Dharwad: ರಸ್ತೆ ದುರಸ್ತಿ ವೇಳೆ ರಾಮ,ಲಕ್ಷ್ಮಣ ರೂಪಗಳಿರುವ ವೀರಗಲ್ಲು ಪತ್ತೆ!
Team Udayavani, Jan 19, 2024, 7:59 PM IST
ಧಾರವಾಡ: ಅಯೋಧ್ಯೆಯಲ್ಲಿ ಜ.22 ರಂದು ಶ್ರೀರಾಮ ಮಂದಿರ ಉದ್ಘಾಟನೆಗೊಳ್ಳಲು ಎರಡೇ ದಿನ ಬಾಕಿ ಉಳಿದಿದೆ. ಇದೇ ಸಂದರ್ಭದಲ್ಲಿ ಸಮೀಪದ ಕಲಿಕೇರಿ ಗ್ರಾಮದ ವೀರಗಲ್ಲಿನಲ್ಲಿ ಶ್ರೀರಾಮ ಮತ್ತು ಲಕ್ಷ್ಮಣರಂತೆ ಬಿಲ್ಲು ಹಿಡಿದಿರುವ ವೀರಗಲ್ಲೊಂದು ಪತ್ತೆಯಾಗಿದೆ.
ಗ್ರಾಮದ ಹೊರಭಾಗದಲ್ಲಿ ಕೆರೆಯ ದಂಡೆಯಲ್ಲಿ ಈ ಕಲ್ಲು ಪಾಳು ಜಾಗದಲ್ಲಿ ಬಿದ್ದಿತ್ತು. ಗ್ರಾಮಸ್ಥರು ಜೆಸಿಬಿ ಮೂಲಕ ಕಚ್ಚಾ ರಸ್ತೆ ದುರಸ್ತಿ ನಡೆಸುತ್ತಿದ್ದಾಗ ದೊಡ್ಡ ಕಲ್ಲು ಪತ್ತೆಯಾಗಿದೆ. ಈ ಕಲ್ಲಿನಲ್ಲಿ ರಾಮ, ಸೀತೆ, ಲಕ್ಷ್ಮಣ, ಆಂಜನೇಯ ರೂಪಗಳಿವೆ.
ಇದಲ್ಲದೇ ಮೇಲ್ಭಾಗದಲ್ಲಿ ಶಿವಪಾರ್ವತಿ ಕೆತ್ತನೆ, ಕೆಳಭಾಗದಲ್ಲಿ ಶ್ರೀರಾಮನ ಕೆತ್ತನೆಯಿದೆ. ವಿಗ್ರಹ ಕಂಡು ಅಚ್ಚರಿಗೊಂಡ ಸ್ಥಳೀಯರು ವಿಗ್ರಹಕ್ಕೆ ಪೂಜೆ ಸಲ್ಲಿಸಿದ್ದಲ್ಲದೇ, ಜ.22 ರಂದು ಸೋಮವಾರ ಕಲಿಕೇರಿ ಗ್ರಾಮದಲ್ಲಿಯೇ ಈ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲು ನಿರ್ಧರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.