ಸೆ.17 ರಿಂದ ಧಾರವಾಡ ಕೃಷಿ ಮೇಳ
Team Udayavani, Sep 14, 2022, 5:58 PM IST
ಧಾರವಾಡ : ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ರೈತರ ಆದಾಯ ದ್ವಿಗುಣಗೊಳಿಸಲು ಕೃಷಿ ತಾಂತ್ರಿಕತೆಗಳು ಎಂಬ ಶೀರ್ಷಿಕೆಯಡಿಯಲ್ಲಿ ನಾಲ್ಕು ದಿನಗಳ ಕಾಲ ಕೃಷಿ ಮೇಳ ಆಯೋಜಿಸಲಾಗಿದ್ದು, ಸೆ.17 ರಿಂದ ಕೃಷಿ ಮೇಳಕ್ಕೆ ಚಾಲನೆ ದೊರೆಯಲಿದೆ ಎಂದು ಕುಲಪತಿ ಡಾ|ಆರ್.ಬಸವರಾಜಪ್ಪ ಹೇಳಿದರು.
ನಗರದ ಕೃಷಿ ವಿವಿ ಕುಲಪತಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೃಷಿ ಮೇಳದ ಬಗ್ಗೆ ಅವರು ಮಾಹಿತಿ ನೀಡಿದರು.
ಸೆ.17 ರಂದು 10:30 ಗಂಟೆಗೆ ಫಲಪುಷ್ಪ ಮತ್ತು ಗಡ್ಡೆ-ಗೆಣಸು ಜತೆಗೆ ವಿಸ್ಮಯಕಾರಿ ಕೀಟ ಪ್ರಪಂಚ ಪ್ರದರ್ಶನವು ಉದ್ಘಾಟನೆಗೊಳ್ಳಲಿದೆ. ಇದಾದ ಬಳಿಕ 11:30 ಗಂಟೆಗೆ ಕರ್ನಾಟಕ ಪ್ರದೇಶ ಕೃಷಿ ಸಮಾಜದ ಆಡಳಿತ ಅಧ್ಯಕ್ಷ ಜಿ.ಶಿವನಗೌಡರು ಬೀಜ ಮೇಳಕ್ಕೆ ಚಾಲನೆ ನೀಡಲಿದ್ದಾರೆ. ಆ ಬಳಿಕ ಮಧ್ಯಾಹ್ನ 2:00 ಗಂಟೆಗೆ ಕೃಷಿ ಮೇಳದ ವೇದಿಕೆಯಲ್ಲಿ ಸೂರ್ಯಕಾಂತಿ ಬೆಳೆ ವಿಚಾರಗೋಷ್ಠಿ ಹಾಗೂ 3:00 ಗಂಟೆಗೆ ರೈತರಿಂದ ರೈತರಿಗಾಗಿ ಕಾರ್ಯಕ್ರಮದಲ್ಲಿ ಅನ್ವೇಷಣಾ ರೈತರ ಅನುಭವ ಹಂಚಿಕೆ ಕಾರ್ಯಕ್ರಮ ಇರಲಿದೆ ಎಂದರು.
ಸಿಎಂ ಬೊಮ್ಮಾಯಿ ಉದ್ಘಾಟನೆ :
ಸೆ.18 ರಂದು ಬೆಳಿಗ್ಗೆ 11:30 ಗಂಟೆಗೆ ಕೃಷಿ ಮೇಳ ವೇದಿಕೆಯಲ್ಲಿ ಕೃಷಿ ಮೇಳವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪಾಲ್ಗೊಳ್ಳಲಿದ್ದು, ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಕೃಷಿ ಪ್ರಕಟಣೆಗಳನ್ನು ಬಿಡುಗಡೆ ಮಾಡಲಿದ್ದಾರೆ. ಶಾಸಕ ಅಮೃತ ದೇಸಾಯಿ ಅಧ್ಯಕ್ಷತೆ ವಹಿಸಲಿದ್ದು, ಇದರ ಜತೆಗೆ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.
ಎಲ್ಲ ಕೃಷಿ ತಂತ್ರಜ್ಞಾನಗಳ ಮಾಹಿತಿಯನ್ನು ಕೃಷಿ ಮೇಳದ ಮೂಲಕ ಅಲ್ಪ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ರೈತರಿಗೆ ತಲುಪಿಸುವುದು ಈ ಮೇಳದ ಮುಖ್ಯ ಉದ್ದೇಶವಾಗಿದೆ. ನಾಲ್ಕು ದಿನಗಳ ಈ ಮೇಳದಲ್ಲಿ ಸುಮಾರು ೧೦ ಲಕ್ಷ ರೈತರು ಭಾಗವಹಿಸುವ ನಿರೀಕ್ಷೆಯಿದೆ. ಕೃಷಿ ವಿವಿ ವ್ಯಾಪ್ತಿಯ 7 ಜಿಲ್ಲೆಗಳಿಂದ ಶ್ರೇಷ್ಠ ಕೃಷಿಕ ಹಾಗೂ ಶ್ರೇಷ್ಠ ಕೃಷಿ ಮಹಿಳೆ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲಾಗಿದ್ದು, ಮೇಳದ ಮುಖ್ಯ ವೇದಿಕೆಯಲ್ಲಿ ಪ್ರಶಸ್ತಿಪ್ರದಾನ ನೆರವೇರಲಿದೆ ಎಂದರು.
ಇದನ್ನೂ ಓದಿ: ಉತ್ತರಾಖಂಡದಲ್ಲಿ ಪತಂಜಲಿ ಯೋಗಪೀಠದಿಂದ 1,000 ಕೋಟಿ ರೂ ಹೂಡಿಕೆ
ಪತ್ರಿಕಾಗೋಷ್ಠಿಯಲ್ಲಿ ವಿಸ್ತರಣಾ ನಿರ್ದೇಶಕ ಡಾ|ಪಿ.ಎಸ್.ಹೂಗಾರ, ಸಂಶೋಧನಾ ನಿರ್ದೇಶಕ ಡಾ|ಪಿ.ಎಲ್. ಪಾಟೀಲ ಸೇರಿದಂತೆ ವಿವಿಧ ವಿಭಾಗದ ಡೀನ್ ಮುಖ್ಯಸ್ಥರು ಇದ್ದರು.
ಶ್ರೇಷ್ಠ ಕೃಷಿಕ-ಶ್ರೇಷ್ಠ ಕೃಷಿ ಮಹಿಳೆ ಪ್ರಶಸ್ತಿ ಪುರಸ್ಕೃತರು :
ಬೆಳಗಾವಿ ಜಿಲ್ಲೆ-ಗೋಕಾಕ ತಾಲೂಕಿನ ರಾಜಾಪೂರದ ಚಿದಾನಂದ ಪರಸಪ್ಪ ಪವಾರ, ದುರದುಂಡಿಯ ಸಿದ್ದವ್ವ ಲಕ್ಷ್ಮೀಕಾಂತ ಸೊಲ್ಲಾಪೂರ, ಹಾವೇರಿ ಜಿಲ್ಲೆ-ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪದ ಪರಮೇಶಪ್ಪ ಬಸಪ್ಪ ಹಲಗೇರಿ, ಬ್ಯಾಡಗಿ ತಾಲೂಕಿನ ಹೆಡಿಗ್ಗೊಂಡದ ದಿವ್ಯಾ ಶಿವಕುಮಾರ ತೋಟದ, ಗದಗ ಜಿಲ್ಲೆ-ಶಿರಹಟ್ಟಿ ತಾಲೂಕಿನ ಮಾಡ್ಡಳ್ಳಿಯ ಹನಮಂತಪ್ಪ ಚಿಂಚಲಿ, ಮುಳಗುಂದದ ಮಂಗಳಾ ಕಿರಣ ನೀಲಗುಂದ, ವಿಜಯಪುರ ಜಿಲ್ಲೆ-ಕೊಲ್ಲಾರ ತಾಲೂಕಿನ ಮುಳವಾಡದ ಬಸವರಾಜ ಪರಗೊಂಡ ಸಿದ್ದಾಪುರ, ತಿಕೋಟಾ ತಾಲೂಕಿನ ತೊರವಿಯ ಸುಲೋಚನಾ ಸಾಬು ಮಮದಾಪುರ, ಬಾಗಲಕೋಟೆ ಜಿಲ್ಲೆ- ಕುಳಲಿಯ ಶಂಬು ಬಸಪ್ಪ ಬೆಳಗಾವ, ಬದಾಮಿ ತಾಲೂಕಿನ ಜಾಲಿಹಾಳದ ವಿಜಯಲಕ್ಷ್ಮೀ ಲಿಂಗರೆಡ್ಡಿ, ಉತ್ತರ ಕನ್ನಡ ಜಿಲ್ಲೆ-ಶಿರಸಿ ತಾಲೂಕಿನ ತಾರಗೋಡದ ಕಲ್ಲಳ್ಳಿ ಮನೆಯ ಮಧುಕೇಶ್ವರ ಜನಕ ಹೆಗಡೆ, ಅರಸಪುರದ ಹುಳಗೋಳದ ರಾಜೇಶ್ವರಿ ರಾಮಚಂದ್ರ ಹೆಗಡೆ, ಧಾರವಾಡ ಜಿಲ್ಲೆ-ಅಣ್ಣಿಗೇರಿ ತಾಲೂಕಿನ ಭದ್ರಾಪೂರದ ಉಮೇಶ ಬಸವಂತ ಗುಡ್ಡದ, ಅಳ್ನಾವರ ತಾಲೂಕಿನ ಹೊನ್ನಾಪುರದ ಲತಾ ರಾಮಪ್ಪ ನಂದನವಾಡಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
U. T. Khader: ಹೆಬ್ಟಾಳ್ಕರ್-ಸಿ.ಟಿ. ರವಿ ಪ್ರಕರಣ ಹಕ್ಕು ಭಾದ್ಯತಾ ಸಮಿತಿಗೆ: ಖಾದರ್
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್ ಮ್ಯಾನೇಜರ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.