Dharwad: ಚೆನ್ನವೀರ ಸ್ವಾಮೀಜಿಗೆ ಶ್ರೀ ಮೃತ್ಯುಂಜಯ-ಮಹಾಂತ ಪ್ರಶಸ್ತಿ
Team Udayavani, Feb 8, 2024, 12:32 PM IST
ಧಾರವಾಡ: ಪ್ರಸಕ್ತ ಸಾಲಿನ ಮುರುಘಾಮಠದ ಶ್ರೀ ಮೃತ್ಯುಂಜಯ-ಮಹಾಂತ ಪ್ರಶಸ್ತಿಗೆ ಹಾರಕೂಡ ಚನ್ನವೀರ ಸಂಸ್ಥಾನಮಠದ ಡಾ.ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
ಇಲ್ಲಿಯ ಮುರುಘಾಮಠದಲ್ಲಿ ನಡೆದ ಪತ್ರಿಕಾಗೋಷ್ಠಿ ಈ ವಿಷಯ ತಿಳಿಸಿದ ಶ್ರೀಗಳು, ಇಲ್ಲಿಯ ಮುರುಘಾಮಠದಲ್ಲಿ ನೆಲೆಸಿರುವ ಶ್ರೀಮದಥಣಿ ಮುರುಘೇಂದ್ರ ಮಹಾಶಿವಯೋಗಿಗಳವರ 94 ನೇ ಜಾತ್ರಾ ಮಹೋತ್ಸವ ಪ್ರಯುಕ್ತ ಕೊಡಲಾಗುವ ಪ್ರಸಕ್ತ ಸಾಲಿನ ಪ್ರಶಸ್ತಿ ಇದಾಗಿದ್ದು, 10 ಗ್ರಾಂ ಚಿನ್ನದ ಫಲಕ, 25 ಸಾವಿರ ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ. ಫೆ.13 ರಂದು ಸಂಜೆ 7:00 ಗಂಟೆಗೆ ಪ್ರಶಸ್ತಿ ಪ್ರದಾನ ನೆರವೇರಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದು, ಡಾ.ತೋಂಟದ ಸಿದ್ದರಾಮ ಸ್ವಾಮೀಜಿ, ನಿಜಗುಣ ಪ್ರಭು ತೋಂಟದಾರ್ಯ ಸ್ವಾಮೀಜಿ ಸಾನಿಧ್ಯವಹಿಸಲಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಶಾಸಕ ಅರವಿಂದ ಬೆಲ್ಲದ ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.
ಫೆ.14ಕ್ಕೆ ರಥೋತ್ಸವ
ಶ್ರೀ ಮದಥಣಿ ಮುರುಘೇಂದ್ರ ಮಹಾಶಿವಯೋಗಿಗಳ 94 ನೇ ಜಾತ್ರಾ ಮಹೋತ್ಸವದ ಮಹಾ ರಥೋತ್ಸವ ಫೆ.14 ರಂದು ಸಂಜೆ ನೆರವೇರಲಿದ್ದು, ಉಳಿದಂತೆ ಜಾತ್ರಾ ಮಹೋತ್ಸವ ಪ್ರಯುಕ್ತ ಗ್ರಂಥ ಲೋಕಾರ್ಪಣೆ ಹಾಗೂ 2024 ರ ಶ್ರೀ ಮೃತ್ಯುಂಜಯ ಮಹಾಂತ ಪ್ರಶಸ್ತಿ ಪ್ರಧಾನ, ಶಿವಾನುಭ ಚಿಂಥನ, ವಚನ ನೃತ್ಯ ಹಾಗೂ ಗಾಯನವು ಜ.10 ರಿಂದ 14 ರವರೆಗೆ ಮುರಘಾಮಠದಲ್ಲಿ ಜರುಗಲಿವೆ ಎಂದರು.
ಫೆ.10 ರಂದು ಬೆಳಗ್ಗೆ 9 ಕ್ಕೆ ಅಗಡಿ ಶ್ರೀ ನಿಜಗುಣ ಶಿವಯೋಗಿ ಸ್ವಾಮಿಜಿ ಸಾನಿಧ್ಯದಲ್ಲಿ ಶ್ರೀ ಗುರುಸಿದ್ದ ಸ್ವಾಮೀಜಿ ಧ್ವಜಾರೋಹಣ ನೆರವೇರಿಸುವರು. ಶ್ರೀ ಪ್ರಶಾಂತ ದೇವರು ಸಮ್ಮುಖವಹಿಸುವರು. ಸಂಜೆ 7ಕ್ಕೆ ಜಾತ್ರಾ ಮಹೋತ್ಸವ ಉದ್ಘಾಟನೆ, ಚನ್ನಬಸವಣ್ಣನವರ ಕರಣ ಹಸಿಗೆ ವ್ಯಾಖ್ಯಾನ ಸಂಪುಟ ಲೋಕಾರ್ಪಣೆಯು ಮೂರಸಾವಿಮಠದ ಶ್ರೀ ಗುರುಸಿದ್ದ ರಾಜಯೋಗೇಂದ್ರ ಸ್ವಾಮಿಜಿ ಸಾನಿಧ್ಯದಲ್ಲಿ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಜಾತ್ರಾ ಮಹೋತ್ಸವ ಸಮಾರಂಭ ಉದ್ಘಾಟಿಸುವರು.
ಇಳಕಲ್ ಶ್ರೀ ಗುರು ಮಹಾಂತ ಸ್ವಾಮಿಜಿ ಸಾನಿಧ್ಯದಲ್ಲಿ ಶ್ರೀ ಗುರುಬಸವಲಿಂಗ ಸ್ವಾಮಿಜಿ ಗುರುವಂದನಾ ಕಾರ್ಯಕ್ರಮ ಜರುಗಲಿದೆ. ಶಿವಲೀಲಾ ವಿನಯ ಕುಲಕರ್ಣಿ ಅಧ್ಯಕ್ಷತೆ ವಹಿಸಲಿದ್ದು, ಸಭಾಪತಿ ಬಸವರಾಜ ಹೊರಟ್ಟಿ, ಉದ್ಯಮಿ ವಿಜಯ ಸಂಕೇಶ್ವರ, ಬಾಬಾಸಾಹೇಬ ಪಾಟೀಲ, ಈಶ್ವರ ಉಳ್ಳಾಗಡ್ಡಿ, ಸಿದ್ದನಗೌಡ ಪಾಟೀಲ ಅತಿಥಿಯಾಗಿ ಭಾಗವಹಿಸುವರು. ಬಿ.ವಿ.ಚಿಕ್ಕಮಠ ಇವರನ್ನು ಸನ್ಮಾನಿಸಲಾಗುವುದು ಎಂದರು.
ಫೆ.11 ರಂದು ಸಂಜೆ 7 ಕ್ಕೆ ಶಿವಾನುಭವ ಚಿಂಥನ-1 ಸಾನಿಧ್ಯವನ್ನು ಶ್ರೀ ಶಿವಬಸವ ಸ್ವಾಮಿಜಿ ಸಾನಿಧ್ಯವಹಿಸಲಿದ್ದು ಚನ್ನಬಸವ ಸ್ವಾಮಿಜಿ ಸಮ್ಮುಖವಹಿಸುವರು. ವಚನ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು ಕುರಿತು ಡಾ.ವೀಣಾ ಬಿರಾದಾರ ಉಪನ್ಯಾಸ ನೀಡುವರು, ಶಾಸಕರಾದ ಎಂ.ಆರ್.ಪಾಟೀಲ, ಪ್ರಸಾದ ಅಬ್ಬಯ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದು ಡಾ.ನಿರ್ಮಲಾ ಎಲಿಗಾರ. ಡಾ.ಶಂಕರ ಶಿರೂರ, ರಾಜಶೇಖರ ಕಂಪ್ಲಿ ಅವರನ್ನು ಸನ್ಮಾನಿಸಲಾಗುವದು ಎಂದರು.
ಜ.12 ಸಂಜೆ 07 ಕ್ಕೆ ನಿಡಸೂಸಿ ಮಠದ ಶ್ರೀ ಪಂಚಮ ಶಿವಲಿಂಗೇಶ್ವರ ಸ್ವಾಮಿಜಿ ಸಾನಿಧ್ಯದಲ್ಲಿ ಶಿವಾನುಭವ ಚಿಂಥನ 2 ನಡೆಯಲಿದೆ. ಶ್ರೀ ನೀಲಕಂಠ ಸ್ವಾಮಿಜಿ ಸಮ್ಮುಖದಲ್ಲಿ ಶಿವಕುಮಾರ ಪಾಟೀಲ ಅವರನ್ನು ಸನ್ಮಾನಿಸಲಾಗುವುದು. ಶಿವಲೀಲಾ ಕುಲಕರ್ಣಿ ಅಧ್ಯಕ್ಷತೆವಹಿಸಲಿದ್ದು ಜಾನಪದದಲ್ಲಿ ಶರಣರು ಕುರಿತು ಪ್ರೊ. ಶಕುಂತಲಾ ಸಿಂಧೂರ ಉಪನ್ಯಾಸ ನೀಡುವರು. ಮಾಜಿ ಮಂತ್ರಿ ಜಗದೀಶ ಶೆಟ್ಟರ, ಮಹಾಪೌರ ವೀಣಾ ಭಾರದ್ವಾಡ ಅತಿಥಿಯಾಗಿ ಪಾಲ್ಗೊಳ್ಳುವರು.
ಫೆ.14 ರಂದು ಬೆಳಿಗ್ಗೆ 04 ಗಂಟೆಗೆ ಲಿಂಗದೀಕ್ಷೆ ಕಾರ್ಯಕ್ರಮದಲ್ಲಿ ಶ್ರೀ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಜಿ, ಚನ್ನಬಸವ ಸ್ವಾಮಿಜಿ ಸಾನಿಧ್ಯವಹಿಸುವರು ವಿವಿಧ ಮಠಾಧೀಶರು ಉಪಸ್ಥಿತರಿರುವರು. ಸಂಜೆ 4 ಕ್ಕೆ ಶ್ರೀ ಮದಥಣಿ ಮುರುಘೇಂದ್ರ ಮಹಾಶಿವಯೋಗಿಗಳವರ ರಥೋತ್ಸವವು ನಡೆಯಲಿದ್ದು, ವಿವಿಧ ಮಠಾಧೀಶರು ಸಮ್ಮುಖವಹಿಸುವರು. ಈ ಸಮಾರಂಭದಲ್ಲಿ ಶ್ರದ್ಧಾಭಕ್ತಿಯಿಂದ ಸಕಲ ಸದ್ಭಕ್ತರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.