ಪ್ರಹ್ಲಾದ ವಿದ್ಯಾರ್ಥಿ ನಿಲಯಕ್ಕೆ  ವಜ್ರ ಮಹೋತ್ಸವ ಸಂಭ್ರಮ

Team Udayavani, Jul 12, 2018, 4:48 PM IST

12-july-20.jpg

ಧಾರವಾಡ: ಮಾಳಮಡ್ಡಿಯ ಪ್ರಹ್ಲಾದ ವಿದ್ಯಾರ್ಥಿ ನಿಲಯದ ವಜ್ರ ಮಹೋತ್ಸವ ಕಾರ್ಯಕ್ರಮ ಶ್ರೀ ವನವಾಸಿ ರಾಮಮಂದಿರದಲ್ಲಿ ಜು. 14ರಂದು ಸಂಜೆ 5 ಗಂಟೆಗೆ ನಡೆಯಲಿದೆ ಎಂದು ಪ್ರಹ್ಲಾದ ವಿದ್ಯಾರ್ಥಿ ನಿಲಯ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಸ್‌.ಆರ್‌. ಕೌಲಗುಡ್ಡ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಅಖಿಲ ಭಾರತ ಮಧ್ವ ಮಹಾ ಮಂಡಳ, ಪ್ರಹ್ಲಾದ ವಿದ್ಯಾರ್ಥಿ ನಿಲಯ ಪ್ರತಿಷ್ಠಾನ, ಪ್ರಹ್ಲಾದ ವಿದ್ಯಾರ್ಥಿ ನಿಲಯ ಹಿಂದಿನ ವಿದ್ಯಾರ್ಥಿಗಳ ಸಂಘ ಹಾಗೂ ನಿಲಯ ಫೌಂಡೇಷನ್‌ ಸಹಯೋಗದಲ್ಲಿ ನಡೆಯುವ ಈ ಕಾರ್ಯಕ್ರಮದ ಸಾನ್ನಿಧ್ಯವನ್ನು ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಹಾಗೂ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ವಹಿಸಲಿದ್ದಾರೆ ಎಂದರು.

ಮುಖ್ಯ ಅತಿಥಿಯಾಗಿ ಸಂಶೋಧಕ ಡಾ| ಪ್ರಭಂಜನಾಚಾರ್ಯ ವ್ಯಾಸನಕೆರೆ, ಶಿಕ್ಷಣ ತಜ್ಞ ಡಾ| ಗುರುರಾಜ ಕರ್ಜಗಿ, ಧಾರವಾಡ ತಾಲೂಕಾ ಬ್ರಾಹ್ಮಣ ಸಭಾದ ಅಧ್ಯಕ್ಷ ರಾಜೀವ ಪಾಟೀಲ ಕುಲಕರ್ಣಿ ಆಗಮಿಸಲಿದ್ದಾರೆ. ಅಖಿಲ ಭಾರತ ಮಧ್ವ ಮಹಾಮಂಡಳದ ಪ್ರಧಾನ ಕಾರ್ಯದರ್ಶಿ ಡಾ| ಎಚ್‌.ಎನ್‌. ನಾರಾಯಣರಾವ್‌, ವಿ.ಆರ್‌. ಮಠದ ಸೇರಿದಂತೆ ನಿಲಯದ ಹಳೆಯ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಸಭಾ ಕಾರ್ಯಕ್ರಮಕ್ಕೂ ಮುನ್ನ ಸಂಜೆ 4 ಗಂಟೆಗೆ ಶ್ರೀಗಳ ಶೋಭಾಯಾತ್ರೆ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು.

ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರು 1955ರಲ್ಲಿ ಪ್ರಹ್ಲಾದ ವಿದ್ಯಾರ್ಥಿ ನಿಲಯ ಸ್ಥಾಪಿಸುವ ನಿರ್ಣಯ ಕೈಗೊಂಡಾಗ ಅವರಿಗೆ ಕೇವಲ 24 ವರ್ಷವಾಗಿತ್ತು. ಶ್ರೀಗಳ ಸಂಕಲ್ಪದಿಂದ ನಿಲಯ ಸ್ಥಾಪನೆಗೊಂಡು ಇದೀಗ ವಜ್ರ ಮಹೋತ್ಸವ ಆಚರಣೆ ಸಂಭ್ರಮದಲ್ಲಿದೆ. ಶ್ರೀಗಳು ಸ್ಥಾಪಿಸಿದ ಮೊದಲ ಸಂಸ್ಥೆ ಇದಾಗಿದೆ. ಈ ನಿಲಯದಲ್ಲಿ 1200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಳಿದುಕೊಂಡು ವಿದ್ಯೆ ಪಡೆದುಕೊಂಡಿದ್ದಾರೆ. ಪ್ರಭಂಜನಾಚಾರ್ಯ ವ್ಯಾಸನಕೆರೆ, ಪಂ| ನಾರಾಯಣಾಚಾರ್ಯ ಧೂಳಖೇಡ ಸೇರಿದಂತೆ ಮೊದಲಾದ ಶ್ರೇಷ್ಠರು ಈ ನಿಲಯದ ವಿದ್ಯಾರ್ಥಿಗಳಾಗಿದ್ದರು ಎಂಬುದು ಹೆಮ್ಮೆಯ ವಿಷಯವಾಗಿದೆ ಎಂದರು.

ನಿಲಯ ಫೌಂಡೇಶನ್‌: ಪ್ರಹ್ಲಾದ ವಿದ್ಯಾರ್ಥಿ ನಿಲಯದಲ್ಲಿ ಈ 60 ವರ್ಷಗಳಲ್ಲಿ ಓದಿ ದೇಶ-ವಿದೇಶಗಳಲ್ಲಿ ನೆಲೆಸಿರುವ ಹಿಂದಿನ ವಿದ್ಯಾರ್ಥಿಗಳಲ್ಲಿ ಕೆಲವರು ಕೂಡಿಕೊಂಡು 15 ವರ್ಷದ ಹಿಂದೆ ‘ನಿಲಯ ಫೌಂಡೇಶನ್‌’ ಎಂಬ ಸಂಸ್ಥೆ ಹುಟ್ಟು ಹಾಕಿದರು. ಇಂದು ಈ ಸಂಸ್ಥೆ ಹೆಮ್ಮರವಾಗಿ ಬೆಳೆದು ನಿಂತಿದೆ. ಪ್ರತಿ ವರ್ಷ ನಿಲಯಕ್ಕೆ 1500 ರೂ. ನೀಡುವುದರ ಮೂಲಕ ಅಕ್ಷಯ ಪಾತ್ರೆ ಯೋಜನೆಯಲ್ಲಿ ಭಾಗವಹಿಸಬಹುದು. ಇದರಿಂದ ನಿಲಯದ ವಿದ್ಯಾರ್ಥಿಗಳ ಮತ್ತು ಅವರ ಪಾಲಕರ ಆರ್ಥಿಕ ಹೊರೆ ಕಡಿಮೆಯಾಗಲಿದೆ. ದಾನಿಗಳು ಸೂಚಿಸಿದ ದಿನದಂದು ಈ ಹಣ ಉಪಯೋಗಿಸಲಾಗುತ್ತದೆ ಎಂದು ಡಾ| ಕೌಲಗುಡ್ಡ ತಿಳಿಸಿದರು.

ಹಳೇ ವಿದ್ಯಾರ್ಥಿ ಹ.ವೆ. ಕಾಖಂಡಕಿ ಮಾತನಾಡಿ, ಸದ್ಯ ನಿಲಯದಲ್ಲಿ 60 ವಿದ್ಯಾರ್ಥಿಗಳಿದ್ದು, ಇನ್ನೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ನಿಲಯ ವಿಸ್ತರಣೆಗೆ ಯೋಜನೆ ರೂಪಿಸಲಾಗಿದೆ. ವಜ್ರ ಮಹೋತ್ಸವ ಕಾರ್ಯಕ್ರಮದ ಕುರಿತು ಹೆಚ್ಚಿನ ಮಾಹಿತಿಗಾಗಿ ಗುರುರಾವ್‌ ಕುಲಕರ್ಣಿ (ಮೊ:9980541495), ವಿದ್ಯಾಸಾಗರ ದೀಕ್ಷಿತ (ಮೊ:8310372548), ಮಹೇಶ ದೇಶಪಾಂಡೆ (ಮೊ:9448064123), ರಂಗನಾಥ ಯಾದವಾಡ (ಮೊ:9448049909) ಆನಂದತೀರ್ಥ ಗುತ್ತಲ (ಮೊ:9845968032), ಆರ್‌.ವೈ. ಕಟ್ಟಿ (ಮೊ: 9448821802) ಸಂಪರ್ಕಿಬಹುದು ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ನಿಲಯ ಧರ್ಮದರ್ಶಿ ಕೆ.ಆರ್‌. ದೇಶಪಾಂಡೆ, ವಿದ್ಯಾಸಾಗರ ದೀಕ್ಷಿತ, ಸಮೀರ ಜೋಶಿ ಇದ್ದರು.

ಟಾಪ್ ನ್ಯೂಸ್

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಮತ್ತೆ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಮತ್ತೆ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.