ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಮಸ್ಟರಿಂಗ್ ಕಾರ್ಯ ಪರಿಶೀಲಿಸಿದ ಜಿಲ್ಲಾಧಿಕಾರಿ
Team Udayavani, Oct 27, 2020, 11:58 AM IST
ಧಾರವಾಡ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯು ನಾಳೆ ಅಕ್ಟೋಬರ್ 28 ರಂದು ಮತದಾನ ನಡೆಯುವ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಮಸ್ಟರಿಂಗ್ ಕಾರ್ಯ ಜರುಗಿತು.
ಧಾರವಾಡ ತಹಸೀಲ್ದಾರ ಕಚೇರಿ ಆವರಣದ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಅವರು ಮತಗಟ್ಟೆ ತೆರಳುವ ಅಧಿಕಾರಿ, ಸಿಬ್ಬಂದಿಗಳಿಗೆ ಹಸ್ತಾಂತರಿಸಲು ಸಿದ್ಧಪಡಿಸಿರುವ ಚುನಾವಣಾ ಸಾಮಗ್ರಿಗಳು, ಕೋವಿಡ್ ನಿಯಂತ್ರಣ ಮುಂಜಾಗ್ರತಾ ಕ್ರಮಕ್ಕಾಗಿ ನೀಡಲಾಗಿರುವ ಮಾಸ್ಕ್, ಹ್ಯಾಂಡ್ ಗ್ಲೋಸ್ ಮತ್ತಿತರ ಪರಿಕರಗಳನ್ನು ಪರಿಶೀಲಿಸಿದರು.
ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಒಳಗೊಂಡಿರುವ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಧಾರವಾಡ ಜಿಲ್ಲೆಯಲ್ಲಿ – 21549, ಗದಗ- 15978, ಹಾವೇರಿ 23593 ಹಾಗೂ ಉತ್ತರ ಕನ್ನಡ 13148 ಜನ ಮತದಾರರು ಸೇರಿ ಒಟ್ಟು ಕ್ಷೇತ್ರದಲ್ಲಿ 74268 ಮತದಾರರು ಇದ್ದಾರೆ. ಧಾರವಾಡ ಜಿಲ್ಲೆಯ 54 ಮತಗಟ್ಟೆಗಳಲ್ಲಿ ಅಕ್ಟೋಬರ್ 28 ರ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ
MUST WATCH
ಹೊಸ ಸೇರ್ಪಡೆ
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.