Dharwad: ಬೆಳ್ಳಂಬೆಳಗ್ಗೆ ರೌಡಿ ಶೀಟರ್‌ಗಳ ಮನೆಗೆ ದಾಳಿ ನಡೆಸಿ ಬಿಸಿ ಮುಟ್ಟಿಸಿದ ಖಾಕಿ
Team Udayavani, May 30, 2024, 4:29 PM IST
ಧಾರವಾಡ : ಅಪರಾಧ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚುರುಕಾಗಿರುವ ನಗರದ ಪೊಲೀಸರು, ಇದೀಗ ಸಮಾಜಘಾತುಕ ಶಕ್ತಿಗಳಿಗೆ ಬಿಸಿ ಮುಟ್ಟಿಸುವ ಕಾರ್ಯ ಆರಂಭಿಸಿದ್ದಾರೆ.
ನಗರದಲ್ಲಿನ ರೌಡಿ ಶೀಟರ್‌ಗಳ ಮನೆಗಳಿಗೆ ಬೆಳ್ಳಂಬೆಳಗ್ಗೆ ತೆರಳಿ ಜಾಲಾಡಿರುವ ಪೊಲೀಸರು ಯಾವುದೇ ಸಂದರ್ಭದಲ್ಲಿ ಬಾಲ ಬಿಚ್ಚದಂತೆ ತಾಕೀತು ಮಾಡಿದ್ದಾರೆ.
ಎಸಿಪಿ ಬಿ.ಬಸವರಾಜ ಅವರ ಮಾರ್ಗದರ್ಶನದಲ್ಲಿ ನಗರದ ೩೨ ಕ್ಕೂ ಹೆಚ್ಚು ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ಮಾಡಿದ್ದಾರೆ.
ಶಹರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ವಿಶ್ವನಾಥ ಚೌಗಲೆ, ವಿದ್ಯಾಗಿರಿ ಠಾಣೆಯ ಇನ್ಸಪೆಕ್ಟರ್ ಸಂಗಮೇಶ ದಿಡಿಗನಾಳ ಹಾಗೂ ಉಪನಗರ ಠಾಣೆಯ ಪಿಐ ದಯಾನಂದ ಶೇಗುಣಿಸಿ ನೇತೃತ್ವದಲ್ಲಿ ಸಿಬ್ಬಂದಿ ರೌಡಿಗಳ ಮನೆಗಳ ಬಾಗಿಲು ತಟ್ಟಿದ್ದಾರೆ.
ದಾಳಿ ವೇಳೆ ಮಾರಕಾಸ್ತ್ರಗಳು ಮತ್ತು ಇನ್ನಿತರ ನಿಷೇಧಿತ ಮಾದಕ ಸಾಮಗ್ರಿಗಳನ್ನು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ವಿದ್ಯಾಗಿರಿ ಠಾಣಾ ವ್ಯಾಪ್ತಿಯಲ್ಲಿ ಸ್ವಲ್ಪ ಪ್ರಮಾಣದ ಗಾಂಜಾ ಲಭ್ಯವಾಗಿದೆ ಎನ್ನಲಾಗಿದೆ.
ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗವಹಿಸದಂತೆ ರೌಡಿ ಶೀಟರ್ ಗಳಿಗೆ ಅಧಿಕಾರಿಗಳು ಎಚ್ಚರಿಕೆ ಕೂಡ ನೀಡಿದ್ದಾರೆ. ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದರೇ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಖಡಕ್ ಸಂದೇಶವನ್ನು ಪೊಲೀಸರು ನೀಡುವ ಮೂಲಕ ರೌಡಿಗಳ ನಿಗ್ರಹಕ್ಕೆ ಮುಂದಾಗಿದ್ದಾರೆ.
ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಎರಡು ಭೀಕರ ಕೊಲೆಗಳು, ಇನ್ನಿತರ ಅಪರಾಧ ಕೃತ್ಯಗಳನ್ನು ತಡೆಯುವ ದಿಸೆಯಲ್ಲಿ ಪೊಲೀಸರು ಕಾರ್ಯೋನ್ಮುಖರಾಗಿದ್ದಾರೆ.
ಅವಳಿ ನಗರ ಪೊಲೀಸ್ ಆಯಕ್ತರಾದ ರೇಣುಕಾ ಸುಕುಮಾರ ಅವರು ಈಗಾಗಲೇ ಇಲಾಖೆಯ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ಕೂಡ ನೀಡಿದ್ದು, ಸಾರ್ವಜನಿಕರು ಭಯ ಬೀಳದಂತ ಸ್ಥಿತಿಯನ್ನು ನಿರ್ಮಾಣ ಮಾಡುತ್ತಿದ್ದಾರೆ.
ಜನತೆ ಕೂಡಾ ಪೊಲೀಸರಿಗೆ ಸಕಾಲಕ್ಕೆ ಸೂಕ್ತ ಮಾಹಿತಿ ನೀಡುವ ಮೂಲಕ ಅಗತ್ಯ ಸಹಕಾರ ಒದಗಿಸಬೇಕು. ಮತ್ತು ಸಾಕಷ್ಟು ಜಾಗೃತಿ ವಿಧಿಸಿಬೇಕು. ಈ ಮೂಲಕ ಅಹಿತಕರ ಘಟನೆಗಳನ್ನು ತಡೆಯುವ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಎಸಿಪಿ ಬಿ.ಬಸವರಾಜ ತಿಳಿಸಿದ್ದಾರೆ.
ಇದನ್ನೂ ಓದಿ: Shivamogga: ಚಂದ್ರಶೇಖರ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ಗೃಹ ಸಚಿವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.