ಗಂಟಲು-ಚಪ್ಪೇ ರೋಗದ ಆತಂಕ
•ಜಾನುವಾರುಗಳಿಗೆ ಸಾಂಕ್ರಾಮಿಕ ರೋಗ ಭೀತಿ•ಪಶುವೈದ್ಯರಿಗೆ ರೈತಾಪಿ ಜನರ ಮೊರೆ
Team Udayavani, Jul 2, 2019, 1:24 PM IST
ರೋಗ ಬಾಧಿತ ಹಸುವಿನ ಗೊರಸು (ಸಂಗ್ರಹ ಚಿತ್ರ)
ಧಾರವಾಡ: ಜಿಲ್ಲೆಯಲ್ಲಿ ಡೆಂಘೀ, ಚಿಕೂನ್‌ಗುನ್ಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ಆತಂಕ ಹೆಚ್ಚಾಗಿರುವ ಮಳೆಗಾಲದ ಸಮಯದಲ್ಲಿ ರೈತಾಪಿ ವರ್ಗದ ಜೀವನಾಡಿ ಜಾನುವಾರುಗಳಿಗೂ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ.
ಜಿಲ್ಲೆಯ ಅಲ್ಲಲ್ಲಿ ಗಳನೆ (ಗಂಟಲು) ಬೇನೆ, ಚಪ್ಪೇ ಬೇನೆ ಹಾಗೂ ಕಾಲುಬೇನೆ ರೋಗಗಳ ಲಕ್ಷಣ ಕಂಡುಬಂದಿದ್ದು, ಒಂದಿಷ್ಟು ಪ್ರಕರಣಗಳಲ್ಲಿ ಜಾನುವಾರುಗಳು ಮೃತಪಟ್ಟಿರುವ ಬಗ್ಗೆಯೂ ವರದಿಯಾಗುತ್ತಿವೆ. ಧಾರವಾಡ ತಾಲೂಕಿನ ಉಪ್ಪಿನಬೆಟಗೇರಿಯಲ್ಲಿ ಎರಡು ದಿನದ ಹಿಂದೆಯಷ್ಟೇ ಹಸುವಿನ ಕರುವೊಂದು ಚಪ್ಪೇ ರೋಗಕ್ಕೆ ಬಲಿ ಆಗಿದ್ದರೆ, ಎತ್ತೂಂದು ಗಂಟಲು ಬೇನೆ ರೋಗಕ್ಕೆ ಮೃತಪಟ್ಟಿದೆ. ಅದರಂತೆ ತಾಲೂಕಿನ ವಿವಿಧ ಗ್ರಾಮದಲ್ಲಿ ರೋಗದ ಲಕ್ಷಣಗಳು ಕಂಡು ಬಂದಿದ್ದು, ಚಿಕಿತ್ಸೆಗಾಗಿ ರೈತರು ಪಶು ವೈದ್ಯರಿಗೆ ಮೊರೆ ಇಡುತ್ತಿದ್ದಾರೆ.
ಆದರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗೆ ಮಾತ್ರ ಈ ಬಗ್ಗೆ ಮಾಹಿತಿ ಇಲ್ಲ. ಹಿಂದಿನ ವರ್ಷಗಳಲ್ಲಿ ಹಾಗೂ ಈ ವರ್ಷದಲ್ಲಿ ಇಂತಹ ರೋಗಗಳಿಗೆ ಬಲಿಯಾದ ಜಾನುವಾರುಗಳ ಮಾಹಿತಿ ಇಲಾಖೆಯ ಜಿಲ್ಲಾ ಉಪನಿರ್ದೇಶಕರ ಬಳಿಯೇ ಇಲ್ಲ.
ಇಲಾಖೆಯ ರೋಗ ಅಧ್ಯಯನ ಶಾಖೆ ನೀಡಿರುವ ವರದಿಯಂತೆ ಜಿಲ್ಲೆಯ ಸಾಂಕ್ರಾಮಿಕ ರೋಗ ಕಂಡುಬರುವ ಪ್ರದೇಶದಲ್ಲಿ ಮುಂಜಾಗೃತಾ ಕ್ರಮವಾಗಿ ಲಸಿಕೆ ಹಾಕಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಜಿಲ್ಲೆಯಲ್ಲಿ ಕೊರತೆ ಇರುವ ಪಶು ವೈದ್ಯಾಧಿಕಾರಿಗಳ ನೇಮಕಕ್ಕಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.•ಪರಮೇಶ್ವರ ನಾಯಕ, ಉಪನಿರ್ದೇಶಕ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ
•ಶಶಿಧರ್ ಬುದ್ನಿ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.