ಮನೆ ಬಾಗಿಲಿಗೇ ಬರುತ್ತೆ ತರಕಾರಿ-ದಿನಸಿ

ತಳ್ಳುಗಾಡಿ ವ್ಯಾಪಾರಕ್ಕೆ ಆದ್ಯತೆ! ­ಪರಿಣಾಮಕಾರಿ ಅನುಷ್ಠಾನಕ್ಕೆ ಪಾಲಿಕೆ ಸಿದ್ಧತೆ! ­ಬಾಧ್ಯತೆ ವಹಿಸಲಿ ಜನತೆ

Team Udayavani, May 11, 2021, 9:30 AM IST

kguyyyt

ವರದಿ : ಹೇಮರಡ್ಡಿ ಸೈದಾಪುರ

ಹುಬ್ಬಳ್ಳಿ: ಕೋವಿಡ್ ಸೋಂಕಿನ ಎರಡನೇ ಅಲೆ ರುದ್ರನರ್ತನದ ಸರಪಳಿ ಕತ್ತರಿಸಲು ಜನರ ಓಡಾಟಕ್ಕೆ ಬ್ರೇಕ್‌ ಹಾಕಬೇಕಾಗಿದ್ದು, ತರಕಾರಿ, ದಿನಸಿ ವಸ್ತುಗಳ ಖರೀದಿಗೆ ಅಂಗಡಿಗೆ ಹೋಗುವ ಬದಲು ಮನೆ ಬಾಗಿಲಿಗೆ ವಸ್ತುಗಳನ್ನು ದೊರಕಿಸುವತ್ತ ಮಹಾನಗರ ಪಾಲಿಕೆ ಮುಂದಾಗಿದೆ.

ಎರಡನೇ ಅಲೆಯ ತೀವ್ರತೆ ಹೆಚ್ಚಾಗುತ್ತಿದ್ದು, ಮುಂದೆ ಮೂರನೇ ಅಲೆಯ ಆಂತಕವೂ ಆವರಿಸಿದೆ. ದಿನ ಕಳೆದಂತೆಲ್ಲಾ ಸೋಂಕಿತರ ಸಾವಿನ ಪ್ರಮಾಣ ಕೂಡ ಹೆಚ್ಚಾಗುತ್ತಿದೆ. ಈಗಾಗಲೇ ಸಮುದಾಯಕ್ಕೆ ಹಬ್ಬಿರುವ ಸೋಂಕಿನ ಸರಪಳಿ ಕತ್ತರಿಸಲು ಸರಕಾರ ಹಲವು ಪ್ರಯೋಗಗಳಿಗೆ ಮುಂದಾಗಿದೆ.

ಅಗತ್ಯ ವಸ್ತುಗಳ ಖರೀದಿ, ತುರ್ತು ಕಾರ್ಯಗಳು, ಒಂದಿಷ್ಟು ಇಲಾಖೆ, ಕೈಗಾರಿಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ ಅಗತ್ಯ ವಸ್ತುಗಳ ಖರೀದಿಗೆ ಜನರು ಹೊರ ಬರಬಾರದು. ಆದಷ್ಟು ಜನರು ಮನೆಯಲ್ಲಿದ್ದು ಸೋಂಕು ಹರಡದಂತೆ ತಡೆಯುವ ಕೆಲಸ ಆಗಬೇಕಿದೆ. ಈ ನಿಟ್ಟಿನಲ್ಲಿ ಹು-ಧಾ ಮಹಾನಗರ ಪಾಲಿಕೆ ಒಂದು ಹೆಜ್ಜೆ ಮುಂದೆ ಹೋಗಿ ತರಕಾರಿ ಆಯಾ ಪ್ರದೇಶಗಳಿಗೆ ಕಳುಹಿಸುವುದು. ದಿನಸಿ ವಸ್ತುಗಳನ್ನು ಡೋರ್‌ ಡೆಲಿವರಿ ಕೊಡಿಸುವ ಕಾರ್ಯಕ್ಕೆ ಚಿಂತೆನೆ ನಡೆಸಿದೆ.

ಪಾಸ್‌ ಅಗತ್ಯವಿಲ್ಲ: ತರಕಾರಿ ಸಂತೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ತಾತ್ಕಾಲಿಕ ಸಂತೆ ಮಾರುಕಟ್ಟೆಗಳಿಗೂ ಕೂಡ ಬ್ರೇಕ್‌ ಹಾಕಲಾಗಿದೆ. ಒಂದೇ ಕಡೆ ಕುಳಿತು ತರಕಾರಿ ಮಾರಾಟ ಮಾಡಲು ಪಾಲಿಕೆ ಹಾಗೂ ಪೊಲೀಸರು ಅವಕಾಶ ನೀಡುತ್ತಿಲ್ಲ. ಇದರಿಂದ ಜನರಿಗೆ ಸಕಾಲಕ್ಕೆ ತರಕಾರಿ ದೊರೆಯದಂತಾಗಿದೆ. ಅವಳಿನಗರದಲ್ಲಿ ಸುಮಾರು 4000ಕ್ಕೂ ಹೆಚ್ಚು ತರಕಾರಿ ಹಾಗೂ ಹಣ್ಣಿನ ವ್ಯಾಪಾರಿಗಳಿದ್ದು, ತಳ್ಳುವ ಗಾಡಿಗಳ ಮೂಲಕ ಮಾರಾಟ ಮಾಡುವುದಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

ಕಳೆದ ವರ್ಷ ಈ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲಾಗಿತ್ತು. 930 ವ್ಯಾಪಾರಿಗಳಿಗೆ ಅವಕಾಶ ನೀಡಿ ಓಡಾಡಿಕೊಂಡು ಮಾರಾಟ ಮಾಡಲು ಪಾಸ್‌ ವಿತರಿಸಿ, ಪಾಲಿಕೆ ವೆಬ್‌ಸೈಟ್‌ನಲ್ಲಿ ವಾರ್ಡ್‌ ವಾಡು ವ್ಯಾಪಾರಿಗಳ ಮೊಬೈಲ್‌ ಸಂಖ್ಯೆ ಹಾಗೂ ಅವರ ಮಾಹಿತಿಯ ಪಟ್ಟಿ ಪ್ರಕಟಿಸಲಾಗಿತ್ತು. ಈಗಾಗಲೇ ಎಲ್ಲ ಸಿದ್ಧತೆಯಿದ್ದು, ಈ ಬಾರಿ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಮುಂದಾಗಿದ್ದಾರೆ. ಕಳೆದ ಬಾರಿಯಂತೆ ಈ ಸಲ ತಳ್ಳುವ ಗಾಡಿಗಳ ಮೂಲಕ ತರಕಾರಿ ವ್ಯಾಪಾರ ಮಾಡಲು ಯಾವುದೇ ಪಾಸ್‌ ಅಗತ್ಯವಿಲ್ಲ. ಈಗಾಗಲೇ ಕೆಲವರು ತಳ್ಳುವ ಗಾಡಿಗಳ ಮೂಲಕ ವ್ಯಾಪಾರ ಮಾಡುತ್ತಿದ್ದು, ಪೊಲೀಸರಾಗಲಿ, ಪಾಲಿಕೆ ಸಿಬ್ಬಂದಿಯಾಗಲಿ ಆಕ್ಷೇಪಿಸುತ್ತಿಲ್ಲ.

ಇನ್ನು ಈ ಬಾರಿ ಕರ್ಫ್ಯೂ ಆರಂಭದಿಂದಲೂ ಹೋಟೆಲ್‌ಗ‌ಳಿಂದ ತಿಂಡಿ, ಊಟ ಪಾರ್ಸಲ್‌ಗೆ ಅನುಮತಿಸಲಾಗಿದೆ. ಇದಕ್ಕಾಗಿ ಒಂದಿಷ್ಟು ಜನರು ಬಂದು ಹೋಗುವುದು ನಡೆಯುತ್ತಿದೆ. ಜೊಮ್ಯಾಟೋ, ಸ್ವಿಗ್ಗಿಯಂತಹ ಕಂಪನಿಗಳ ಮೂಲಕವೇ ಗ್ರಾಹಕರಿಗೆ ಪಾರ್ಸಲ್‌ ತಲುಪಿಸುವ ಕಾರ್ಯ ಮತ್ತಷ್ಟು ಪರಿಣಾಮಕಾರಿಯಾಗಿಸುವ ಕೆಲಸ ನಡೆಯುತ್ತಿದೆ. ಪಾಲಿಕೆಯ ಈ ಕಸರತ್ತಿಗೆ ವ್ಯಾಪಾರಿಗಳ ಹಾಗೂ ಜನರ ಸಹಕಾರ ದೊರೆತರೆ ಅಗತ್ಯ ವಸ್ತುಗಳ ಖರೀದಿಗಾಗಿ ಹೊರಬರುವುದಕ್ಕೆ ಒಂದಿಷ್ಟು ಕಡಿವಾಣ ಬೀಳಲಿದೆ.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

1-swami-sm-bg

Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Ranji Trophy: ಕರ್ನಾಟಕ ವಿರುದ್ಧ 218 ರನ್‌ ಹಿನ್ನಡೆಯಲ್ಲಿ ಚಂಡೀಗಢ

Ranji Trophy: ಕರ್ನಾಟಕ ವಿರುದ್ಧ 218 ರನ್‌ ಹಿನ್ನಡೆಯಲ್ಲಿ ಚಂಡೀಗಢ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.