ಇಂದಿರಮ್ಮನ ಕೆರೆಗೆ ಜಿಲ್ಲಾಧಿಕಾರಿ ಭೇಟಿ
Team Udayavani, Aug 16, 2019, 9:12 AM IST
ಅಳ್ನಾವರ: ಹುಲಿಕೇರಿ ಇಂದಿರಮ್ಮನ ಕೆರೆಗೆ ಡಿಸಿ ದೀಪಾ ಚೋಳನ್ ಭೇಟಿ ನೀಡಿ ಪರಿಸ್ಥಿತಿ ವೀಕ್ಷಿಸಿದರು.
ಅಳ್ನಾವರ: ಪಟ್ಟಣದ ಜನರಲ್ಲಿ ಆತಂಕ ಸೃಷ್ಟಿಸಿದ್ದ ಹುಲಿಕೇರಿ ಇಂದಿರಮ್ಮನ ಕೆರೆ ಪ್ರದೇಶಕ್ಕೆ ಜಿಲ್ಲಾಧಿಕಾರಿ ದೀಪಾ ಚೋಳನ್ ಭೇಟಿ ನೀಡಿ ಪರಿಶೀಲಿಸಿದರು.
ಕೆರೆ ನಿರ್ಮಾಣದ ನಂತರ ಈ ವರ್ಷ ಅಧಿಕ ಮಳೆಯಾಗಿದ್ದು, ಅಪಾಯದ ಮಟ್ಟ ಮೀರಿ ನೀರು ಭರ್ತಿಯಾಗಿತ್ತು. ಕೆರೆಯ ಪಕ್ಕದಲ್ಲಿ ಕೊರೆತ ಉಂಟಾಗಿದ್ದಲ್ಲದೇ ಒಡ್ಡು ಒಡೆಯುವ ಭೀತಿ ಎದುರಾಗಿತ್ತು. ಅಳ್ನಾವರ ಪಟ್ಟಣದ ಅರ್ಧ ಭಾಗ ಮುಳುಗುವ ಭೀತಿ ಆವರಿಸಿ ಜನರನ್ನು ಸ್ಥಳಾಂತರ ಮಾಡಲಾಗಿತ್ತು. ಹಾಗಾಗಿ ಭವಿಷ್ಯತ್ತಿನಲ್ಲಿ ಇಂತಹ ಅಪಾಯ ಎದುರಾಗದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಹಾಳಾದ ಕೆರೆಯ ಭಾಗವನ್ನು ಪುನರ್ ನಿರ್ಮಾಣ ಮಾಡಲು ನುರಿತ ತಜ್ಞರ ಸಲಹೆ ಪಡೆಯಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮಳೆಯಿಂದ ಹಾಳಾದ ಬೆಳೆ ಸಮೀಕ್ಷೆ ಮಾಡಲು ಕೃಷಿ ಮತ್ತು ಕಂದಾಯ ಇಲಾಖೆ ಸಿಬ್ಬಂದಿ ತಂಡವನ್ನು ರಚನೆ ಮಾಡಲಾಗುತ್ತದೆ. ಸಮಗ್ರ ವರದಿ ತಯಾರಿಸಿ ಸರ್ಕಾರಕ್ಕೆ ಹಾನಿಯ ಅಂದಾಜನ್ನು ಸಲ್ಲಿಸಲಾಗುತ್ತದೆ. ಪರಿಹಾರಕ್ಕೆ ಅನುದಾನದ ಕೊರತೆ ಇಲ್ಲ ಎಂದು ಡಿಸಿ ಹೇಳಿದರು.
ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ, ನೋಡಲ್ ಅಧಿಕಾರಿ ವಿನಾಯಕ ಪಾಲನಕರ, ಪಪಂ ಮುಖ್ಯಾಧಿಕಾರಿ ವೈ.ಜಿ. ಗದ್ದಿಗೌಡರ, ತಹಶೀಲ್ದಾರ್ ಅಮರೇಶ ಪಮ್ಮಾರ, ಯಲ್ಲಪ್ಪ ಬೆಳಗಾವಿ, ಗುರುರಾಜ ನರಗುಂದ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.