ಧಾರವಾಡ: ನಕಲಿ ದಾಖಲೆ ಸೃಷ್ಟಿಸಿ ಸೈಟ್ ಮಾರಾಟ; ಆರು ಜನರ ಬಂಧನ
Team Udayavani, Jul 28, 2023, 10:00 PM IST
ಧಾರವಾಡ: ನಿವೃತ್ತ ಸೇನಾಧಿಕಾರಿಯ ಪತ್ನಿಯ ಹೆಸರಿನಲ್ಲಿದ್ದ ಆಸ್ತಿಯನ್ನು ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ಮಾರಾಟ ಮಾಡಿ ಹಣ ದೋಚಿದ್ದ ಪ್ರಕರಣದಲ್ಲಿ ಆರು ಜನ ಆರೋಪಿತರನ್ನು ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದು, ಇದಲ್ಲದೆ ಎಲ್ಲ ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕಲ್ಲಯ್ಯ ಪೂಜಾರಿ, ತುಕಾರಾಮ ಮೋಹಿತೆ, ಬಸವ್ವ ಗುಡ್ಡದಮಠ, ಈರಯ್ಯ ಓಸಿಮಠ, ಬಸಪ್ಪ ಕೋರಿ, ಹಾಗೂ ಮಡಿವಾಳ ಗಾಳಿ ಬಂಧಿತರು. ಉಣಕಲ್ ಗ್ರಾಮದ ಸರ್ವೇ ನಂಬರ್ 640/ಅ ಪ್ಲಾಟ್ ಸಂಖ್ಯೆ 2/10 ರಲ್ಲಿ ನಿವೃತ್ತ ಸೇನಾಧಿಕಾರಿ ದಿ. ಬಸಲಿಂಗಪ್ಪ ಯರಗಟ್ಟಿ ಅವರ ಪತ್ನಿ ರಾಜೇಶ್ವರಿ ಯರಗಟ್ಟಿ ಅವರ ಹೆಸರಿಲ್ಲಿ 2 ಗುಂಟೆ 13 ಆಣೆ ಜಾಗೆ ನೊಂದಣಿಯಾಗಿತ್ತು. ಅದು ತಮ್ಮದೆಂದು ಬಂಧಿತರೆಲ್ಲರೂ ನಕಲಿ ಆಧಾರ, ಪಾನ್ ಕಾರ್ಡ್ ಸೇರಿದಂತೆ ವಿವಿಧ ದಾಖಲೆಗಳನ್ನು ಸೃಷ್ಟಿಸಿದ್ದರು. ನಂತರ ಅದನ್ನು ಕೆಐಎಡಿಬಿ ಮೂಲಕ 20.98 ಲಕ್ಷಕ್ಕೆ ಮಾರಾಟ ಮಾಡಿದ್ದರು. ವಿಷಯ ತಿಳಿದ ರಾಜೇಶ್ವರಿ ಈ ಸಂಬಂಧ ಮೂರು ತಿಂಗಳ ಹಿಂದೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಸದ್ಯ ಪ್ರಕರಣ ಬೇಧಿಸಿರುವ ಪೊಲೀಸರು, ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದ ಆರು ಜನ ಆರೋಪಿತರನ್ನು ಬಂಧಿಸಿದ್ದು, ಅದರಲ್ಲಿ ತುಕಾರಾಮ ಮೋಹಿತೆ ಎಂಬಾತ ಜಯ ಕರ್ನಾಟಕ ಜನಪರ ವೇದಿಕೆ ಸದಸ್ಯನೆಂದು ಹೇಳಿಕೊಂಡಿದ್ದಾನೆ. ಇದರಲ್ಲಿ ಬ್ಯಾಂಕ್ ಹಾಗೂ ಕೆಐಎಡಿಬಿ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ಇದ್ದು, ತನಿಖೆ ಮುಂದುವರಿಸಲಾಗಿದೆ ಎಂದು ವಿದ್ಯಾಗಿರಿ ಠಾಣೆಯ ಇನ್ಸ್ ಪೆಕ್ಟರ್ ಸಂಗಮೇಶ ಡಿ. ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್
Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್ ಬಿಸಿ!
ಕುರಿ ಕಾಯುತ್ತಲೇ ಹಾಡು ಕಲಿತ ಇಮಾಮಸಾಬಗೆ ರಾಜ್ಯೋತ್ಸವ ಪ್ರಶಸ್ತಿ ಗರಿ; ಡೊಳ್ಳಿನ ಭಾವೈಕ್ಯತೆ
ಹುಬ್ಬಳ್ಳಿ ಟೆಕ್ಕಿ 24 ತಾಸು ಡಿಜಿಟಲ್ ಅರೆಸ್ಟ್! ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.