“ಕೋವಿಡ್ ನೆಪ ಹೇಳಿ ಹಳ್ಳಿ ಭೇಟಿ ನಿಲ್ಲಿಸಬೇಡಿ’
Team Udayavani, Jul 14, 2021, 10:31 AM IST
ಧಾರವಾಡ: ಕೋವಿಡ್-19 ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಕಾಮಗಾರಿಗಳು ಹಾಗೂ ಕ್ಷೇತ್ರಮಟ್ಟದ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಹಿನ್ನೆಡೆಯಾಗಿತ್ತು. ಅ ಧಿಕಾರಿಗಳುಕೋವಿಡ್ ಕಾರಣ ಹೇಳಿ ಕಚೇರಿಗಳಿಗೆಸೀಮಿತವಾಗದೇ ಹೆಚ್ಚೆಚ್ಚು ಕ್ಷೇತ್ರ ಭೇಟಿಗಳನ್ನು ಮಾಡುವ ಮೂಲಕಗ್ರಾಮಮಟ್ಟದಲ್ಲಿ ಕಾಮಗಾರಿ, ಕಾರ್ಯಕ್ರಮಗಳ ಅನುಷ್ಠಾನದಗುಣಮಟ್ಟತೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿಕಾರ್ಯದರ್ಶಿಯಾದ ಜಿಪಂ ಆಡಳಿತಾಧಿಕಾರಿ ಡಾ| ರವಿಕುಮಾರ ಸುರಪುರ ಹೇಳಿದರು.
ಮಂಗಳವಾರ ಜಿಪಂ ಕೆಡಿಪಿ ಸಭೆಯನ್ನು ವರ್ಚ್ಯುವಲ್ ಮೂಲಕಜರುಗಿಸಿ ಅವರು ಮಾತನಾಡಿದರು. ಕೋವಿಡ್ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗೆ ಪ್ರಸಕ್ತ ಸಾಲಿಗೆ ಹೊಸಗುರಿ ನಿಗದಿಯಾಗಿಲ್ಲ. ಕಳೆದಸಾಲಿನ ಗುರಿ ಸಾಧನೆಯಲ್ಲಿ ವಿಳಂಬವಾಗಿದೆ. ಅಧಿಕಾರಿಗಳು ಹೆಚ್ಚು ಕ್ರಿಯಾಶೀಲರಾಗಿ ಬಾಕಿ ಇರುವ ಗುರಿಯ ಕಾಮಗಾರಿಗಳನ್ನು ಮತ್ತು ಕಾರ್ಯಕ್ರಮಗಳನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸಲುಶ್ರಮ ವಹಿಸಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆಗಳು ಸರ್ಕಾರದ ಫ್ಲ್ಯಾಗ್ ಶಿಪ್ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದರು.
ರೇಷ್ಮೆ ಇಲಾಖೆ ಹಾಗೂ ಮೀನುಗಾರಿಕೆ ಇಲಾಖೆಯ ಕಾರ್ಯ ಚಟುವಟಿಕೆಗಳು ವಿಸ್ತಾರವಾಗಬೇಕು. ಈ ಇಲಾಖೆಗಳ ಅಧಿಕಾರಿಗಳು ಹೆಚ್ಚುಕ್ರಿಯಾಶೀಲವಾಗಿ ರೈತರೊಂದಿಗೆಬೆರೆತು ರೇಷ್ಮೆ ಬೆಳೆಯುವ ಪ್ರದೇಶವನ್ನುವಿಸ್ತರಿಸುವ ಮತ್ತು ಮೀನುಗಾರಿಕೆಯನ್ನುಉತ್ತಮಪಡಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸೂಚಿಸಿದರು.
ಜಿಪಂ ಸಿಇಒ ಡಾ|ಸುಶೀಲಾ ಬಿ. ಮಾತನಾಡಿ, ಜಿಲ್ಲೆಯ ವಿವಿಧ ಇಲಾಖೆಗಳ ಕಾಮಗಾರಿ ಮತ್ತು ಕಾರ್ಯಕ್ರಮಗಳ ಅನುಷ್ಠಾನದ ಕುರಿತು ವಿವಿಧ ಹಂತಗಳಲ್ಲಿ ಪ್ರಗತಿ ಪರಿಶೀಲನೆ ಮಾಡುವ ಮೂಲಕ ಸೂಕ್ತ ನಿರ್ದೇಶನ ನೀಡಲಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಕ್ರಮಗಳನ್ನು ಮತ್ತು ನರೇಗಾಯೋಜನೆಯ ಕಾಮಗಾರಿಗಳನ್ನುನಿರಂತರ ಭೇಟಿ ಮೂಲಕ ಸ್ವಯಂಪರಿಶೀಲನೆ ಮಾಡಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಸುಮಾರು 71 ಮಕ್ಕಳು ಅಪೌಷ್ಟಿಕತೆ ಹೊಂದಿದ್ದು, ಅಂತಹಮಕ್ಕಳನ್ನು ಆರೋಗ್ಯ ಇಲಾಖೆಯವೈದ್ಯರು ನಿರಂತರವಾಗಿ ನಿಗಾ ವಹಿಸುವ, ಆರೋಗ್ಯ ಪರೀಕ್ಷಿಸುವ ಕಾರ್ಯವನ್ನುಮಾಡುವಂತೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಮೂಲಕ ಅಗತ್ಯ ಪೌಷ್ಟಿಕಾಂಶದ ಆಹಾರಗಳನ್ನು ಪೂರೈಸುವಂತೆ ನಿರ್ದೇಶಿಸಿ ಸ್ವತಃ ಗಮನಿಸಲಾಗುತ್ತಿದೆ ಎಂದು ತಿಳಿಸಿದರು.
ಜಿಪಂ ಉಪಕಾರ್ಯದರ್ಶಿ ರೇಖಾ ಡೊಳ್ಳಿನ, ಯೋಜನಾ ನಿರ್ದೇಶಕಬಿ.ಎಸ್. ಮುಗನೂರಮಠ, ಆಹಾರಮತ್ತು ನಾಗರಿಕ ಪೂರೈಕೆ ಇಲಾಖೆ ಜಂಟಿನಿರ್ದೇಶಕ ವಿನಾಯಕಪಾಲನಕರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ ಬಿಜಾಪುರ, ಸಮಾಜ ಕಲ್ಯಾಣ ಇಲಾಖೆಜಂಟಿನಿರ್ದೇಶಕ ಎನ್.ಆರ್. ಪುರುಷೋತ್ತಮ ಮೊದಲಾದವರು ಪ್ರಗತಿ ವರದಿ ಮಂಡಿಸಿದರು. ಜಿಪಂ ಮುಖ್ಯ ಯೋಜನಾಧಿಕಾರಿ ದೀಪಕ್ ಮಡಿವಾಳರ ಸ್ವಾಗತಿಸಿ, ಸಭೆ ನಿರ್ವಹಿಸಿದರು.
ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಹಾಸ್ಟೆಲ್ ನೀಡಿ :
ಜು. 19 ಮತ್ತು 20ರಂದು ಜರುಗುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುವ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಯ ಅ ಧೀನದಲ್ಲಿ ಬರುವ ಎಲ್ಲ ವಸತಿನಿಲಯಗಳಲ್ಲಿ ದಾಖಲಾಗಿರುವ ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸಬೇಕು.ಜಿಲ್ಲೆಯ ವಿವಿಧ ಗ್ರಾಮಗಳಿಂದ ಬಂದಿರುವ ವಿದ್ಯಾರ್ಥಿಗಳು ವಸತಿನಿಲಯಗಳಿಗೆ ದಾಖಲಾಗಿರುತ್ತಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಬಂದಾಗ ಅವರಿಗೆ ವಸತಿ ಸಮಸ್ಯೆಯಾಗದಂತೆ ಕ್ರಮವಹಿಸಿ ಅವರಿಗೆ ವಸತಿ ಕಲ್ಪಿಸಬೇಕು. ಪರೀಕ್ಷೆಗೆ ಮೂರ್‍ನಾಲ್ಕು ದಿನ ಮುಂಚಿತವಾಗಿ ವಿದ್ಯಾರ್ಥಿಗಳು ಬಂದರೂ ಅವರಿಗೆ ವಸತಿನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ| ರವಿಕುಮಾರ ಸುರಪುರ ತಿಳಿಸಿದರು.
ಮುಂಗಾರು ಹಂಗಾಮಿನಲ್ಲಿ ಮಳೆ ಉತ್ತಮವಾಗಿರುವುದರಿಂದ ಜಿಲ್ಲೆಯಲ್ಲಿ ನಿರೀಕ್ಷೆ ಮೀರಿ ಬಿತ್ತನೆ ಕಾರ್ಯ ನಡೆದಿದೆ. ಯಾವುದೇಮಾರಾಟಗಾರರು ನಕಲಿ ಬೀಜ, ಗೊಬ್ಬರ, ಕೀಟನಾಶಕ ಮತ್ತು ಕಳಪೆ ಮಟ್ಟದ ಔಷಧಗಳನ್ನು ಮಾರಾಟ ಮಾಡಿ ರೈತರಿಗೆ ಮೋಸ ಮಾಡುವುದನ್ನುತಡೆಗಟ್ಟಲು ಕೃಷಿ ಅಧಿಕಾರಿಗಳು ಮಾರಾಟ ಮಳಿಗೆಗಳಿಗೆ ಅನಿರೀಕ್ಷಿತ ಭೇಟಿನೀಡುವ ಮೂಲಕ ಪರಿಶೀಲನೆ ಕೈಗೊಳ್ಳಬೇಕು. ಕಳಪೆ ಗುಣಮಟ್ಟದ ಅಥವಾನಕಲಿ ಬೀಜ, ಗೊಬ್ಬರ, ಕೀಟನಾಶಕ ಮಾರಾಟ ಕಂಡುಬಂದರೆ ತಕ್ಷಣ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳಬೇಕು.– ಡಾ|ರವಿಕುಮಾರ ಸುರಪುರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.