19ಕ್ಕೆ ಪಲ್ಸ್‌ ಪೋಲಿಯೋ ಅಭಿಯಾನ

2,11,491 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ: ಡಿಸಿ ಚೋಳನ್‌

Team Udayavani, Jan 9, 2020, 6:03 PM IST

9-January-35

ಧಾರವಾಡ: ಜ.19ರಂದು ಜರುಗುವ ಪಲ್ಸ್‌ ಪೋಲಿಯೋ ಅಭಿಯಾನದಲ್ಲಿ ಸ್ಲಂ ಪ್ರದೇಶ, ಗ್ರಾಮೀಣ ಮತ್ತು ಹೆಚ್ಚು ಜನವಸತಿ ಇರುವ ಪ್ರದೇಶಗಳನ್ನು ಕೇಂದ್ರೀಕರಿಸಿ, ಎಲ್ಲ ಮಕ್ಕಳಿಗೂ ಪೋಲಿಯೋ ಹನಿ ಹಾಕಬೇಕು ಎಂದು ಡಿಸಿ ದೀಪಾ ಚೋಳನ್‌ ಹೇಳಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಪಲ್ಸ್‌ ಪೋಲಿಯೋ ಟಾಸ್ಕ್ ಫೋರ್ಸ್ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜ.19ರಂದು ಲಸಿಕಾ ಕೇಂದ್ರಗಳಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಗುತ್ತದೆ. ಜ.20, 21ರಂದು ಗ್ರಾಮೀಣ ಪ್ರದೇಶದ ಹಾಗೂ ಜ.20,21, 22ರಂದು ನಗರ ಪ್ರದೇಶದ ಮನೆ-ಮನೆಗೆ ತೆರಳಿ ಮಕ್ಕಳಿಗೆ ಆರೋಗ್ಯ ಕಾರ್ಯಕರ್ತೆಯರು ಪೋಲಿಯೋ ಲಸಿಕೆ ಹಾಕಲಿದ್ದಾರೆ. ಪ್ರಸ್ತುತ ಅಭಿಯಾನದಲ್ಲಿ 5 ವರ್ಷದೊಳಗಿರುವ 2,11,491 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. 897 ಲಸಿಕಾ ಕೇಂದ್ರ, 55 ಸಂಚಾರಿ ತಂಡಗಳು, 95 ಸಾಗಾಣಿಕೆ ತಂಡಗಳನ್ನು ರಚಿಸಲಾಗಿದೆ. 196 ಮೇಲ್ವಿಚಾರಕರು ಸೇರಿದಂತೆ 3,816 ಲಸಿಕಾ ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ. ನಗರ ಮತ್ತು ಗ್ರಾಮೀಣ ಸೇರಿದಂತೆ ಒಟ್ಟು 4,19,713 ಮನೆಗಳಿಗೆ ಭೇಟಿ ನೀಡಿ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದರು.

ಗ್ರಾಮೀಣ ಮತ್ತು ಕೊಳಚೆ ಪ್ರದೇಶದ ಮಕ್ಕಳಿಗೆ ಆದ್ಯತೆ ನೀಡಿ, ಪೋಲಿಯೋ ಹಾಕಬೇಕು. ಬಸ್‌ ನಿಲ್ದಾಣ, ರೈಲು ನಿಲ್ದಾಣ ಸೇರಿದಂತೆ ಹೆಚ್ಚು ಜನದಟ್ಟಣೆ ಇರುವ ಪ್ರದೇಶಗಳಲ್ಲಿನ ಮಕ್ಕಳಿಗೆ ಸಂಚಾರಿ ತಂಡಗಳ ಮೂಲಕ ಪಲ್ಸ್‌ ಪೋಲಿಯೋ ಹಾಕಿಸಬೇಕು. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಮಕ್ಕಳಿಗೆ ಪೋಲಿಯೋವನ್ನು ಹಾಕಲು ಸಹಾಯ ಮಾಡಬೇಕು. ಸಾಮಾಜಿಕ ಜಾಲತಾಣಗಳ ಮೂಲಕ ಪಲ್ಸ್‌ ಪೋಲಿಯೋ ಕುರಿತು ಜನರಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕು ಎಂದರು.

ಪಲ್ಸ್‌ ಪೋಲಿಯೋ ಕಾರ್ಯಕ್ರಮ ಯಶಸ್ವಿಗೊಳಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹೆಸ್ಕಾಂ, ರೋಟರಿ ಮತ್ತು ಇತರೆ ಸಂಘ-ಸಂಸ್ಥೆಗಳು, ರೈಲ್ವೆ ಮತ್ತು ಕೆಎಸ್‌ಆರ್‌ಟಿಸಿ, ನಗರಸಭೆ ಮತ್ತು ಪಟ್ಟಣ ಪಂಚಾಯತಿ, ಪಂಚಾಯತ್‌ ರಾಜ್‌ ಸಂಸ್ಥೆಗಳು, ಪೊಲೀಸ್‌ ಇಲಾಖೆಗಳಿಗೆ ವಹಿಸಿದ ಜವಾಬ್ದಾರಿಗಳನ್ನುಸಮರ್ಪಕವಾಗಿ ನಿರ್ವಹಿಸಬೇಕು ಎಂದರು.
ಜಿಪಂ ಸಿಇಒ ಡಾ| ಬಿ.ಸಿ ಸತೀಶ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಯಶವಂತ ಮದೀನಕರ, ಜಿಲ್ಲಾ ಆರ್‌.ಸಿ.ಎಚ್‌ ಅಧಿಕಾರಿ ಡಾ| ಎಸ್‌.ಎಂ.ಹೊನಕೇರಿ, ಡಾ| ಸಿದ್ದಲಿಂಗಯ್ಯ ಸೇರಿದಂತೆ
ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.