ಭಿನ್ನಾಭಿಪ್ರಾಯ ಬಗ್ಗೆ ಚರ್ಚೆ-ಪಕ್ಷಸಂಘಟನೆಗೆ ಆದ್ಯತೆ
Team Udayavani, May 19, 2017, 3:21 PM IST
ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಮುಖಂಡರ ಹಾಗೂ ಕಾರ್ಯಕರ್ತರ ನಡುವೆ ಅಂತಹ ಹೇಳಿಕೊಳ್ಳುವಂತಹ ಭಿನ್ನಾಭಿಪ್ರಾಯಗಳಿಲ್ಲ. ಇದ್ದ ಸಣ್ಣಪುಟ್ಟ ಭಿನ್ನಾಭಿಪ್ರಾಯವನ್ನೂ ಬಗೆಹರಿಸಲಾಗಿದೆ.
ಮೇ 22ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರೊಂದಿಗೆ ಸಭೆ ನಡೆಸಿ ಪಕ್ಷದ ಬಲವರ್ಧನೆ ಹಾಗೂ ಪಕ್ಷದೊಳಗಿನ ಆಂತರಿಕ ಎಲ್ಲ ಸಮಸ್ಯೆಗಳ ಕುರಿತು ಚರ್ಚಿಸಿ ಪಕ್ಷದ ಸಂಘಟನೆಗೆ ಆದ್ಯತೆ ನೀಡಲಾಗುವುದು ಎಂದು ಎಐಸಿಸಿ ಕಾರ್ಯದರ್ಶಿ ಮಾಣಿಕ್ಯಂ ಟ್ಯಾಗೋರ ಹೇಳಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಸಾರ್ವತ್ರಿಕ ಚುನಾವಣೆ ಒಳಗಾಗಿ ಪಕ್ಷವನ್ನು ತಳಮಟ್ಟದಿಂದ ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಾಗುತ್ತಿದೆ. ವಿಜಯಪುರ, ಗದಗ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಪಕ್ಷದ ಸಂಘಟನೆ ಮಾಡಲಾಗುತ್ತಿದೆ.
ಬೂತ್, ತಾಲೂಕು, ಜಿಲ್ಲಾಮಟ್ಟದಲ್ಲಿ ಪಕ್ಷದ ಸಂಘಟನೆಗೆ ಒತ್ತು ನೀಡಲಾಗಿದೆ ಎಂದರು. ರಾಜ್ಯದಲ್ಲಿ ಪಕ್ಷದೊಳಗಿನ ಆಂತರಿಕ ಸಮಸ್ಯೆಗಳ ಕುರಿತು ಈಗಾಗಲೇ ಚರ್ಚಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಪಕ್ಷದ ವರಿಷ್ಠರು ಸ್ಪಷ್ಟಿಕರಣ ನೀಡಿದ್ದಾರೆ. ಅಧ್ಯಕ್ಷರ ಬದಲಾವಣೆ ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಷಯ.
ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಸಚಿವ ಸ್ಥಾನ ಎರಡೆರಡು ಸ್ಥಾನ ನಿಭಾಯಿಸುವುದು ದೊಡ್ಡ ವಿಚಾರವಲ್ಲ ಎಂದರು. ಪಕ್ಷದ ಬಲವರ್ಧನೆ ಹಾಗೂ ಆಂತರಿಕ ಭಿನ್ನಾಭಿಪ್ರಾಯ ಕುರಿತು ಸ್ಥಳೀಯ ಜನಪ್ರತಿನಿಧಿಗಳು, ಸ್ಪರ್ಧಾಳುಗಳು ಸೇರಿದಂತೆ ಜಿಲ್ಲಾ ಪ್ರಮುಖರನ್ನು ಬುಧವಾರ ಇಡೀ ದಿನ ಭೇಟಿ ಮಾಡಿ ಚರ್ಚಿಸಲಾಗಿದೆ.
ನನ್ನದು ಇಂದೊಂದು ಪರಿಚಯಾತ್ಮಕ ಭೇಟಿಯಾಗಿದೆ. ಈ ಸಂದರ್ಭದಲ್ಲಿ ಪ್ರಮುಖವಾಗಿ ಪಕ್ಷದ ಬಲವರ್ಧನೆ ಹಾಗೂ ಮುಖಂಡರು ಮತ್ತು ಕಾರ್ಯಕರ್ತರಲ್ಲಿನ ಸಣ್ಣಪುಟ್ಟ ಭಿನ್ನಾಭಿಪ್ರಾಯ ಸರಿಪಡಿಸುವ ಕುರಿತು ಎರಡು ಅಂಶಗಳು ನನ್ನ ಗಮನಕ್ಕೆ ಬಂದಿವೆ. ಆದರೆ ಅಂತಹ ಹೇಳಿಕೊಳ್ಳುವಂತಹ ಗಂಭೀರ ದೂರುಗಳು ಕೇಳಿಬಂದಿಲ್ಲ ಎಂದರು.
ಶಾಸಕ ಪ್ರಸಾದ ಅಬ್ಬಯ್ಯ, ವಾಕರಸಾ ಸಂಸ್ಥೆ ಅಧ್ಯಕ್ಷ ಸದಾನಂದ ಡಂಗನವರ, ಮಹೇಶ ನಾಲವಾಡ, ನಾಗರಾಜ ಛಬ್ಬಿ, ಎ.ಎಂ. ಹಿಂಡಸಗೇರಿ, ವಿ.ಆರ್. ಪಾಟೀಲ, ಎಚ್.ವಿ. ಮಾಡಳ್ಳಿ, ರಾಜಾ ದೇಸಾಯಿ, ಶರಣಪ್ಪ ಕೊಟಗಿ, ಮೋಹನ ಹಿರೇಮನಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.