ಮಕ್ಕಳ ಮೇಲೆ ಒತ್ತಡ ಹೇರಬೇಡಿ
Team Udayavani, Jun 11, 2020, 11:54 AM IST
ಹುಬ್ಬಳ್ಳಿ: ಕೋವಿಡ್-19 ಶೈಕ್ಷಣಕ ಕಾಲಘಟ್ಟದಲ್ಲಿ ಶಿಕ್ಷಣದ ವಿಚಾರವಾಗಿ ಪಾಲಕರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳ ಮೇಲೆ ಯಾವುದೇ ಒತ್ತ ಹೇರಬಾರದೆಂದು ಮಾಸಿಕ ರೋಗ ತಜ್ಞ ಡಾ| ಆನಂದ ಪಾಂಡುರಂಗಿ ಹೇಳಿದರು.
ಇಲ್ಲಿನ ಎಸ್‌ಜೆಎಂವಿಎಸ್ ಕಲಾ ಹಾಗೂ ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ಮನಶಾಸ್ತ್ರ ವಿಭಾಗದಿಂದ ಆಯೋಜಿಸಿದ್ದ ಆನ್‌ಲೈನ್ ಬೋಧನಾ ಕಲಿಕೆ ಪ್ರಕ್ರಿಯೆಯಲ್ಲಿ ಕೋವಿಡ್-19 ಮಾನಸಿಕ ಪರಿಣಾಮ ಕುರಿತು ಆನ್ ಲೈನ್ ಮೂಲಕ ಉಪನ್ಯಾಸ ನೀಡಿದ ಅವರು, ಕೋವಿಡ್-19ಗೆ ಹೆದರುವ ಅಗತ್ಯವಿಲ್ಲ. ಒಂದಿಷ್ಟು ಸುರಕ್ಷಿತ ಕ್ರಮ ಅಳವಡಿಸಿಕೊಳ್ಳಬೇಕು. ಸಾಂಪ್ರದಾಯಿಕ ಬೋಧನೆ ಮಾನವನ ಪರಸ್ಪರ ಕ್ರಿಯೆಗೆ ಉತ್ತಮ ವಾತಾವರಣ ಹೊಂದಿದೆ. ಆದರೆ ಇಂತಹ ಬಿಕ್ಕಟ್ಟಿನಲ್ಲಿ ಆನ್ ಲೈನ್ ಬೋಧನೆ ಅನಿವಾರ್ಯಎಂದು ಹೇಳಿದರು.
ಕೋವಿಡ್-19 ಸಂದರ್ಭದಲ್ಲಿ ಬದಲಾವಣೆಗೊಳ್ಳುತ್ತಿರುವ ಆನ್ ಲೈನ್ ಬೋಧನೆ ಹಾಗೂ ಪರೀಕ್ಷೆ ಚರ್ಚೆಯ ವಿಷಯವಾಗಿದೆ. ಶಿಕ್ಷಣ ತಜ್ಞರು, ಸಾಮಾಜಿಕ ಕಾರ್ಯಕರ್ತರು, ಮಾನಸಿಕ ಆರೋಗ್ಯ ತಜ್ಞರು ಒಂದೇ ಅಭಿಪ್ರಾಯ ಹೊಂದಿಲ್ಲ. ಪರೀಕ್ಷೆಗಳನ್ನು ಅನಿರ್ದಿಷ್ಟವಾಗಿ ಮುಂದೂಡುವುದರಿಂದ ವಿದ್ಯಾರ್ಥಿಗಳಲ್ಲಿ ಅನಿಶ್ಚಿತತೆಯ ಕಾಲಹರಣ ಮಾಡುತ್ತದೆ. ಇದರಿಂದ ಆತಂಕ ಮತ್ತು ಖನ್ನತೆಯ ಲಕ್ಷಣಗಳು ಕಂಡು ಬರುತ್ತವೆ. ವಿದ್ಯಾರ್ಥಿಗಳು ಉತ್ತಮ ಕೆಲಸ ಮಾಡುವಲ್ಲಿ ಸಕಾರಾತ್ಮಕವಾಗಿರಬೇಕು. ಉತ್ತಮ ನಿದ್ರೆ, ಪೌಷ್ಟಿಕ ಆಹಾರ, ಸಾಮಾಜಿಕ ಸಂವಹನ, ದೈಹಿಕ ಚಟುವಟಿಕೆಗಳನ್ನು ಹೊಂದಿರಬೇಕು. ಆನ್‌ಲೈನ್ ಬೋಧನೆ ಆಹಾರದಲ್ಲಿ ಉಪ್ಪಿನಕಾಯಿಯಂತೆ ಇರಬೇಕು ಎಂದರು.
ಪ್ರಾಚಾರ್ಯ ಡಾ| ಲಿಂಗರಾಜ ಅಂಗಡಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್ ಸೋಂಕಿಗೆ ಹೆದರಿ ಕಾಲಹರಣ ಮಾವುದಕ್ಕಿಂತ ಹಲವು ಸುರಕ್ಷಿತ ಕ್ರಮ ಅಳವಡಿಸಿಕೊಂಡು ಸಕರಾತ್ಮಕವಾಗಿ ಬದುಕಬೇಕು ಎಂದರು. ಡಾ| ಸುನೀತಾರಾಣಿ ಸ್ವಾಗತಿಸಿದರು. ಕೆ.ಸುಶ್ಮಿತಾ ವಂದಿಸಿದರು. ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.