ಪ್ರಯತ್ನವಾದಿಗಳಾಗಿ ಯಶಸ್ಸು ಸಾಧಿಸಿ

Team Udayavani, Jul 28, 2018, 4:56 PM IST

28-july-26.jpg

ಹಾವೇರಿ: ವಿದ್ಯಾರ್ಥಿಗಳು ಕೀಳರಿಮೆಯಿಂದ ಹೊರಗೆ ಬರಬೇಕು. ಬದುಕಿನಲ್ಲಿ ಪ್ರಯತ್ನವಾದಿಗಳಾಗಬೇಕು. ನಿಶ್ಚಿತ ಗುರಿ ಸಾಧಿಸಲು ತಮ್ಮ ಸಾಮರ್ಥ್ಯ ಹಾಗೂ ಕೌಶಲ್ಯವನ್ನು ವೃದ್ಧಿಸಿಕೊಳ್ಳಲು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡೆಸಿಕೊಳ್ಳಬೇಕು ಎಂದು ಶಾಸಕ ನೆಹರು ಓಲೇಕಾರ ಹೇಳಿದರು. ಗಾಂಧಿಪುರ ಸರ್ಕಾರಿ ಪ್ರಥಮದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಉದ್ಯೋಗ ವಿನಿಮಯ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಲಿಕಾ ಹಂತದಲ್ಲೇ ಇಂಗ್ಲಿಷ್‌ ಭಾಷಾ ಸಂವಹನ, ಸಂದರ್ಶನ ಎದುರಿಸುವ ಸಾಮರ್ಥ್ಯ, ವಿವಿಧ ವೃತ್ತಿಪರ ಕೌಶಲ್ಯ ತರಬೇತಿ ಪಡೆದರೆ ಸುಲಭವಾಗಿ ಉದ್ಯೋಗಾವಕಾಶ ಪಡೆಯಬಹುದು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದರು.

ಇಂದಿನ ದಿನಮಾನಗಳಲ್ಲಿ ಉದ್ಯೋಗ ಪಡೆಯಲು ಇಂಗ್ಲಿಷ್‌ ಭಾಷೆಯ ಸಂವಹನ ಕಲೆ ಅತ್ಯವಶ್ಯವಾಗಿದೆ. ಇದರೊಂದಿಗೆ ವಿವಿಧ ವೃತ್ತಿ ಕೌಶಲ್ಯ ತರಬೇತಿ ಹೊಂದಿದವರಿಗೆ ಹೆಚ್ಚಿನ ಆದ್ಯತೆ ದೊರೆಯಲಿದೆ. ಆದರೆ, ಗ್ರಾಮೀಣ ಪ್ರದೇಶದ ಬಹುಪಾಲು ವಿದ್ಯಾರ್ಥಿಗಳು ಉತ್ತಮ ಪದವಿ, ಹೆಚ್ಚಿನ ಅಂಕ ಹೊಂದಿದ್ದರೂ ಇಂಗ್ಲಿಷ್‌ ಭಾಷಾ ಬಳಕೆ, ಸಂದರ್ಶನ ಎದುರಿಸುವ ಕಲೆ ಗೊತ್ತಿಲ್ಲದೆ ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ ಎಂದರು.

ಕಾನ್ವೆಂಟ್‌ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಸುಲಭವಾಗಿ ಇಂಗ್ಲಿಷ್‌ ವ್ಯವಹಾರಿಕ ಭಾಷೆಯಾಗಿ ಬಳಸುತ್ತಾರೆ. ಗ್ರಾಮೀಣ ಬಡ ವಿದ್ಯಾರ್ಥಿಗಳಿಗೆ ಇಂಗ್ಲಿಷ್‌ ಭಾಷೆ ಎಂದರೆ ಕಾದ ಕಬ್ಬಿಣದ ಸಲಾಕೆಯಂತೆ ಭಾವಿಸಿ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉದ್ಯೋಗ ಪಡೆಯಲು ವಿಫಲರಾಗುತ್ತಾರೆ. ಉತ್ತಮ ವಿದ್ಯಾರ್ಹತೆ ಹೊಂದಿದ್ದರೂ ಉದ್ಯೋಗವಿಲ್ಲದೆ ನಿರಾಶರಾಗುವಂತಾಗುವುದು. ಹೀಗಾಗಿ ಇಂಗ್ಲಿಷ್‌ ಅಭಷೆಯನ್ನೂ ಶ್ರದ್ಧೆಯಿಂದ ಕಲಿತರೆ ಭವಿಷ್ಯಕ್ಕೆ ಒಳಿತು ಎಂದರು.

ನಿರಾಶಾದಾಯಕ ಮನಸ್ಥಿತಿ ತೊಡೆದುಹಾಕಿ ಸಂವಹನ ಸಾಮರ್ಥ್ಯ, ಸಂದರ್ಶನ ಎದುರಿಸುವ ಕುರಿತು ಸೂಕ್ತ ಮಾರ್ಗದರ್ಶನ, ಉದ್ಯೋಗ ಅವಕಾಶಗಳ ಮಾಹಿತಿ ಹಾಗೂ ವಿವಿಧ ವೃತ್ತಿಪರ ತರಬೇತಿಯ ಮೂಲಕ ಕೌಶಲ್ಯವನ್ನು ವೃದ್ಧಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದಾದ್ಯಂತ ಪ್ರಧಾನಮಂತ್ರಿ ಕೌಶಲ್ಯ ಕೇಂದ್ರವನ್ನು ಆರಂಭಿಸಿ ಆ ಮೂಲಕ ಉಚಿತವಾಗಿ ತರಬೇತಿಯನ್ನು ನೀಡುತ್ತಿದ್ದಾರೆ. ಇದರು ಸದುಪಯೋಗವಾಗಲಿ ಎಂದರು.

ಹಾವೇರಿ ನಗರದಲ್ಲಿ ತೆರೆಯಲಾಗಿರುವ ಕೌಶಲ್ಯ ಕೇಂದ್ರದಲ್ಲಿ ಉದ್ಯೋಗ ಮಾರ್ಗದರ್ಶನ ಹಾಗೂ ತರಬೇತಿ ಉಚಿತವಾಗಿ ನೀಡಲಾಗುತ್ತಿದೆ. ಕಲಿಯುತ್ತಿರುವ ವಿದ್ಯಾರ್ಥಿಗಳು ಈ ಹಂತದಲ್ಲೇ ಕೌಶಲ್ಯ ಕೇಂದ್ರದ ಸಂಪರ್ಕ ಸಾಧಿಸಿ ವಿವಿಧ ವೃತ್ತಿಪರ ತರಬೇತಿಯನ್ನು ಉಚಿತವಾಗಿ ಪಡೆಯಬೇಕು. ಸಂದರ್ಶನ ಎದುರಿಸುವ ಮಾರ್ಗದರ್ಶನ ಪಡೆಯಬೇಕು. ಕ್ಯಾಂಪಸ್‌ಗಳಲ್ಲಿ ನಡೆಯುವ ಉದ್ಯೋಗ ಸಂದರ್ಶನದಲ್ಲಿ ಭಾಗವಹಿಸಿ ಯಶಸ್ಸು ಸಾಧಿಸಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ| ಬಿ.ಟಿ.ಲಮಾಣಿ ವಹಿಸಿದ್ದರು. ಪ್ಲೆಸ್‌ ಮೆಂಟ್‌ ಅಧಿಕಾರಿ ಡಿ.ಟಿ. ಪಾಟೀಲ, ಉದ್ಯೋಗ ವಿನಿಮಯ ಇಲಾಖಾ ಅಧಿಕಾರಿ ರುದ್ರೇಶಗೌಡ, ನಾಗರಾಜ ಬಸೇಗಣ್ಣಿ, ಮಲ್ಲಿಕಾರ್ಜುನ ಸಾತೇನಹಳ್ಳಿ, ನಾಗರಾಜ ಕೊರವರ ಇತರರಿದ್ದರು.

340 ಅಭ್ಯರ್ಥಿಗಳ ಆಯ್ಕೆ
ಉದ್ಯೋಗ ಮೇಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ 26 ಕಂಪನಿಗಳು ಭಾಗವಹಿಸಿದ್ದವು. 866 ಉದ್ಯಾಗಾರ್ಥಿಗಳು ಸಂದರ್ಶನ ಎದುರಿಸಿದರು. ಇದರಲ್ಲಿ 126 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಮಾಡಿಕೊಳ್ಳಲಾಯಿತು. 340 ಅಭ್ಯರ್ಥಿಗಳನ್ನು ತರಬೇತಿಗೆ ಆಯ್ಕೆಮಾಡಿ ನೇಮಕಾತಿ ಮಾಡಿಕೊಳ್ಳಲಾಗಿದೆ.

ಟಾಪ್ ನ್ಯೂಸ್

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-alnavar

Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.