ಪೆಟ್ರೋಲ್ ಬಂಕ್‌ನಲ್ಲಿ ಡಬಲ್ ಮರ್ಡರ್
Team Udayavani, May 16, 2019, 1:29 PM IST
ಚನ್ನಮ್ಮ ಕಿತ್ತೂರು: ಕಿತ್ತೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಶಿವಾ ಪೆಟ್ರೋಲ್ ಬಂಕ್‌ನ ಇಬ್ಬರು ಕೆಲಸಗಾರರನ್ನು ಅಪರಿಚಿತ ಬರ್ಬರವಾಗಿ ಕತ್ತು ಕೊಯ್ದು ಕೊಲೆ ಮಾಡಿ ಹಣ ದೋಚಿ ಪರಾರಿಯಾಗಿದ್ದಾನೆ.
ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದ ಮುಸ್ತಾಕಹ್ಮದ ಬೀಡಿ (32) ಹಾಗೂ ಲಿಂಗದಳ್ಳಿ ಗ್ರಾಮದ ಮಂಜುನಾಥ ಪಟ್ಟಣಶೆಟ್ಟಿ(20) ಕೊಲೆಯಾದವರು. ಕಿತ್ತೂರಿನಿಂದ ಐದು ಕಿಮೀ ದೂರದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಇಂಡಿಯನ್ ಆಯಿಲ್ ಕಂಪನಿಯ ಶಿವಾ ಪೆಟ್ರೋಲ್ ಬಂಕ್‌ನಲ್ಲಿ ಈ ಕೆಲಸಗಾರರು ರಾತ್ರಿ ಕೆಲಸ ಮುಗಿಸಿ ಮಲಗಿದ್ದರು. ಬುಧವಾರ ನಸುಕಿನಲ್ಲಿ ಘಟನೆ ನಡೆದಿದೆ.
ಎಂದಿನಂತೆ ಇವರಿಬ್ಬರು ಬಂಕ್‌ನ ರಾತ್ರಿ ಪಾಳಿಯ ಕೆಲಸಕ್ಕೆ ಮಂಗಳವಾರ ರಾತ್ರಿ ತೆರಳಿದ್ದರು. ಕೆಲಸ ಮುಗಿದ ಬಳಿಕೆ ಮಂಜುನಾಥ ಬಂಕ್ ಹೊರ ಭಾಗದಲ್ಲಿ ಹಾಗೂ ಮುಸ್ತಾಕ ಬೀಡಿ ಬಂಕಿನ ಒಳಭಾಗದಲ್ಲಿ ನಿದ್ರಿಸುತ್ತಿದ್ದರು.ನಸುಕಿನಲ್ಲಿ ಸ್ಥಳಕ್ಕಾಗಮಿಸಿದ ಅಪರಿಚಿತ ವ್ಯಕ್ತಿಯೊಬ್ಬ ಕೈಯಲ್ಲಿ ಮಾರಕಾಸ್ತ್ರ ಹಿಡಿದು ಹೊರಭಾಗದಲ್ಲಿ ಮಲಗಿದ್ದ ಮಂಜುನಾಥನ ಕತ್ತು ಕೊಯ್ದು ನಂತರ ಒಳಭಾಗದಲ್ಲಿ ಮಲಗಿದ್ದ ಮುಸ್ತಾಕ ಎಂಬಾತನ ಮೇಲೆ ಎರಗಿ ಅವನ ಕತ್ತನ್ನು ಸೀಳಿ ಬಂಕ್‌ನಲ್ಲಿರುವ ಹಣ ದೊಚಿದ್ದಾನೆ ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಆದರೆ ಎಷ್ಟು ಹಣ ದೋಚಲಾಗಿದೆ ಎಂಬ ವಿವರ ತಿಳಿದುಬಂದಿಲ್ಲ.
ಸ್ಥಳಕ್ಕೆ ಭೇಟಿ ನೀಡಿದ ಉತ್ತರ ವಲಯ ಐಜಿಪಿ ಸುಹಾಸ ರಾಘವೇಂದ್ರ ಮಾತನಾಡಿ, ಆರೋಪಿಯ ಸಾಕಷ್ಟು ಕುರುಹುಗಳು ಸಿಸಿ ಕ್ಯಾಮರಾದಿಂದ ದೊರೆತಿದ್ದು ಇವುಗಳ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲು ಬೆಳಗಾವಿ ಎಸ್ಪಿ ನೇತೃತ್ವದಲ್ಲಿ ಬೆಳಗಾವಿಯ ಹಾಗೂ ಧಾರವಾಡದ 100 ಜನ ಪೊಲೀಸ್ ಅಧಿಕಾರಿಗಳ ತಂಡ ರಚಿಸಲಾಗಿದೆ ಎಂದರು.
ಘಟನಾ ಸ್ಥಳಕ್ಕೆ ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲಿಸಿದರು. ಉತ್ತರ ವಲಯ ಐಜಿಪಿ ಸುಹಾಸ ರಾಘವೇಂದ್ರ, ಬೆಳಗಾವಿ ಎಸ್ಪಿ ಸುಧೀರಕುಮಾರ ರೆಡ್ಡಿ, ಬೈಲಹೊಂಗಲ ಡಿವೈಎಸ್ಪಿ ಕರುಣಾಕರ ಶೆಟ್ಟಿ, ಕಿತ್ತೂರು ಸಿಪಿಐ ರಾಘವೇಂದ್ರ ಹವಾಲ್ದಾರ, ಪಿಎಸೈ ಸಂಜೀವ ಕಲ್ಲೂರ ಉಪಸ್ಥಿತರಿದ್ದರು. ನಂತರ ಧಾರವಾಡ ಜಿಲ್ಲಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಿತ್ತೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.