Pralhad Joshi: ಕೇಂದ್ರದಿಂದ ಎಂಆರ್‌ಪಿ ದರದಲ್ಲಿ ಆಹಾರ ಧಾನ್ಯ ವಿತರಣೆ
ದಿಲ್ಲಿಯಲ್ಲಿ ಆಹಾರ ಧಾನ್ಯ ಪೂರೈಕೆ ವಾಹನಕ್ಕೆ ಸಚಿವರ ಚಾಲನೆ
Team Udayavani, Oct 23, 2024, 11:23 PM IST
ಹುಬ್ಬಳ್ಳಿ: ದೀಪಾವಳಿ ಹಬ್ಬದ ವೇಳೆ ಆಹಾರ ಧಾನ್ಯಗಳ ಬೆಲೆ ನಿಯಂತ್ರಣಕ್ಕೆ ಮುಂದಾಗಿರುವ ಕೇಂದ್ರ ಸರಕಾರ ಗ್ರಾಹಕರಿಗೆ ಕೈಗೆಟುಕುವ ಬೆಲೆಯಲ್ಲಿ ಭಾರತ್ ಅಕ್ಕಿ, ಬೇಳೆ ಕಾಳನ್ನು ವಾಹನಗಳ ಮೂಲಕ ವಿತರಿಸುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಬುಧವಾರ ದಿಲ್ಲಿಯ ಕೃಷಿ ಭವನದಲ್ಲಿ ಕಡಿಮೆ ದರದಲ್ಲಿ ಆಹಾರ ಧಾನ್ಯ ಪೂರೈಕೆ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹಬ್ಬದ ಸಂದರ್ಭದಲ್ಲಿ ಸರಕಾರ ಗ್ರಾಹಕರಿಗೆ ಎಂಆರ್‌ಪಿ ದರದಲ್ಲಿ ವಿತರಿಸಲು ಮುಂದಾಗಿದೆ. ದಿಲ್ಲಿಯಲ್ಲಿ ಬೇಳೆ-ಕಾಳು ಪೂರೈಕೆಗೆ ಕ್ರಮ ಕೈಗೊಂಡಿದ್ದು, ಆ ಮೂಲಕ ಗ್ರಾಹಕರಿಗೆ ಬೆಲೆ ಏರಿಕೆ ಹೊರೆ ತಗ್ಗಿಸಲು ಕ್ರಮ ತೆಗೆದುಕೊಂಡಿದೆ ಎಂದರು.
ಎಂಆರ್‌ಪಿ ಬೆಲೆ
ದಿಲ್ಲಿ/ಎನ್‌ಸಿಆರ್ ನಿವಾಸಿಗಳಿಗಾಗಿ ಭಾರತ್ ಕಡಲೆ ಬೇಳೆ ಕೆಜಿಗೆ 70 ರೂ., ಭಾರತ್ ಹೆಸರು ಬೇಳೆ ಕೆಜಿಗೆ 107 ರೂ., ಭಾರತ್ ತೊಗರಿ ಬೇಳೆ ಕೆಜಿಗೆ 89 ರೂ. ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಗ್ರಾಹಕ ವ್ಯವಹಾರಗಳ ಇಲಾಖೆ ನೇತೃತ್ವದಲ್ಲಿ ಕೈಗೊಂಡ ಈ ಯೋಜನೆ ನಾಗರಿಕರ ಮೇಲೆ ಹೆಚ್ಚುತ್ತಿರುವ ಆಹಾರ ಧಾನ್ಯ, ಬೇಳೆ-ಕಾಳು ಬೆಲೆ ಹೊರೆ ಕಡಿಮೆ ಮಾಡುವ ಗುರಿ ಹೊಂದಿದೆ ಎಂದರು. ಆಹಾರ ಖಾತೆ ರಾಜ್ಯ ಸಚಿವ ಬಿ.ಎಲ್. ವರ್ಮಾ ಹಾಗೂ ನಿಮುಬೇನ್ ಬಂಭಾನಿಯಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.