ಸೇವಾ ವೆಚ್ಚ ನೆಪದಲ್ಲಿ ವಸೂಲಿಗಿಳಿದರೆ ಜೋಕೆ
Team Udayavani, Apr 30, 2020, 11:54 AM IST
ಧಾರವಾಡ: ತೂಕ, ಅಳತೆಯಲ್ಲಿ ಮೋಸ ಹಾಗೂ ಪಡಿತರದಾರರಿಂದ ಸೇವಾ ವೆಚ್ಚದ ನೆಪದಲ್ಲಿ ಹಣ ವಸೂಲಿ ಮಾಡುವ ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದುಗೊಳಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಖಾತೆ ಸಚಿವ ಕೆ. ಗೋಪಾಲಯ್ಯ ಹೇಳಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ಕೋವಿಡ್ 19 ಸಂದರ್ಭದಲ್ಲಿ ಪಡಿತರ ದಾಸ್ತಾನು, ವಿತರಣೆ ಹಾಗೂ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ವಿತರಣೆ ಕುರಿತಂತೆ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.
ಗ್ರಾಹಕರಿಂದ ಯಾವುದೇ ಸೇವಾ ವೆಚ್ಚವನ್ನು ನ್ಯಾಯಬೆಲೆ ಅಂಗಡಿ ಮಾಲೀಕರು ವಸೂಲಿ ಮಾಡಬಾರದು. ಸರ್ಕಾರವೇ ಅವರಿಗೆ ಸೇವಾ ವೆಚ್ಚ ನೀಡುತ್ತಿದೆ. ಪಡಿತರದಾರರಿಂದ ಯಾರಾದರೂ ಒಂದು ಪೈಸೆ ಹಣ ಪಡೆದರೆ ಅಂತವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಕಂದಾಯ, ಆಹಾರ ಇಲಾಖೆ, ತೂಕ ಮತ್ತು ಅಳತೆ ಇಲಾಖೆ ಅಧಿಕಾರಿಗಳನ್ನು ಒಳಗೊಂಡಂತೆ ತಂಡಗಳನ್ನು ರಚಿಸಿ ಜಿಲ್ಲೆಯ ಎಲ್ಲ 508 ನ್ಯಾಯಬೆಲೆ ಅಂಗಡಿಗಳ ಪಡಿತರ ವಿತರಣೆ ಮೇಲೆ ನಿಗಾ ವಹಿಸಲು ಸೂಚನೆ ನೀಡಿದರು.
ಪಡಿತರ ಚೀಟಿಗಾಗಿ ಅರ್ಜಿ ಹಾಕಿದ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್‌ದಾರರಿಗೆ ರೇಷನ್ ನೀಡಬೇಕು. ಅರ್ಜಿ ಹಾಕಿದವರ ಪಟ್ಟಿಯನ್ನು ಆಯಾ ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಕಟಿಸಬೇಕು. ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ನೀಡಬೇಕು. ಎಪಿಎಲ್ ಕುಟುಂಬ ರೇಷನ್ ಬೇಡಿಕೆ ಸಲ್ಲಿಸಿದರೆ ಒಂದು ಕೆಜಿ ಅಕ್ಕಿಗೆ 15 ರೂ.ನಂತೆ ವಿತರಿಸಲು ಅವಕಾಶವಿದೆ. ಈ ಎಲ್ಲ ಮಾಹಿತಿಯನ್ನು ಜಿಲ್ಲೆಯ ಎಲ್ಲ ನ್ಯಾಯ ಬೆಲೆ ಅಂಗಡಿಗಳಲ್ಲಿ ಪ್ರಕಟಿಸಲು ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚಿಸಿದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಸದಾಶಿವ ಮರ್ಜಿ ಮಾತನಾಡಿ, ಹೊಸ ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಿದ 2105 ಬಿಪಿಎಲ್ ಪಡಿತರ ಚೀಟಿಗಳಿಗೆ 10 ಕೆಜಿಯಂತೆ ಅಕ್ಕಿಯನ್ನು ಉಚಿತವಾಗಿ ಮತ್ತು 2 ಆದ್ಯತೇತರ ಪಡಿತರ ಚೀಟಿಗಳಿಗೆ 10 ಕೆಜಿ ಅಕ್ಕಿಯನ್ನು ಪ್ರತಿ ಕೆಜಿಗೆ 15 ರೂ. ದರದಲ್ಲಿ ವಿತರಿಸಲಾಗಿದೆ. ಜಿಲ್ಲೆಯಲ್ಲಿ ಆಹಾರಧಾನ್ಯ ಪಡೆಯಲು ಇಚ್ಛೆ ವ್ಯಕ್ತಪಡಿಸದೆ ಇರುವ 58,868 ಎಪಿಎಲ್ ಪಡಿತರ ಚೀಟಿದಾರರಿದ್ದು, ಮೇ-2020ರ ಮಾಹೆಯಲ್ಲಿ ಏಕ ವ್ಯಕ್ತಿ ಪಡಿತರ ಚೀಟಿಗೆ 5 ಕೆಜಿಯಂತೆ ಎರಡು ಅಥವಾ ಎರಡಕ್ಕಿಂತ ಮೇಲ್ಪಟ್ಟ ಸದಸ್ಯರ ಪಡಿತರ ಚೀಟಿಗೆ 10 ಕೆಜಿ ಅಕ್ಕಿಯನ್ನು ಪ್ರತಿ ಕೆಜಿಗೆ 15 ರೂ. ದರದಲ್ಲಿ ವಿತರಿಸಲಾಗುವುದು. ಜಿಲ್ಲೆಯಲ್ಲಿ 508 ನ್ಯಾಯಬೆಲೆ ಅಂಗಡಿಗಳಿದ್ದು, ಎಲ್ಲಾ ನ್ಯಾಯಬೆಲೆ ಅಂಗಡಿಗಳನ್ನು ಪಾಸ್ ನ್ಯಾಯಬೆಲೆ ಅಂಗಡಿಗಳಾಗಿ ಪರಿವರ್ತಿಸಲಾಗಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಶಾಸಕರಾದ ಪ್ರಸಾದ ಅಬ್ಬಯ್ಯ, ಸಿ.ಎಂ. ನಿಂಬಣ್ಣವರ, ಕುಸುಮಾವತಿ ಶಿವಳ್ಳಿ, ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ, ಡಿಸಿ ದೀಪಾ ಚೋಳನ್, ಜಿಪಂ ಸಿಇಒ ಡಾ| ಬಿ.ಸಿ. ಸತೀಶ್, ಮಹಾನಗರ ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ಅಪರ ಜಿಲ್ಲಾ ಧಿಕಾರಿ ಶಿವಾನಂದ ಕರಾಳೆ ಇನ್ನಿತರರಿದ್ದರು.
ಗೋದಾಮಿಗೆ ಭೇಟಿ: ನಗರದ ಜ್ಯುಬಿಲಿ ವೃತ್ತದಲ್ಲಿರುವ ಕರ್ನಾಟಕ ರಾಜ್ಯ ಆಹಾರ ನಾಗರಿಕ ಸರಬರಾಜು ನಿಗಮದ ಗೋದಾಮಿಗೆ ಸಚಿವ ಕೆ. ಗೋಪಾಲಯ್ಯ ಭೇಟಿ ನೀಡಿ ಅಕ್ಕಿ ಮತ್ತು ಬೇಳೆಯ ಗುಣಮಟ್ಟ ಪರಿಶೀಲಿಸಿದರು.
ಅನರ್ಹ ರೇಷನ್ ಕಾರ್ಡ್ ರದ್ದು-ದಂಡ ವಸೂಲಿ : ಜಿಲ್ಲೆಯಲ್ಲಿ ಈವರೆಗೆ 906 ಆದ್ಯತಾ ಪಡಿತರ ಚೀಟಿದಾರರು ಸ್ವಇಚ್ಛೆಯಿಂದ ಪಡಿತರ ಚೀಟಿಗಳನ್ನು ಸರೆಂಡರ್ ಮಾಡಿದ್ದು, 2258 ಆದ್ಯತಾ ಪಡಿತರ ಚೀಟಿಗಳನ್ನು ರದ್ದುಪಡಿಸಿ 1008 ಆದ್ಯತಾ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಗಳಾಗಿ ಪರಿವರ್ತಿಸಿ ಅನರ್ಹ ಪಡಿತರ ಚೀಟಿದಾರರಿಂದ 5,19,060 ರೂ. ದಂಡ ವಿಧಿಸಿ ಮೊತ್ತವನ್ನು ಸರ್ಕಾರಕ್ಕೆ ಜಮಾ ಮಾಡಲಾಗಿದೆ. ಕಾನೂನು ಮಾಪನಶಾಸ್ತ್ರ ಇಲಾಖೆಯವರು ಒಟ್ಟು748 ತಪಾಸಣೆಗಳನ್ನು ಕೈಗೊಂಡು 171 ಮೊಕದ್ದಮೆಗಳನ್ನು ಹೂಡಿ 2,13,800 ರೂ. ದಂಡ ವಸೂಲು ಮಾಡಲಾಗಿದೆ ಎಂದು ಸದಾಶಿವ ಮರ್ಜಿ ತಿಳಿಸಿದರು. ಜಿಲ್ಲೆಯಲ್ಲಿ
ಪಡಿತರ ವಿತರಣೆಯಲ್ಲಿ ಅವ್ಯವಹಾರಗಳು ಕಂಡುಬಂದ ಹಿನ್ನೆಲೆಯಲ್ಲಿ 3 ನ್ಯಾಯಬೆಲೆ ಅಂಗಡಿಗಳನ್ನು ಅಮಾನತುಪಡಿಸಿದ್ದು, 7 ನ್ಯಾಯಬೆಲೆ ಅಂಗಡಿದಾರರಿಗೆ ದಂಡ ವಿಧಿಸಿ 4 ನ್ಯಾಯಬೆಲೆ ಅಂಗಡಿದಾರರಿಗೆ ಕಾರಣ ಕೇಳಿ ನೋಟಿಸ್ ನೀಡಿ ಪ್ರಕರಣಗಳನ್ನು ವಿಚಾರಣಾ ಹಂತದಲ್ಲಿರಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 8 ಆಹಾರ ಸಗಟು ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಜಿಲ್ಲೆಯಲ್ಲಿ 70,45,750 ಲೀಟರ್ ಪೆಟ್ರೋಲ್, 14,85,180 ಲೀಟರ್ ಡೀಸೆಲ್ ಹಾಗೂ 2,40,000 ಲೀಟರ್ ಸೀಮೆಎಣ್ಣೆ ದಾಸ್ತಾನಿದ್ದು ಯಾವುದೇ ಕೊರತೆ ಇಲ್ಲ ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
MUST WATCH
ಹೊಸ ಸೇರ್ಪಡೆ
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.