ಸಂಚಾರ ವ್ಯವಸ್ಥೆಗೆ ಅಡಚಣೆ ಮಾಡಬೇಡಿ

Team Udayavani, Apr 5, 2017, 3:02 PM IST

hub7.jpg

ಧಾರವಾಡ: ಲಾರಿ ಮಾಲೀಕರು ನಡೆಸುತ್ತಿರುವ ಮುಷ್ಕರದಿಂದ ಸಾರ್ವಜನಿಕರಿಗೆ ಅಗತ್ಯ ವಸ್ತುಗಳಾದ ಹಾಲು, ಔಷಧಿ, ಪೆಟ್ರೋಲಿಯಂ ಉತ್ಪನ್ನಗಳು, ತರಕಾರಿ, ಅಡುಗೆ ಅನಿಲ , ಮೇವು ಸರಬರಾಜು ಮತ್ತು ಶಾಲೆ-ಕಾಲೇಜುಗಳ  ವಾಹನ ಸಂಚಾರಕ್ಕೆ ಯಾವುದೇ ರೀತಿಯ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ|ಎಸ್‌.ಬಿ.ಬೊಮ್ಮನಹಳ್ಳಿ ಹೇಳಿದರು. 

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಲಾರಿ ಮುಷ್ಕರಕ್ಕೆ ಸಂಬಂಧಿಸಿದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಅಗತ್ಯ ಸಲಹೆ-ಸೂಚನೆ ನೀಡಿದ ಅವರು, ಮುಷ್ಕರ ನಿರತರು ಒತ್ತಾಯ ಪೂರ್ವಕವಾಗಿ ವಾಹನಗಳನ್ನು ತಡೆಯುವ, ಸಂಚಾರ ವ್ಯವಸ್ಥೆಗೆ ಅಡಚಣೆ ತರುವ ಕಾರ್ಯ ಮಾಡಬಾರದೆಂದು ಮನವಿ ಮಾಡಿದರು. 

ಒಂದು ವೇಳೆ ಮುಷ್ಕರ ಮುಂದುವರಿದರೆ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆವುಂಟಾಗದಂತೆ ಸಂಘಟನೆಗಳು ಎಚ್ಚರ ವಹಿಸಬೇಕು. ಜಿಲ್ಲಾಡಳಿತ ಮತ್ತು ಪೊಲೀಸ್‌ ಇಲಾಖೆ ಸೂಕ್ತ ಬಂದೋಬಸ್ತ್ ಹಾಗೂ ಗಸ್ತು ಸಂಚಾರದ ಏರ್ಪಾಡು ಮಾಡಿದೆ. ಆಹಾರ, ತರಕಾರಿ, ಹಾಲು, ಔಷಧಿ, ಮೇವು, ಕುಡಿಯುವ ನೀರು, ಅಡಿಗೆ ಅನಿಲ ಸೇರಿದಂತೆ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುವ ಯಾವುದೇ ವಾಹನಗಳ ಸಂಚಾರಕ್ಕೂ ವ್ಯತ್ಯಯ ಉಂಟಾಗಬಾರದು.

ಅಗತ್ಯ ಬಿದ್ದರೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಸರಕಾರದ ವಿವಿಧ ಇಲಾಖೆಗಳಿಗೆ ಸೇರಿದ ವಾಹನಗಳನ್ನು ಗುರುತಿಸಿ ಅಗತ್ಯ ಸೇವೆಗಳ ಸರಬರಾಜಿಗೆ ಸಿದ್ಧವಾಗಿಟ್ಟುಕೊಂಡಿರಬೇಕು ಎಂದು ಸೂಚನೆ ನೀಡಿದರು. ಪೆಟ್ರೋಲಿಯಂ ಕಂಪೆನಿಗಳೂ ಸಾಕಷ್ಟು ಸಂಗ್ರಹ ಇಟ್ಟುಕೊಂಡಿರಬೇಕು. ಪೆಟ್ರೋಲ್‌ ಬಂಕ್‌ಗಳಲ್ಲಿ ಸರಕಾರಿ ವಾಹನಗಳಿಗೆ ಇಂಧನ ಮೀಸಲಾಗಿಟ್ಟುಕೊಂಡಿರಬೇಕು.

ಸಾರ್ವಜನಿಕರು ತಮ್ಮ ಕುಂದು- ಕೊರತೆಗಳನ್ನು ಸಹಾಯವಾಣಿ ಸಂಖ್ಯೆಗಳ ಮೂಲಕ ಜಿಲ್ಲಾಡಳಿತ ಮತ್ತು ಪೊಲೀಸರ ಗಮನಕ್ಕೆ ತರಬೇಕು ಎಂದರು. ಉತ್ತರ ಕರ್ನಾಟಕ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಗೈಬುಸಾಬ್‌ ಹೊನ್ಯಾಳ ಮಾತನಾಡಿ, ವಿಮೆಯ ಪ್ರಿಮಿಯಂ ಮೊತ್ತ, ಹೆದ್ದಾರಿಗಳಲ್ಲಿನ ಟೋಲ್‌ ದರ ಮತ್ತು ಟೋಲ್‌ ಸಂಗ್ರಹ ಸಂಖ್ಯೆಗಳನ್ನು ಹೆಚ್ಚಿಸಿರುವುದರಿಂದ ಮುಷ್ಕರ ಹೂಡಲಾಗಿದೆ. ನಮ್ಮ ಬೇಡಿಕೆಗಳ ಈಡೇರಿಕೆಗೆ ಶಾಂತಿಯುತವಾಗಿ ಹೋರಾಡುತ್ತೇವೆ ಎಂದರು. 

ಪೊಲೀಸ್‌ ಉಪ ಆಯುಕ್ತ ಜಿನೇಂದ್ರ ಖನಗಾವಿ, ಧಾರವಾಡ ಗ್ರಾಮೀಣ ಡಿವೈಎಸ್‌ಪಿ ಬಿ.ಪಿ.ಚಂದ್ರಶೇಖರ, ಉಪ ಸಾರಿಗೆ ಆಯುಕ್ತ ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ರವೀಂದ್ರ ಕವಲಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಹಿರಿಯ ಉಪ ನಿರ್ದೇಶಕ ಸದಾಶಿವ ಮರ್ಜಿ, ಸಂಚಾರ ಪೊಲೀಸ್‌ ಇನ್‌ಸ್ಪೆಕ್ಟರ್‌ ಶ್ರೀಕಾಂತ ತೋಟಗೆ, ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳಾದ ಗಂಗಾಧರ ಹೊಸಮನಿ, ಶಂಭುಕುಮಾರ ಸುಂಕದ, ರಾಜಮಹ್ಮದ್‌ ಎಸ್‌.ಪಠಾಣ, ಸುನೀಲ ಕಲಾಲ, ಮ್ಯಾಕ್ಸಿಕ್ಯಾಬ್‌ ಮಾಲೀಕರ ಸಂಘದ ಅಧ್ಯಕ್ಷ ಹೆಚ್‌.ಎಂ.ತೋಪಿನಕಟ್ಟಿ ಸಭೆಯಲ್ಲಿದ್ದರು.  

ಟಾಪ್ ನ್ಯೂಸ್

12-bng

Bengaluru: ನಗರದಲ್ಲಿ ಪರಭಾಷಿಕರಿಗೆ ಕನ್ನಡ ಭಾಷೆ ಕಲಿಸುವ “ಆಟೋ ಅಜ್ಮಲ್‌’

ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

Vijayapura: ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

9–karnataka-50

Kannada Sambrama: ಸುವರ್ಣ ಮಹೋತ್ಸವ ವಿಶೇಷ; 50 ವರ್ಷದ ಹರ್ಷಕ್ಕೆ 50 ಕಾರಣ

priyank kharge

Kalaburagi: ಪುನರ್‌ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ

MI: ಸೂರ್ಯ, ಹಾರ್ದಿಕ್‌ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್:‌ ರೋಹಿತ್‌ ಹೇಳಿದ್ದೇನು?

MI: ಸೂರ್ಯ, ಹಾರ್ದಿಕ್‌ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್:‌ ರೋಹಿತ್‌ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Waqf

Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್‌ ಬಿಸಿ!

ಕುರಿ ಕಾಯುತ್ತಲೇ ಹಾಡು ಕಲಿತ ಇಮಾಮಸಾಬಗೆ ರಾಜ್ಯೋತ್ಸವ ಪ್ರಶಸ್ತಿ ಗರಿ; ಡೊಳ್ಳಿನ ಭಾವೈಕ್ಯತೆ

ಕುರಿ ಕಾಯುತ್ತಲೇ ಹಾಡು ಕಲಿತ ಇಮಾಮಸಾಬಗೆ ರಾಜ್ಯೋತ್ಸವ ಪ್ರಶಸ್ತಿ ಗರಿ; ಡೊಳ್ಳಿನ ಭಾವೈಕ್ಯತೆ

ಹುಬ್ಬಳ್ಳಿ ಟೆಕ್ಕಿ 24 ತಾಸು ಡಿಜಿಟಲ್‌ ಅರೆಸ್ಟ್!‌ ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿರ್ಬಂಧ

ಹುಬ್ಬಳ್ಳಿ ಟೆಕ್ಕಿ 24 ತಾಸು ಡಿಜಿಟಲ್‌ ಅರೆಸ್ಟ್!‌ ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿರ್ಬಂಧ

jameer-ak

B.Z. Zameer Ahmed Khan;ನಾನು ಶುದ್ದ ಹಿಂದೂಸ್ಥಾನಿ ಭಾರತೀಯ, 24 ಕ್ಯಾರೆಟ್ ಗೋಲ್ಡ್..

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

12-bng

Bengaluru: ನಗರದಲ್ಲಿ ಪರಭಾಷಿಕರಿಗೆ ಕನ್ನಡ ಭಾಷೆ ಕಲಿಸುವ “ಆಟೋ ಅಜ್ಮಲ್‌’

11-bng

Deepawali: ರಾಜಧಾನಿಯಲ್ಲಿ ದೀಪಾವಳಿ ಬೆಳಕಿನ ಚಿತ್ತಾರ

ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

Vijayapura: ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.