ವಿನಾಕಾರಣ ತೇಜೋವಧೆ ಮಾಡುವುದು ಸರಿಯಲ್ಲ: ಬಿಎಸ್ ವೈ ಕೇಸ್ ಬಗ್ಗೆ ದಿನೇಶ್ ಗುಂಡೂರಾವ್
Team Udayavani, Mar 15, 2024, 12:37 PM IST
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ದಾಖಲಾಗಿರುವ ಪೋಕ್ಸೋ ಪ್ರಕರಣದ ಬಗ್ಗೆ ಮಾತನಾಡುವುದು ಸರಿಯಲ್ಲ. ಪ್ರಕರಣ ದಾಖಲಾದ ತಕ್ಷಣ ದೋಷಿ, ನಿರ್ದೋಷಿ ಎಂದು ಹೇಳುವುದು ಸರಿಯಲ್ಲ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ. ಸರಿಯಾಗಿ ತನಿಖೆಯಾಗಬೇಕು. ವಿನಾಕಾರಣ ಯಾರನ್ನೂ ತೇಜೋವಧೆ ಮಾಡುವುದು ಸರಿಯಲ್ಲ ಎಂದರು.
ರಾಜ್ಯದಲ್ಲಿ ನಾವು 20 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ. ಇದೀಗ ಸಿಎಎ ತೆಗೆದುಕೊಂಡು ಬಂದಿದ್ದಾರೆ. ಕಳೆದ 10 ವರ್ಷದಲ್ಲಿ ಇವರ ಅಭಿವೃದ್ಧಿ ಶೂನ್ಯ. ಹೀಗಾಗಿಯೇ ಚುನಾವಣೆ ಸಂದರ್ಭದಲ್ಲಿ ಇಂತಹ ವಿಷಯಗಳನ್ನು ತಂದು ಜನರ ಮನಸ್ಸನ್ನು ಬೇರೆಡೆಗೆ ಸೆಳೆಯುವ ಕೆಲಸ ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಮೋದಿ ಅವರು ಪ್ರಧಾನಿ ಆಗುವರೆಗೂ ದೇಶ ಇರಲಿಲ್ಲವೋ ಅಥವಾ ದೇಶದಲ್ಲಿ ಅಭಿವೃದ್ಧಿ ಆಗಿರಲಿಲ್ಲವೋ? ಇದೀಗ ಸ್ವರ್ಗ ಆಗಿದೆಯಾ? ಸುಮ್ಮನೆ ಜನರಿಗೆ ಮಂಕು ಬೂದಿ ಎರಚಿದ್ದಾರೆ. ಇದೀಗ ಬಹುತೇಕರಿಗೆ ಇವರ ನಿಜವಾದ ಬಣ್ಣ ಗೊತ್ತಾಗಿದೆ. ನಾವು ಹೇಳಿದಂತೆ ಮಾಡಿದ್ದೇವೆ. ನೀಡಿದ ಭರವಸೆಗಳನ್ನು ಈಡೇರಿಸಿದ್ದೇವೆ. ಬಿಜೆಪಿ ಸಂಸದರು ನಮ್ಮ ಪಕ್ಷದ ಅಧ್ಯಕ್ಷರ ಜೊತೆಗೆ ಸಂಪರ್ಕದಲ್ಲಿರಬಹುದು. ಈ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದರು.
ದೇಶದ ಜನರ ಬಗ್ಗೆ ಇವರಿಗೆ ಕಾಳಜಿಯಿದ್ದರೆ 1000 ರೂ. ದರ ಇಳಿಸಬೇಕಿತ್ತು. ಸಿಕ್ಕಾಪಟ್ಟೆ ದರ ಏರಿಸಿ ಈಗ 100 ರೂ. ಇಳಿಸಿದ್ದಾರೆ. ಇದು ಚುನಾವಣಾ ಗಿಮಿಕ್ ವಿನಃ ಜನರ ಕಾಳಜಿಯಿಲ್ಲ. ಪ್ರಧಾನಿ ಮೋದಿಯವರಿಗೆ ನೈತಿಕತೆಯಿದ್ದರೆ 1000 ರೂ. ಇಳಿಸಬೇಕು ಎಂದರು.
ರಾಜ್ಯದಲ್ಲಿ ಕ್ಯಾಂಡಿ ನಿಷೇಧ ಕುರಿತು ಇಗಾಗಲೇ ಮಾಹಿತಿ ಕೊಟ್ಟಿದ್ದೇವೆ. ಕಲರ್ ಬಳಸಬಾರದು ಎಂದು ಹೇಳಲಾಗಿದೆ. ಈ ವಿಚಾರದಲ್ಲಿ ಜನರು ಕೂಡ ಜಾಗೃತರಾಗಬೇಕು. ಒಂದು ವೇಳೆ ನಿಷೇಧಿತ ಬಣ್ಣ ಬಳಿಸಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.