ತಜ್ಞರೊಂದಿಗೆ ಚರ್ಚಿಸಿ ಸೂಕ್ತ ಶಿಫಾರಸು
ಕಟ್ಟಡ-ಅಗ್ನಿ ಸುರಕ್ಷತಾ ಪ್ರಮಾಣ ಪತ್ರಗಳ ಅಗತ್ಯತೆ ಕುರಿತು ಸರಳೀಕೃತ ಪರಿಹಾರ :ಸಂಕನೂರ
Team Udayavani, Jul 10, 2021, 4:34 PM IST
ಧಾರವಾಡ: ರಾಜ್ಯದ ಖಾಸಗಿ ಅನುದಾನಿತ, ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳ ಕಟ್ಟಡ ಮತ್ತು ಅಗ್ನಿ ಸುರಕ್ಷತಾ ಪ್ರಮಾಣ ಪತ್ರಗಳ ಅಗತ್ಯತೆ ಕುರಿತು ಸರಳೀಕೃತ ಪರಿಹಾರ ಕಂಡುಕೊಂಡು, ಕಾನೂನು ತಜ್ಞರೊಂದಿಗೆ ಚರ್ಚಿಸಿ ಸೂಕ್ತ ಶಿಫಾರಸು ಮಾಡಲಾಗುವುದು ಎಂದು ಖಾಸಗಿ ಶಾಲೆ, ಕಾಲೇಜುಗಳ ಕಟ್ಟಡ ಸುರಕ್ಷತಾ ಪ್ರಮಾಣ ಪತ್ರದ ಅಗತ್ಯತೆ ಕುರಿತ ಪರಿಶೀಲನಾ ಸಮಿತಿ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಎಸ್.ವಿ ಸಂಕನೂರ ಹೇಳಿದರು.
ನಗರದ ಜಿಪಂ ಸಭಾಂಗಣದಲ್ಲಿ ಕಲಬುರ್ಗಿ ಹಾಗೂ ಬೆಳಗಾವಿ ಕಂದಾಯ ವಿಭಾಗಗಳ ವ್ಯಾಪ್ತಿಯ ಖಾಸಗಿ ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳ ಶಿಕ್ಷಣ ಸಂಸ್ಥೆಗಳ ಪದಾ ಧಿಕಾರಿಗಳಿಂದ ಅಹವಾಲು ಸ್ವೀಕಾರ ಹಾಗೂ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸುಪ್ರೀಂಕೋರ್ಟ್ ತೀರ್ಪಿನ ಅಡಿ-ಎನ್‌ಬಿಸಿ ನಿಯಮಗಳನ್ವಯ ರಾಜ್ಯದ ಖಾಸಗಿ ಅನುದಾನಿತ, ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಟ್ಟಡ ಮತ್ತು ಅಗ್ನಿ ಸುರಕ್ಷತಾ ಪ್ರಮಾಣ ಪತ್ರ ಒದಗಿಸಬೇಕಿದೆ. ಕಾನೂನು ಚೌಕಟ್ಟಿನಲ್ಲಿ ಇದಕ್ಕೆ ಸೂಕ್ತ ಪರಿಹಾರ ಕಂಡುಕೊಂಡು ಖಾಸಗಿ ಶಿಕ್ಷಣ ಸಂಸ್ಥಗಳ ಹಿತ ಕಾಪಾಡಲು ಶಿಫಾರಸು ಮಾಡಿ ವರದಿ ಸಲ್ಲಿಸಲಾಗುವುದು. ತಾಲೂಕು ಮಟ್ಟದಲ್ಲಿಯೇ ಪ್ರಮಾಣ ಪತ್ರ ನೀಡುವಂತೆ ವ್ಯವಸ್ಥೆ ವಿಕೇಂದ್ರಿಕರಣ ಮಾಡಲಾಗುವುದು. ಬೆಂಗಳೂರಿನಲ್ಲಿ ಪುನಃ ಸಭೆ ನಡೆಸಿ ಮುಂದಿನ ಹಂತಗಳನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದರು.
ಕಟ್ಟಡ ಸುರಕ್ಷತೆ-ಅಗ್ನಿ ಸುರಕ್ಷತೆ ಕುರಿತು ಸುಪ್ರೀಂಕೋರ್ಟ್ ನೀಡಿದ ತೀರ್ಪುಗಳನ್ನು ಮತ್ತು ಶಿಕ್ಷಣ ಇಲಾಖೆ ಹೊರಡಿಸಿದ ಎಲ್ಲಾ ಸುತ್ತೋಲೆಗಳನ್ನು ಪರಿಶೀಲಿಸಲಾಗಿದೆ. ರಾಜ್ಯಾದ್ಯಂತ ಖಾಸಗಿ ಅನುದಾನಿತ, ಅನುದಾನ ರಹಿತ ಶಾಲಾ, ಕಾಲೇಜುಗಳ ಆಡಳಿತ ಮಂಡಳಿಗಳ ಪದಾ ಧಿಕಾರಿಗಳಿಂದ ಮನವಿ ಸ್ವೀಕರಿಸಲಾಗುತ್ತಿದೆ. ಈಗ ನಡೆದ ಕಲಬುರ್ಗಿ-ಬೆಳಗಾವಿ ವಿಭಾಗದ ಸಭೆಯಲ್ಲಿ ಉತ್ತಮ ಸಂಖ್ಯೆಯಲ್ಲಿ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿ ಸಲಹೆ ನೀಡಿ, ಅಹವಾಲು ಸಲ್ಲಿಸಿದ್ದಾರೆ.
ಖಾಸಗಿ, ಗ್ರಾಮಾಂತರ ಪ್ರದೇಶದ ಶಿಕ್ಷಣ ಸಂಸ್ಥೆಗಳಿಗೆ ಜೀವ ತುಂಬುವ ಕಳಕಳಿಯೊಂದಿಗೆ ಸಮಿತಿ ಕಾರ್ಯ ನಿರ್ವಹಿಸುತ್ತಿದೆ ಎಂದರು. ಸಮಿತಿ ಉಪಾಧ್ಯಕ್ಷರಾದ ವಿಧಾನ ಪರಿಸತ್ ಸದಸ್ಯ ಎಸ್.ಎಲ್. ಭೋಜೇಗೌಡ ಮಾತನಾಡಿ, ರಾಜ್ಯದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿಯೇ ನಿರ್ಮಾಣವಾದ ಅನೇಕ ಕಟ್ಟಡಗಳಿವೆ. ಅಂತಹ ಶಿಕ್ಷಣ ಸಂಸ್ಥೆಗಳಿಂದಲೂ ಮಾಹಿತಿ ಪಡೆದು ಸಮಗ್ರವಾಗಿ ಚರ್ಚಿಸಿ, ಸರಳವಾಗಿ ಕಾನೂನಾತ್ಮಕ ತೊಡಕಾಗದಂತೆ ಎಚ್ಚರ ವಹಿಸಿ ಪರಿಹಾರ ಕಂಡುಕೊಳ್ಳಲು ಸಮಿತಿ ಪ್ರಯತ್ನಿಸಿದೆ ಎಂದರು.
ಖಾಸಗಿ ಶಿಕ್ಷಣ ಸಂಸ್ಥೆಗಳ ಪದಾ ಧಿಕಾರಿಗಳಾದ ಶಶಿಧರ್ ದಿಂಡೂರ, ಶಂಕರ ಹಲಗತ್ತಿ, ಕಲಬುರ್ಗಿಯ ಸುನೀಲ ಹುಡಗಿ, ಜಯದೇವ ಮೆಣಸಗಿ, ಗದಗಿನ ಶ್ರೀನಿವಾಸ ಹುಯಿಲಗೋಳ, ಮಹೇಶ್ ತೆಂಗಿನಕಾಯಿ, ಅಡಿವೆಪ್ಪ, ಮುಂಡರಗಿಯ ಡಿ.ಸಿ.ಹಿರೇಮಠ, ಹಾವೇರಿಯ ಉಮೇಶ್ ಗುರಲಿಂಗಪ್ಪಗೌಡ್ರ, ಕೊಪ್ಪಳದ ಎಸ್.ಎ. ತಹಶೀಲ್ದಾರ, ಫಕ್ಕೀರಪ್ಪ ಎಮ್ಮಿಯವರ, ಬಳ್ಳಾರಿಯ ಶ್ರೀನಿವಾಸ ಕುರಗೋಡ, ವಿಜಯಪುರದ ಸಂಗಮೇಶ ಬಿರಾದಾರ, ಕಲಬುರ್ಗಿಯ ಚನ್ನಬಸಪ್ಪ ಗಾರಂಪಳ್ಳಿ ಮತ್ತಿತರರು ಅಹವಾಲು ಮಂಡಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ, ಪ್ರಾಥಮಿಕ ಶಿಕ್ಷಣ ನಿರ್ದೇಶಕ ಪ್ರಸನ್ನಕುಮಾರ, ಲೋಕೋಪಯೋಗಿ ಮುಖ್ಯ ಇಂಜಿನಿಯರ್ ಶಿವಯೋಗಿ ಹಿರೇಮಠ, ಅಗ್ನಿಶಾಮಕ ಪ್ರಾದೇಶಿಕ ಅಧಿ ಕಾರಿ ಶ್ರೀಕಾಂತ, ಗೃಹ ಇಲಾಖೆಯ ಸರ್ಕಾರದ ಉಪಕಾರ್ಯದರ್ಶಿ ಪಂಪನಗೌಡ ಇದ್ದರು. ಬೆಳಗಾವಿ, ಕಲಬುರ್ಗಿ ವಿಭಾಗದ ಸಾರ್ವಜನಿಕ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಇಲಾಖೆಗಳ ಉಪನಿರ್ದೇಶಕರು, ಶಿಕ್ಷಣ ಸಂಸ್ಥೆಗಳ ಪದಾ ಧಿಕಾರಿಗಳು ಇದ್ದರು. ಹಿರಿಯ ಸಹಾಯಕ ನಿರ್ದೇಶಕಿ ವಿದ್ಯಾ ನಾಡಿಗೇರ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್ ಪೊಲೀಸ್ ಠಾಣೆ ಬಂಟ್ವಾಳಕ್ಕೆ
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.