ಲಾಕ್‌ಡೌನ್ ಇನ್ನಷ್ಟು ಬಿಗಿ: ಜಿಲ್ಲಾಧಿಕಾರಿ ದೀಪಾ
ಮನೆಗಳಿಗೆ ಅಗತ್ಯ ವಸ್ತುಗಳ ತಲುಪಿಸಲು ಪ್ರತ್ಯೇಕ ಸಹಾಯವಾಣಿಮಾರಾಟಗಾರರಿಗೆ ಪಾಸ್ ವ್ಯವಸ್ಥೆ
Team Udayavani, Apr 11, 2020, 11:44 AM IST
ಧಾರವಾಡ: ಹು-ಧಾ ಮುದ್ರಣ-ವಿದ್ಯುನ್ಮಾನ ಮಾಧ್ಯಮಗಳ ಬ್ಯೂರೋ ಮುಖ್ಯಸ್ಥರೊಂದಿಗೆ ನಡೆದ ಸಭೆಯಲ್ಲಿ ಡಿಸಿ ಚೋಳನ್ ಮಾತನಾಡಿದರು.
ಧಾರವಾಡ: ಪೊಲೀಸ್ ಇಲಾಖೆ ಸೇರಿದಂತೆ ಇತರೆ ಇಲಾಖೆಗಳ ಮೂಲಕ ಜಿಲ್ಲೆಯಲ್ಲಿ ಲಾಕ್‌ಡೌನ್ ಇನ್ನಷ್ಟು ಬಿಗಿಗೊಳಿಸಲಾಗುವುದು ಎಂದು ಡಿಸಿ ದೀಪಾ ಚೋಳನ್ ಹೇಳಿದರು.
ನಗರದ ಡಿಸಿ ಕಚೇರಿಯ ನೂತನ ಸಭಾಂಗಣದಲ್ಲಿ ಹುಬ್ಬಳ್ಳಿ ಧಾರವಾಡದಲ್ಲಿರುವ ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳ ಬ್ಯೂರೋ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಔಷಧ, ತರಕಾರಿ, ದಿನಸಿ ಸಾಮಾನು ಸೇರಿದಂತೆ ಎಲ್ಲ ಅಗತ್ಯ ವಸ್ತುಗಳನ್ನು ಅವರ ಮನೆಗಳಿಗೆ ತಲುಪಿಸಲು ಪ್ರತ್ಯೇಕ ಸಹಾಯವಾಣಿ, ಮಾರಾಟಗಾರರಿಗೆ ಪಾಸ್ ವ್ಯವಸ್ಥೆ ಮಾಡಲಾಗಿದೆ ಎಂದರು.
ಜಿಲ್ಲೆಯಲ್ಲಿ ವಲಸಿಗರು, ನಿರಾಶ್ರಿತರು, ಕಾರ್ಮಿಕರು ಸೇರಿದಂತೆ ಸುಮಾರು 3 ಸಾವಿರ ನಿರಾಶ್ರಿತರಿಗೆ ಜಿಲ್ಲಾಡಳಿತದಿಂದ ಉಚಿತವಾಗಿ ಊಟ, ಉಪಹಾರ, ವಸತಿ, ಔಷಧ ಸೇರಿದಂತೆ ಅಗತ್ಯ ಸೌಲಭ್ಯ ನೀಡಲಾಗಿದೆ. ಮಾನಸಿಕ ಆರೋಗ್ಯ ಕಾಪಾಡಲು ಆನ್‌ಲೈನ್ ಸಹಾಯವಾಣಿ ಹಾಗೂ ಡಿಮ್ಹಾನ್ಸ್ ವೈದ್ಯರಿಂದ ಚಿಕಿತ್ಸಾ ಶಿಬಿರ ಮಾಡಲಾಗುತ್ತಿದೆ ಎಂದು ತಿಳಿಸಿದರು. ಕೆಲವು ಖಾಸಗಿ ವ್ಯಕ್ತಿಗಳು ಸಾಮಾಜಿಕ ಅಂತರ ಕಾಪಾಡದೇ ಸ್ಲಮ್ ಹಾಗೂ ಇತರ ಪ್ರದೇಶಗಳಲ್ಲಿ ಊಟ, ಉಪಹಾರ, ದಿನಸಿ ವಿತರಿಸುತ್ತಿರುವುದು ಗಮನಕ್ಕೆ ಬಂದಿದ್ದು, ಇಂತಹ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಜಿಲ್ಲಾಡಳಿತ ಸ್ಥಾಪಿಸಿರುವ ಸಂಗ್ರಹಣಾ ಕೇಂದ್ರಕ್ಕೆ ತಲುಪಿಸಲು ಸೂಚಿಸಲಾಗಿದೆ. ಸಹಾಯ ಮಾಡುವ ನೆಪದಲ್ಲಿ ಅನುಮತಿ ಇಲ್ಲದೆ ಯಾರೇ ಸಂಚರಿಸಿದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದರು.
ತರಕಾರಿ, ಹಣ್ಣು ಮಾರಾಟಗಾರರು ಆರೋಗ್ಯ ಸುರಕ್ಷತಾ ಕ್ರಮ ಅನುಸರಿಸುತ್ತಿಲ್ಲದಿರುವ ಕುರಿತು ಮತ್ತು ಪ್ರಮುಖ ರಸ್ತೆ ಹೊರತುಪಡಿಸಿ ಓಣಿ, ಗ್ರಾಮಗಳಲ್ಲಿ ಜನರು ಅಲ್ಲಲ್ಲಿ ಗುಂಪು ಸೇರುತ್ತಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಗಮನ ಸೆಳೆದರು. ಪೊಲೀಸ್ ಇಲಾಖೆ ಅ ಧಿಕಾರಿಗಳಿಗೆ ಈ ಕುರಿತು ನಿರ್ದೇಶನ ನೀಡಿ ಸರಿಪಡಿಸುವುದಾಗಿ ತಿಳಿಸಿದರು. ವಿವಿಧ ಮಾಧ್ಯಮಗಳ ಸ್ಥಾನಿಕ ಮುಖ್ಯಸ್ಥರು, ಪ್ರಧಾನ ವರದಿಗಾರರು ಮಾತನಾಡಿ, ಪ್ರಚಲಿತ ಸಮಸ್ಯೆಗಳು ಮತ್ತು ಅವುಗಳ ಸೂಕ್ತ ನಿರ್ವಹಣೆ, ಪರಿಹಾರಕ್ಕಾಗಿ ಸಲಹೆ, ಅಭಿಪ್ರಾಯಗಳನ್ನು ನೀಡಿದರು.
ಪಾಲಿಕೆ ಆಯುಕ್ತ ಡಾ|ಸುರೇಶ ಇಟ್ನಾಳ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪ ವಿಭಾಗಾಧಿಕಾರಿ ಮಹಮ್ಮದ ಜುಬೇರ, ಜಿಲ್ಲಾ ಆರೋಗ್ಯಾಧಿಕಾರಿ ಡಾ|ಯಶವಂತ ಮದೀನಕರ, ಡಾ| ಸುಜಾತಾ ಹಸವಿಮಠ, ಡಾ|ಶಶಿ ಪಾಟೀಲ, ಡಾ| ಕೆ.ಎಂ.ತನುಜಾ, ತಹಶೀಲ್ದಾರ್ ಶಶಿಧರ ಮಾಡ್ಯಾಳ, ಪ್ರಕಾಶ ನಾಶಿ ಸಭೆಯಲ್ಲಿ ಇದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿದೇಶಕ ಮಂಜುನಾಥ ಡೊಳ್ಳಿನ ಸ್ವಾಗತಿಸಿದರು. ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.