್ಷೇತ್ರದಲ್ಲಿ
ಬಹಳಷ್ಟು ಸಾಧನೆ ಮಾಡಿದ್ದಾರೆ ಎಂದರು. ಕ್ರೀಡಾ ಕ್ಷೇತ್ರ ಪುರುಷರಿಗೆ ಮಾತ್ರ ಸೀಮಿತವಾಗಿತ್ತು.
ಆದರೆ ಪ್ರಸ್ತುತ ಮಹಿಳೆಯರು ಕ್ರೀಡೆ, ಆಡಳಿತ, ಪೊಲೀಸ್ ಇಲಾಖೆ, ರಕ್ಷಣಾ ಇಲಾಖೆಯಲ್ಲೂ ಸಾಧನೆ ಮಾಡಿದ್ದಾರೆ. ಆದರೆ ಇಂದಿಗೂ ಮಹಿಳೆಯರ ಮೇಲೆ ಅವ್ಯಾಹತವಾಗಿ ಮಾನಸಿಕ ಹಿಂಸೆ ನಡೆಯುತ್ತಿರುವುದು ದುರದೃಷ್ಟಕರ. ಮಹಿಳೆಯರು ಎಷ್ಟೇ ಮುಂದುವರಿದಿದ್ದರೂ ಅವಳ ಸಾಧನೆಯನ್ನು ಗುರುತಿಸದಿರುವುದು ವಿಪರ್ಯಾಸದ ಸಂಗತಿ ಎಂದು ಹೇಳಿದರು.
ಎಸ್‌ಬಿಐ ಕವಿವಿ ಶಾಖೆಯ ಮಧುಸ್ವಿನಿ ದೇಸಾಯಿ ಮಾತನಾಡಿದರು. ಕವಿವಿ ಸಮಾಜ ನಿಖಾಯದ ಡೀನ್ ಜಯಶ್ರೀ ಎಸ್. ಅಧ್ಯಕ್ಷತೆ ವಹಿಸಿದ್ದರು. ಕವಿವಿ ಮಹಿಳಾ ಅಧ್ಯಯನ ಸಂಶೋಧನೆ ಕೇಂದ್ರದ ನಿರ್ದೇಶಕಿ ಡಾ| ಸಂಗೀತಾ ಮಾನೆ ವರದಿ ಮಂಡಿಸಿದರು. ಶ್ಯಾಮಲಾ ರತ್ನಾಕರ, ಡಾ| ಶ್ಯಾಮಕುಮಾರ, ವೀಣಾ ಬಿರಾದರ, ಡಾ| ಪುಷ್ಪಾ ಹೊಂಗಲದ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.