ನಾಳೆಯಿಂದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ


Team Udayavani, Mar 24, 2017, 3:25 PM IST

hub6.jpg

ಧಾರವಾಡ: ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ 11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಾ.25ರಿಂದ ಎರಡು ದಿನಗಳ ಕಾಲ ನಗರದ ಜಿಲ್ಲಾ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಡಾ| ಲಿಂಗರಾಜ ಅಂಗಡಿ ಹೇಳಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಕವಿ ವಿ.ಸಿ. ಐರಸಂಗ ಅವರನ್ನು ಆಯ್ಕೆ ಮಾಡಲಾಗಿದೆ. ಇವರ ಅಧ್ಯಕ್ಷೆಯಲ್ಲಿ ಮಾ.25 ಮತ್ತು 26ರಂದು ಸಮ್ಮೇಳನ ನಡೆಯಲಿದೆ. ಮಾ.25ರಂದು ಬೆಳಗ್ಗೆ 8:30ಗಂಟೆಗೆ ಆಕಾಶವಾಣಿ ಕೇಂದ್ರದ ನಿಲಯ ನಿರ್ದೇಶಕ ಸತೀಶ ಪರ್ವತಿಕರ ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು. 

ಕವಿವಿ ಗಾಂಧಿ ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ| ಶಿವಾನಂದ ಶೆಟ್ಟರ ಕನ್ನಡ ಧ್ವಜಾರೋಹಣ ಮಾಡಲಿದ್ದಾರೆ. ಆ ಬಳಿಕ ಪರಿಷತ್‌ ಧ್ವಜಾರೋಹಣ ತಾವು ಮಾಡುವುದಾಗಿ ಅಂಗಡಿ ತಿಳಿಸಿದರು. ಅಂದು ಬೆಳಗ್ಗೆ 10:30ಗಂಟೆಗೆ ಸಾಹಿತಿ ಡಾ| ಬಸವರಾಜ ಸಾದರ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದು, ಹಿರಿಯ ಸಾಹಿತಿ ಡಾ| ಸಿದ್ಧಲಿಂಗ ಪಟ್ಟಣಶೆಟ್ಟಿ ಅಧ್ಯಕ್ಷತೆ ಅಧ್ಯಕ್ಷತೆ ವಹಿಸಲಿದ್ದಾರೆ.

ಡಾ| ಶಾಂತಿನಾಥ ದಿಬ್ಬದ ಅವರು ಆಶಯ ನುಡಿಗಳನ್ನು ಆಡಲಿದ್ದಾರೆ. ಹಿರಿಯ ಕವಿ ವಿ.ಸಿ. ಐರಸಂಗ ಸರ್ವಾಧ್ಯಕ್ಷರ ಭಾಷಣ ಮಾಡಲಿದ್ದಾರೆ. ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಸಾಹಿತಿ ಡಾ| ರಾಜೇಂದ್ರ ಚೆನ್ನಿ ಭಾಗವಹಿಸಲಿದ್ದು, ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ ವಿವಿಧ ಪುಸ್ತಕಗಳ ಬಿಡುಗಡೆ ಮಾಡಲಿದ್ದಾರೆ.

ಕಾರ್ಮಿಕ ಸಚಿವ ಸಂತೋಷ ಲಾಡ್‌, ಶಾಸಕ ಸಿ.ಎಸ್‌. ಶಿವಳ್ಳಿ, ಸಾಹಿತಿಗಳಾದ ಎಚ್‌.ಎಂ. ಬೀಳಗಿ, ಡಾ| ರಾಘವೇಂದ್ರ ಪಾಟೀಲ, ಡಾ| ಮಲ್ಲಿಕಾರ್ಜುನ ಹಿರೇಮಠ ಹಾಗೂ ಜಿಪಂ ಅಧ್ಯಕ್ಷೆ ಚೈತ್ರಾ ಶಿರೂರ, ಪಾಲಿಕೆ ಮಹಾಪೌರ ಡಿ.ಕೆ. ಚವ್ಹಾಣ ಪಾಲ್ಗೊಳ್ಳಲಿದ್ದಾರೆ ಎಂದರು. 

ಕನ್ನಡಕ್ಕಾಗಿ ನಡೆ ಮೆರವಣಿಗೆ: ಮಾ.25ರಂದು ಬೆಳಗ್ಗೆ 9 ಗಂಟೆಗೆ ಕನ್ನಡಕ್ಕಾಗಿ ನಡೆ ಎಂಬ ಧ್ಯೇಯವಾಕ್ಯದಲ್ಲಿ ನಗರದ ಕಲಾಭವನದಿಂದ ಜಿಲ್ಲಾ ಸಾಹಿತ್ಯ ಭವನದವರೆಗೆ ಮೆರವಣಿಗೆ ನಡೆಯಲಿದೆ. ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ವೇದವ್ಯಾಸ ಕೌಲಗಿ ಮೆರವಣಿಗೆಗೆ ಚಾಲನೆ ನೀಡಲಿದ್ದು,  

ಡಾ| ಎಂ.ಎಂ. ಕಲಬುರ್ಗಿ ಮುಖ್ಯವೇದಿಕೆ: ಎರಡು ದಿನಗಳ ಕಾಲ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಮುಖ್ಯ ವೇದಿಕೆಗೆ ಡಾ| ಎಂ.ಎಂ.ಕಲಬುರ್ಗಿ ಎಂದು ಹೆಸರಿಡಲಾಗಿದೆ. ಉಳಿದಂತೆ ಡಾ|ವಾಮನ ಬೇಂದ್ರೆ, ಸದಾನಂದ ಕನವಳ್ಳಿ, ಗೋಪಾಲ ವಾಜಪೇಯಿ, ಗಜಾನನ ಮಹಾಲೆ ಹಾಗೂ ಆರ್ಯ ಆಚಾರ್ಯ ಎಂಬ ಐದು ಮಹಾದ್ವಾರಗಳು ಇರಲಿವೆ. ವಿವಿಧ ವಿಷಯಗಳ ಕುರಿತು ಐದು ವೈಚಾರಿಕ ಗೋಷ್ಠಿಗಳು ಜರುಗಲಿವೆ.

ಮಾ.26ರಂದು ಸಮ್ಮೇಳನದ ಸರ್ವಾಧ್ಯಕ್ಷ ಕವಿ ವಿ.ಸಿ. ಐರಸಂಗ ಅವರ ಕವಿತೆಗಳ ವಾಚನ ಹಾಗೂ ಗಾಯನ ಕಾರ್ಯಕ್ರಮ ನಡೆಯಲಿದ್ದು, ಸಂಜೆ ಸಮಯದಲ್ಲಿ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದರು. ಅಂದು ಸಂಜೆ 5:00ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದ್ದು, ನಾಡೋಜ ಡಾ| ಪಾಟೀಲ ಪುಟ್ಟಪ್ಪನವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತಿ ಪೊ| ಮಾಲತಿ ಪಟ್ಟಣಶೆಟ್ಟಿ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.

ಈ ಸಮ್ಮೇಳನದಲ್ಲಿ ಭಾಗವಹಿಸುವವರಿಗೆ ಊಟೋಪಚಾರದ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ ಉಪಾಹಾರ, ಮಧ್ಯಾಹ್ನ ಊಟ ಇರಲಿದೆ. ಅನುದಾನದ ಕೊರತೆಯಿಂದಾಗಿ ಎರಡು ದಿನದ ಸಮ್ಮೇಳನದಲ್ಲಿ ರಾತ್ರಿ ಊಟದ ವ್ಯವಸ್ಥೆ ಇಲ್ಲ. ಕೇಂದ್ರ ಸಮಿತಿ ನೀಡಿರುವ 5 ಲಕ್ಷ ರೂ. ಗಳ ಅನುದಾನದಲ್ಲಿ ಆದಷ್ಟು ಕಡಿಮೆ ವೆಚ್ಚದಲ್ಲಿ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ ಎಂದರು. ಕಸಾಪ ಗೌರವ ಕಾರ್ಯದರ್ಶಿ ಪ್ರೊ| ಕೆ.ಎಸ್‌.  ಕೌಜಲಗಿ, ಡಾ| ಜಿನದತ್ತ ಹಡಗಲಿ, ಪ್ರೊ| ಎಸ್‌. ಎಸ್‌.ದೊಡಮನಿ, ಹಿರಿಯ ಸಾಹಿತಿ ಮೋಹನ್‌ ನಾಗಮ್ಮನವರ, ಎಫ್‌.ವಿ.ಕಣವಿ, ದಿಂಡವಾಡ ಪತ್ರಿಕಾಗೋಷ್ಠಿಯಲ್ಲಿದ್ದರು. 

ಟಾಪ್ ನ್ಯೂಸ್

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

vidhana-soudha

2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.