ಕುಂದಗೋಳ ಉಪ ಚುನಾವಣೆ ದಲಿತ ಮುಖಂಡರ ಜತೆ ಚರ್ಚೆ
Team Udayavani, Apr 29, 2019, 12:16 PM IST
ಹುಬ್ಬಳ್ಳಿ: ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಲಿಡ್ಕರ್ ಅಧ್ಯಕ್ಷ, ಶಾಸಕ ಪ್ರಸಾದ ಅಬ್ಬಯ್ಯ ರವಿವಾರ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿನ ದಲಿತ ಕಾಲೋನಿಗಳಿಗೆ ಭೇಟಿ ನೀಡಿ ಚುನಾವಣೆ ಸಿದ್ಧತೆ ಕುರಿತು ದಲಿತ ಮುಖಂಡರೊಂದಿಗೆ ಚರ್ಚೆ ನಡೆಸಿದರು.
ಕುಂದಗೋಳ, ಸಂಶಿ, ಬಿಲೇಬಾಳ, ಕಳಸ, ಯರಗುಪ್ಪಿ, ಗುಂಜಳ, ಹಿರೇನರ್ತಿ, ಚಿಕ್ಕನರ್ತಿ, ಇಂಗಳಗಿ ಗ್ರಾಮಗಳ ದಲಿತ ಕೇರಿಗಳಿಗೆ ಭೇಟಿ ನೀಡಿದ ಶಾಸಕರು, ಉಪ ಚುನಾವಣೆಯಲ್ಲಿ ದಲಿತ ಸಮಾಜ ಬಾಂಧವರು ಒಟ್ಟಾಗಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವ ಮೂಲಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಬೇಕು ಎಂದು ಮನವಿ ಮಾಡಿದರು.
ಸಚಿವರಾಗಿದ್ದ ಸಿ.ಎಸ್.ಶಿವಳ್ಳಿ ಅವರು ಎಲ್ಲ ವರ್ಗದ ಜನರನ್ನು ಸಮಾನವಾಗಿ ಕಂಡವರು. ದಲಿತ ಕಾಲೋನಿಗಳನ್ನು ಸಾಕಷ್ಟು ಅಭಿವೃದ್ಧಿಗೊಳಿಸಿದ್ದಾರೆ. ಅವರ ಅವಧಿಯಲ್ಲಾದ ಅಭಿವೃದ್ಧಿ ಕಾರ್ಯಗಳಿಂದ ಕ್ಷೇತ್ರದ ಚಿತ್ರಣ ಬದಲಾಗಿದೆ. ಏ. 29ರಂದು ಕುಸುಮಾ ನಾಮಪತ್ರ ಸಲ್ಲಿಸಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.
ಮರಿಯಪ್ಪ ಮುಡಚಿಬಣದ, ಯಲ್ಲಪ್ಪ ಕಾಲವಾಡ, ಬಸವರಾಜ, ಗುರನಾಥ ಚಲವಾದಿ, ಲೋಕೇಶ ಬೇವಿನಮರದ, ಸಿದ್ದಪ್ಪ ಚೂರಿ, ಫಕ್ಕಿರಪ್ಪ ಕರಗಲ್ಲ, ಶ್ರೀಕಾಂತ ದೊಡ್ಡಮನಿ, ಕಲ್ಲಪ್ಪ ಈಟಿ, ಪ್ರಭು, ಫರ್ವೇಜ್ ಕೊಣ್ಣೂರು ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.