ಸೋಲಿನ ಹತಾಶೆಯಿಂದ ಡಿಕೆಶಿ ಕಣ್ಣೀರು: ಈಶ್ವರಪ್ಪ

•ಕನಕಪುರದ ನಾಟಕ ಕುಂದಗೋಳದಲ್ಲಿ ನಡೆಯಲ್ಲ

Team Udayavani, May 11, 2019, 9:34 AM IST

hubali-tdy-1..

ಹುಬ್ಬಳ್ಳಿ: ಈಶ್ವರಪ್ಪ ಹಾಗೂ ಸಂಸದ ಪ್ರಹ್ಲಾದ ಜೋಶಿ ಜಂಟಿಯಾಗಿ ಪ್ರಚಾರ ನಡೆಸಿದರು.

ಹುಬ್ಬಳ್ಳಿ: ರಾಜ್ಯದಲ್ಲಿ ರೈತರು ಬರದಿಂದ ಸಂಕಷ್ಟದಲ್ಲಿದ್ದಾರೆ. ಇವರ ಬಗ್ಗೆ ಕಣ್ಣೀರು ಹಾಕಬೇಕಾದ ಸಚಿವ ಡಿ.ಕೆ. ಶಿವಕುಮಾರ ಅವರು ಕುಂದಗೋಳ ಕ್ಷೇತ್ರದಲ್ಲಿ ಸೋಲುವುದು ಖಚಿತ ಎನ್ನುವ ಕಾರಣಕ್ಕೆ ಕಣ್ಣೀರು ಹಾಕಿದ್ದಾರೆಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಹುಬ್ಬಳ್ಳಿ ತಾಲೂಕು ಚನ್ನಾಪುರ ಗ್ರಾಮದಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕುಂದಗೋಳದಲ್ಲಿ ಮೈತ್ರಿ ಅಭ್ಯರ್ಥಿ ಸೋಲು ಖಚಿತ. ಹೀಗಾಗಿ ಕುಮಾರಸ್ವಾಮಿ ಹಾಗೂ ದೇವೇಗೌಡರಂತೆ ಅಳುವ ಮೂಲಕ ಜನರನ್ನು ವಂಚಿಸಲು ಡಿ.ಕೆ. ಶಿವಕುಮಾರ ಮುಂದಾಗಿದ್ದಾರೆ. ಈ ಕ್ಷೇತ್ರದ ಜನರು ತುಂಬಾ ಬುದ್ಧಿವಂತರು. ಇವರ ನಾಟಕ ನಡೆಯಲ್ಲ. ಕುಂದಗೋಳ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಚುನಾವಣೆ ಮಾಡಲು ಕಾರ್ಯಕರ್ತರಿಲ್ಲದಂತಾಗಿದೆ. ಹೀಗಾಗಿ ಬೆಂಗಳೂರಿನಿಂದ 87 ಜನ ಬಂದಿದ್ದಾರೆ. ವೇಣುಗೋಪಾಲ ಈ ಪಟ್ಟಿಯನ್ನು ಹಿಡಿದು ಕೊಂಡು ಓಡಾಡುತ್ತಿದ್ದಾರೆ ವಿನಃ ಒಬ್ಬರೂ ಕ್ಷೇತ್ರಕ್ಕೆ ಬಂದಿಲ್ಲ. ಬಿಜೆಪಿ ಕಾರ್ಯಕರ್ತರ ಆರ್ಭಟಕ್ಕೆ ಕೆಲವರು ವಾಪಸ್‌ ಹೋಗಿದ್ದಾರೆ. ಕಾಂಗ್ರೆಸ್‌ನಿಂದ ಯಾರೇ ಬಂದರೂ ಬಿಜೆಪಿ ಅಭ್ಯರ್ಥಿ ಗೆಲುವು ನಿಶ್ಚಿತ ಎಂದರು.

ಕಾಂಗ್ರೆಸ್‌-ಜೆಡಿಎಸ್‌ ನಾಯಕರ ನಡುವೆ ಅಧಿಕಾರಕ್ಕಾಗಿ ಕಚ್ಚಾಟ ನಡೆಯುತ್ತಿದೆ. ರಾಜ್ಯದಲ್ಲಿ ಬರ, ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಈ ಬಗ್ಗೆ ಯಾವುದೇ ಕಾಳಜಿಯಿಲ್ಲ. ಇಂತಹ ಸರ್ಕಾರ ರಾಜ್ಯಕ್ಕೆ ಬೇಕಿಲ್ಲ. ಕಾಂಗ್ರೆಸ್‌ನವರ ಕಚ್ಚಾಟ ನೋಡಿದರೆ ರಾಜ್ಯದಲ್ಲಿ 20-25 ಮುಖ್ಯಮಂತ್ರಿ ಸ್ಥಾನಗಳನ್ನು ಮಾಡಬೇಕಿದೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಾಕಷ್ಟು ಕಚ್ಚಾಟಗಳು ಶುರುವಾಗಿದ್ದು, ಸರ್ಕಾರ ಉಳಿಸಿಕೊಳ್ಳಬೇಕು ಎನ್ನುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ ಎಂದರು.

ಚಿಂಚೋಳಿ-ಕುಂದಗೋಳ ವಿಧಾನಸಭಾ ಉಪ ಚುನಾವಣೆಯಲ್ಲಿ ಪಕ್ಷದ ಪರ ಅಭ್ಯರ್ಥಿಗಳು ಗೆಲ್ಲುವ ಮೂಲಕ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಸಚಿವ ಡಿ.ಕೆ. ಶಿವಕುಮಾರ ಮೊದಲು ಅಳುತ್ತಿರಲಿಲ್ಲ. ಇದೀಗ ಜೆಡಿಎಸ್‌ನವರ ಸಹವಾಸ ದೋಷದಿಂದ ಅಳುವುದನ್ನು ಕಲಿತಿದ್ದಾರೆ. ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ಆದಿಯಾಗಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಎಚ್.ಡಿ. ರೇವಣ್ಣ ಕಣ್ಣೀರು ಹಾಕಿದ್ದರು. ಇದೀಗ ಡಿ.ಕೆ. ಶಿವಕುಮಾರ ಕಣ್ಣೀರು ಹಾಕುವ ಡ್ರಾಮಾ ಮಾಡುತ್ತಿದ್ದಾರೆ. ಇಂತಹ ನಾಟಕಗಳು ಇಲ್ಲಿ ನಡೆಯಲ್ಲ. ಬಿಜೆಪಿ ಕಾರ್ಯಕರ್ತರು ಖರೀದಿ ವಸ್ತುವಲ್ಲ. ಮೊದಲು ನಿಮ್ಮ ನಾಟಕ ಬಂದ್‌ ಮಾಡಿ. ಇಂತಹ ನಾಟಕಗಳನ್ನು ರಾಮನಗರ, ಕನಕಪುರದಲ್ಲಿ ಇಟ್ಟುಕೊಳ್ಳಿ ಎಂದರು.

ಬಿಜೆಪಿ ಅಭ್ಯರ್ಥಿ ಎಸ್‌.ಐ. ಚಿಕ್ಕನಗೌಡರ, ಮುಖಂಡರಾದ ಎಂ.ಆರ್‌. ಪಾಟೀಲ, ಈರಣ್ಣ ಜಡಿ ಇನ್ನಿತರರಿದ್ದರು.

ಡಿಕೆಶಿ ಗಂಟಿಗೆ ಮಾರು ಹೋಗಬೇಡಿ:

ಬುಡರಸಿಂಗಿಯಲ್ಲಿ ಮಾತನಾಡಿದ ಸಂಸದ ಪ್ರಹ್ಲಾದ ಜೋಶಿ, ಈ ಚುನಾವಣೆಯನ್ನು ಇಡೀ ದೇಶವೇ ನೋಡುತ್ತಿದೆ. ಮೈತ್ರಿ ಸರ್ಕಾರ ಕಿತ್ತೂಗೆಯಲು ಸಿದ್ದರಾಮಯ್ಯ ತುದಿಗಾಲಲ್ಲಿ ನಿಂತಿದ್ದಾರೆ. ಈ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ. ಕ್ಷೇತ್ರದ ಜನತೆ ಡಿಕೆಶಿ ಗಂಟಿಗೆ ಮಾರು ಹೋಗಬಾರದು. ದುಡ್ಡು ಹಂಚಿ ಹೋಗುವ ಡಿಕೆಶಿ ಮತ್ತೇ ನಿಮ್ಮ ಕೈಗೆ ಸಿಗಲ್ಲ ಎಂದರು. ಇದೇ ಸಂದರ್ಭದಲ್ಲಿ ಮಾತನಾಡಿದ ತೇಜಸ್ವಿನಿ ಅನಂತಕುಮಾರ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರಲು ಚಿಂಚೋಳಿ ಹಾಗೂ ಕುಂದಗೋಳ ಕ್ಷೇತ್ರದ ಜನರಿಗೆ ಅವಕಾಶ ಒದಗಿ ಬಂದಿದ್ದು, ಕ್ಷೇತ್ರದ ಜನರು ಬಿಜೆಪಿಗೆ ಆಶೀರ್ವಾದ ಮಾಡಬೇಕು ಎಂದರು.
ದೇವಸ್ಥಾನದ ಕಟ್ಟೆ ಮೇಲೆ ಪ್ರಚಾರ:

ಬುಡರಸಿಂಗಿ ಗ್ರಾಮದ ಶ್ರೀ ಸಿದ್ದರಾಮೇಶ್ವರ ದೇವಸ್ಥಾನಕ್ಕೆ ಬಿಜೆಪಿ ನಾಯಕರು ಭೇಟಿ ಕೊಟ್ಟು ದರ್ಶನ ಪಡೆದರು. ಅದಾಗಲೆ ಕಾರ್ಯಕರ್ತರೊಂದಿಗೆ ಮಾತನಾಡುತ್ತಿದ್ದ ನಾಯಕರು ಮಾಧ್ಯಮದವರನ್ನು ಕಂಡೊಡನೆ ದೇವಸ್ಥಾನ ಹೊರಗೆ ಬಂದರು. ಅದೇ ದೇವಸ್ಥಾನ ಕಟ್ಟೆ ಮೇಲೆ ನಿಂತು, ಸಂಸದ ಪ್ರಹ್ಲಾದ ಜೋಶಿ, ಕೆ.ಎಸ್‌.ಈಶ್ವರಪ್ಪ, ತೇಜಸ್ವಿನಿ ಅನಂತಕುಮಾರ ಪ್ರಚಾರ ಭಾಷಣ ನಡೆಸಿದರು. ತೆರೆದ ವಾಹನದಲ್ಲಿ ನಿಂತು ಮಾತನಾಡಬೇಕಿತ್ತು. ಆದರೆ ದೇವಸ್ಥಾನ ಕಟ್ಟೆ ಮೇಲೆ ನಿಂತು ಮಾತನಾಡುತ್ತಿರುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆಗುತ್ತದೆಯಲ್ಲವೇ ಎಂದು ಪಕ್ಷದ ಕಾರ್ಯಕರ್ತರು ಪರಸ್ಪರ ಆಡಿಕೊಳ್ಳುತ್ತಿರುವುದು ಕಂಡು ಬಂತು.

ಟಾಪ್ ನ್ಯೂಸ್

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.