Dharwad; ಹಾಲಿನ ಪ್ರೋತ್ಸಾಹ ಧನಕ್ಕೆ ಆಗ್ರಹಿಸಿ ಎಮ್ಮೆಗಳ ಸಹಿತ ಬಿಜೆಪಿ ಪ್ರತಿಭಟನೆ
Team Udayavani, Feb 6, 2024, 6:25 PM IST
ಧಾರವಾಡ: ಹಾಲು ಉತ್ಪಾದಕರಿಗೆ ನೀಡಬೇಕಾದ 716 ಕೋಟಿ ಪ್ರೋತ್ಸಾಹ ಧನವನ್ನು ಬಾಕಿ ಉಳಿಸಿಕೊಂಡಿರುವ ರಾಜ್ಯ ಕಾಂಗ್ರೆಸ್ ಸರಕಾರ ನಡೆ ಖಂಡಿಸಿ ಬಿಜೆಪಿ ಹುಬ್ಬಳ್ಳಿ-ಧಾರವಾಡ ರೈತ ಮೋರ್ಚಾ ಜಿಲ್ಲಾ ಘಟಕದಿಂದ ನಗರದ ಡಿಸಿ ಕಚೇರಿ ಎದುರು ಮಂಗಳವಾರ ಎಮ್ಮೆಗಳೊಂದಿಗೆ ಪ್ರತಿಭಟನೆ ನಡೆಸಲಾಯಿತು.
ಇಲ್ಲಿಯ ಡಿಸಿ ಕಚೇರಿಗೆ ಎಮ್ಮೆಗಳ ಸಹಿತ ಮೆರವಣಿಗೆ ಮೂಲಕ ಕಾಂಗ್ರೆಸ್ ಸರಕಾರದ ವಿರುದ್ದ ಘೋಷಣೆ ಕೂಗುತ್ತಾ ಆಗಮಿಸಿದ ಪ್ರತಿಭಟನಾಕಾರರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿ ಮಾಡಿದ ರೈತ ಪರ ಯೋಜನೆಗಳನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರದ್ದು ಮಾಡಿದೆ. ಈ ಸರ್ಕಾರದ ಧೋರಣೆಗಳಿಂದ ಜನರು ಮಾತ್ರವಲ್ಲ, ಜಾನುವಾರುಗಳು ಸಹ ಸಂಕಷ್ಟದಲ್ಲಿವೆ ಎಂದು ದೂರಿದರು.
ಬಿಜೆಪಿ ಆಡಳಿತದಲ್ಲಿ 26 ಲಕ್ಷ ರೈತರಿಂದ ಪ್ರತಿದಿನ 80 ರಿಂದ 85 ಲಕ್ಷ ಲೀಟರ್ ಹಾಲು ಸಂಗ್ರಹಿಸಲಾಗುತ್ತಿತ್ತು. ಸಿಎಂ ಯಡಿಯೂರಪ್ಪ ಅವರು ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ನೀಡಿದ್ದರು. ಆದರೆ ಕಾಂಗ್ರೆಸ್ ಅಧಿಕಾರ ಬಂದ ನಂತರ ಪ್ರೋತ್ಸಾಹಧನ ಬಿಡುಗಡೆ ಮಾಡಿಲ್ಲ. ಆದ್ದರಿಂದ ಹಾಲಿನ ಉತ್ಪಾದನೆ ಪ್ರಮಾಣ 10 ಲಕ್ಷ ಲೀಟರ್ ಕುಸಿದಿದೆ. ರೈತರಿಗೆ ಬರಪರಿಹಾರದ ಬಾಕಿ ಹಣವನ್ನು ಶೀಘ್ರ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಜನ ಹಾಗೂ ಜಾನುವಾರು ಸಮೇತ ಬೃಹತ್ ಪ್ರತಿಭಟಣೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿಯ ಮಹಾನಗರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ರೈತ ಮೋರ್ಚಾ ಅಧ್ಯಕ್ಷ ಈಶ್ವರಗೌಡ ಪಾಟೀಲ, ಕಾರ್ಯದರ್ಶಿ ಬಸವಣ್ಣೆಪ್ಪ ಬಾಳಗಿ, ಪಾಲಿಕೆ ಸದಸ್ಯೆ ಜ್ಯೋತಿ ಪಾಟೀಲ, ದತ್ತಮೂರ್ತಿ ಕುಲಕರ್ಣಿ, ಬಸವರಾಜ ಜಾಬಿನ, ಮಂಜುನಾಥ ನೀರಲಕಟ್ಟಿ, ವಿಜಯಾನಂದ ಶೆಟ್ಟಿ, ಸುರೇಶ ಬೇಂದ್ರೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.