Dharwad; ಪುನೀತ್ ಹೃದಯ ಜ್ಯೋತಿ 2ನೇ ಹಂತದ ಯೋಜನೆಗೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ
Team Udayavani, Mar 15, 2024, 2:29 PM IST
ಧಾರವಾಡ: ರಾಜ್ಯ ಸರ್ಕಾರ ಡಾ.ಪುನೀತ್ ರಾಜಕುಮಾರ್ ಅವರ ಹೆಸರಿನಲ್ಲಿ ಹೃದಯ ಜ್ಯೋತಿ ಯೋಜನೆ ಜಾರಿಗೆ ತಂದಿದ್ದು, ಎರಡನೇ ಹಂತದ ಈ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ನಗರದ ಡಾ.ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಚಾಲನೆ ನೀಡಿದರು.
ಹೃದಯಾಘಾತವಾದ ತಕ್ಷಣ ಬಡವರಿಗೂ ಲಭ್ಯವಾಗುವ ರೀತಿಯಲ್ಲಿ ಎಲ್ಲ ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ 28 ಸಾವಿರ ರೂಪಾಯಿ ಮೌಲ್ಯದ ಯೋಜನೆ ಇದಾಗಿದೆ. ಹೃದಯಾಘಾತವಾದ ತಕ್ಷಣ ಇಸಿಜಿ ಮಾಡುವ ಸ್ಟೆಮಿ ಕಿಟ್ ನೂ ಈ ಯೋಜನೆಯಡಿ ನೀಡಲಾಗುತ್ತಿದೆ. ಇಡೀ ದೇಶದಲ್ಲೇ ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರದಿಂದ ಈ ಯೋಜನೆ ಜಾರಿ ಮಾಡಲಾಗಿದೆ. ಈಗಾಗಲೇ ರಾಜ್ಯದ 15 ಜಿಲ್ಲೆ ಹಾಗೂ 71 ತಾಲೂಕಾ ಆಸ್ಪತ್ರೆಯಲ್ಲಿ ಈ ಯೋಜನೆ ಜಾರಿ ಮಾಡಲಾಗಿದೆ. ಎರಡನೇ ಹಂತದಲ್ಲಿ ದಕ್ಷಿಣ ಕನ್ನಡ, ಬೆಳಗಾವಿ, ದಾವಣಗೆರೆ, ಶಿವಮೊಗ್ಗ, ಧಾರವಾಡ, ಬಾಗಲಕೋಟೆ ಸೇರಿದಂತೆ 36 ತಾಲೂಕು ಆಸ್ಪತ್ರೆಗಳಲ್ಲಿ ಈ ಯೋಜನೆ ಜಾರಿಗೊಳಿಸಲಾಗಿದ್ದು, ಬರುವ ದಿನಗಳಲ್ಲಿ ರಾಜ್ಯಾದ್ಯಂತ ಈ ಯೋಜನೆ ಜಾರಿಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಹೃದಯಾಘಾತವಾದ ವ್ಯಕ್ತಿಗೆ ಇಂಜೆಕ್ಷನ್ ನೀಡಿದರೆ ಹೃದಯದ ಬ್ಲಾಕ್ ಗಳನ್ನು ಈ ಇಂಜೆಕ್ಷನ್ ತೆಗೆದು ಹಾಕಿ ವ್ಯಕ್ತಿ ಬದುಕುವಂತೆ ಮಾಡುತ್ತದೆ. ಆನಂತರ ಆ ವ್ಯಕ್ತಿಗೆ ಚಿಕಿತ್ಸೆ ನೀಡಬೇಕಾಗುತ್ತದೆ. ಇಂತಹ ಇಂಜೆಕ್ಷನ್ ಬಡವರಿಗೂ ಸಿಗಲಿ ಎಂದು ಈ ಯೋಜನೆ ಜಾರಿ ಮಾಡಲಾಗಿದೆ. ಬರುವ ದಿನಗಳಲ್ಲಿ ಈ ಇಂಜೆಕ್ಷನ್ ನ್ನು ರೈಲು ನಿಲ್ದಾಣ, ವಿಮಾನ ನಿಲ್ದಾಣಗಳಲ್ಲೂ ಇಡುವ ಯೋಜನೆ ಸರ್ಕಾರದ ಮುಂದೆ ಇದೆ ಎಂದು ಆರೋಗ್ಯ ಸಚಿವರು ತಿಳಿಸಿದರು.
ಇಂತಹ ಎರಡನೇ ಹಂತದ ಯೋಜನೆಗೆ ಧಾರವಾಡದಿಂದ ಚಾಲನೆ ಸಿಕ್ಕಿದೆ. ಈ ಸಮಾರಂಭಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್, ಶಾಸಕ ಎನ್.ಎಚ್. ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಹೃದಯ ಸಂಬಂಧಿ ವೈದ್ಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Dharwad: ವಾಗ್ವಾದ ನಡೆದು ಎರಡು ಸುತ್ತು ಫೈರಿಂಗ್: ನಾಲ್ವರು ವಶಕ್ಕೆ
Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್
Sugarcane: ನ.8ರಿಂದ ಕಬ್ಬು ಕಟಾವು ಆರಂಭಿಸಿ: ರೈತರಿಗೆ ಸಚಿವ ಶಿವಾನಂದ ಪಾಟೀಲ ಮನವಿ
Waqf: ಲೋಕಸಭಾ ಸ್ಪೀಕರ್‌ಗೆ ರಾಜ್ಯದ ವಕ್ಫ್ ವರದಿ: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.