![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Sep 3, 2021, 2:53 PM IST
ಹುಬ್ಬಳ್ಳಿ: ಕಚ್ಚಾ ತೈಲದ ಬೆಲೆ ಮೇಲೆ ಮಾತ್ರವೇ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ದರ ನಿರ್ಧಾರವಾಗುವುದಿಲ್ಲ. ಇತರೆ ಖರ್ಚುಗಳು ಹೆಚ್ಚಾದ ಹಿನ್ನೆಲೆಯಲ್ಲಿ ದರ ಹೆಚ್ಚಳವಾಗಿರಬೇಕು. ಬೆಲೆ ಹೆಚ್ಚಳ ಕುರಿತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಚರ್ಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಚ್ಚಾ ತೈಲ ಸಂಸ್ಕರಣೆ, ಕಂಪನಿಯ ಹಣಕಾಸು ವಿಚಾರದ ಮೇಲೆ ದರ ನಿರ್ಧಾರವಾಗುತ್ತದೆ. ಕಾಂಗ್ರೆಸ್ ನಾಯಕರು ಕೂಡ ಆಡಳಿತ ಮಾಡಿದ್ದಾರೆ. ಅವರ ಅವಧಿಯಲ್ಲಿ ದರ ಹೆಚ್ಚಳವಾಗಿಲ್ಲವೇ? ಏನೆಲ್ಲಾ ಬಾಂಡ್ ಮಾಡಿಕೊಟ್ಟಿದ್ದಾರೆ ಎನ್ನುವುದು ನಮಗೂ ಗೊತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ಎಲ್ಲಾ ಬೆಲೆಗಳು ಹೆಚ್ಚಾಗಿರುವ ಕಾರಣಕ್ಕೆ ದರ ಹೆಚ್ಚಳವಾಗಿರಬಹುದು. ಕಚ್ಚಾತೈಲ ಬೆಲೆ ಕಡಿಮೆಯಿದ್ದರೂ ದರ ಹೆಚ್ಚಳವಾಗಿದೆ ಎಂದು ಹೇಳುವುದು ಸರಿಯಲ್ಲ ಎಂದರು.
ಕೇರಳದಲ್ಲಿ ಕೋವಿಡ್ ಸಂಖ್ಯೆ ಹಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗಡಿಭಾಗದಲ್ಲಿರುವ ಗ್ರಾಮಗಳಲ್ಲಿ ವಿಶೇಷ ಲಸಿಕೆ ಅಭಿಯಾನ ಕೈಗೊಳ್ಳಲಾಗಿದೆ. ಅಲ್ಲಿನ ನಿವಾಸಿಗಳಿಗೆ ಲಸಿಕೆ ಹಾಗೂ ಪರೀಕ್ಷೆ ಮಾಡಿಸಿಕೊಳ್ಳುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಕೇರಳದಿಂದ ಬರುವವರು ನಕಲಿ ಕೋವಿಡ್ ನೆಗೆಟಿವ್ ವರದಿ ತರುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಅವುಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ ಎಂದರು.
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
You seem to have an Ad Blocker on.
To continue reading, please turn it off or whitelist Udayavani.