ಡಾ| ಬಾಬಾಸಾಹೇಬ ವಿಶ್ವ ರತ್ನ
Team Udayavani, Apr 15, 2018, 4:20 PM IST
ಬೆಳಗಾವಿ: ಅಸ್ಪೃಶ್ಯತೆ ಹಾಗೂ ಅಸಮಾನತೆಯ ನೋವುಂಡು ವಿಶ್ವರತ್ನವಾಗಿ ಹೊರಹೊಮ್ಮಿದ ಡಾ| ಬಾಬಾಸಾಹೇಬ ಅಂಬೇಡ್ಕರ ಪ್ರತಿಪಾದಿಸಿದ ಧಾರ್ಮಿಕ ಸ್ವಾತಂತ್ರ್ಯ ಮತ್ತು ಬದುಕಿನ ಹಕ್ಕು ಸರ್ವಕಾಲಕ್ಕೂ ಪ್ರಸ್ತುತ ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಅಲೋಕಕುಮಾರ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ನಗರದ ಡಾ| ಬಿ.ಆರ್. ಅಂಬೇಡ್ಕರ್ ಉದ್ಯಾನವನದಲ್ಲಿ ಶನಿವಾರ ನಡೆದ ಡಾ| ಬಾಬಾಸಾಹೇಬ ಅಂಬೇಡ್ಕರ ಅವರ ಜನ್ಮದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ತೀವ್ರ ಸಾಮಾಜಿಕ ವಿರೋಧದ ನಡುವೆಯೂ ಅಸಮಾನತೆಯ ವಿರುದ್ಧ ಹೋರಾಟ ನಡೆಸಿ ಜಗಮೆಚ್ಚುವ ಸಂವಿಧಾನ ರಚಿಸಿದ ಅಂಬೇಡ್ಕರ ಸಾಧನೆ ಆಗಾಧ. ಶಿಕ್ಷಣದಿಂದ ಮಾತ್ರ ಅಸಮಾನತೆ ಮತ್ತು ಅಸ್ಪೃಶ್ಯತೆ ನಿರ್ಮೂಲನೆ ಸಾಧ್ಯ. ಶಿಕ್ಷಣದ ಮೂಲಕವೇ ಇಂತಹ ಅನಿಷ್ಟಗಳ ನಿರ್ಮೂಲನೆಗೆ ಮುಂದಾಗಬೇಕು. ಅಸ್ಪೃಶ್ಯತೆ ಇನ್ನೂ ಜೀವಂತ ಇರುವುದು ಅಘಾತಕಾರಿ. ಇದನ್ನುಆಚರಿಸುವವರ ವಿರುದ್ಧ ರೌಡಿಶೀಟರ್ ತೆರೆಯಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿ ಜಿಯಾವುಲ್ಲಾ ಎಸ್. ಅಧ್ಯಕ್ಷತೆ ವಹಿಸಿ ಮಾತನಾಡಿ, ಡಾ| ಅಂಬೇಡ್ಕರ್ ಪರಿಶಿಷ್ಟರಿಗಷ್ಟೇ ಮೀಸಲು ಅಲ್ಲ. ಸಮಾಜದ ಎಲ್ಲ ಜನರಿಗೂ ನ್ಯಾಯ ಒದಗಿಸಿದ ನಿಜವಾದ ಜನನಾಯಕ. ಅಂಬೇಡ್ಕರ ಅವರ ರೀತಿ ನಮ್ಮ ಮಕ್ಕಳಲ್ಲಿ ಸ್ವಾಭಿಮಾನ ಬೆಳೆಸಬೇಕು. ಸರ್ಕಾರ ನೀಡಿರುವ ಸೌಲಭ್ಯ ಬೆಳೆಸಿಕೊಂಡು ಉತ್ತಮ ಶಿಕ್ಷಣ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ನಗರ ಪೊಲೀಸ್ ಆಯುಕ್ತ ಡಾ| ಡಿ.ಸಿ. ರಾಜಪ್ಪ ಮಾತನಾಡಿ, ಹಕ್ಕುಗಳಿಗಾಗಿ ಹೋರಾಟ ಅಗತ್ಯ ಎಂಬುದನ್ನು ಸಂವಿಧಾನದ ಮೂಲಕ ತೋರಿಸಿಕೊಟ್ಟವರು ಡಾ| ಅಂಬೇಡ್ಕರ. ಅವರ ಆಶಯದಂತೆ ಸಮಾನತೆಯ ದೃಷ್ಟಿಕೋನ ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.
ಜಿಪಂ ಸಿಇಒ ರಾಮಚಂದ್ರನ್ ಮಾತನಾಡಿ, ಪ್ರಜಾಪ್ರಭುತ್ವ ಯಶಸ್ಸಿಗೆ ಎಲ್ಲರೂ ಮೇ 12ರಂದು ಕಡ್ಡಾಯ ಮತದಾನ ಮಾಡುವ ಮೂಲಕ ಡಾ| ಅಂಬೇಡ್ಕರ ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಡೆಯಬೇಕು ಎಂದರು. ಗೋಕಾಕ ತಾಲೂಕಿನ ಯಾದವಾಡ ಗ್ರಾಮದ ಜೆಎನ್ ಎಸ್ ಪಪೂ ಕಾಲೇಜಿನ ಉಪನ್ಯಾಸಕಿ ಪ್ರಭಾವತಿ ಕಣವಿ ಉಪನ್ಯಾಸ ನೀಡಿ, ಅಪಾರ ಜ್ಞಾನ ಹೊಂದಿದ್ದ ಡಾ| ಅಂಬೇಡ್ಕರ ಅವರು ನಡೆದಾಡುವ ವಿಶ್ವ ವಿದ್ಯಾಲಯವಾಗಿದ್ದರು. ಮನುಷ್ಯರನ್ನು ಮಾನವೀಯತೆಯ ನೆಲೆಗಟ್ಟಿನಲ್ಲಿ ನೋಡಬೇಕೆಂಬುದು ಅಂಬೇಡ್ಕರ ಅವರ ಹೋರಾಟದ ಪ್ರಮುಖ ಆಶಯವಾಗಿತ್ತು ಎಂದರು.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎನ್. ಮುನಿರಾಜು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪರಿಶಿಷ್ಟ ಜಾತಿಯ ಐವರು ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಪಾಲಿಕೆ ಆಯುಕ್ತ ಕೃಷ್ಣಗೌಡ ತಾಯಣ್ಣವರ, ಪರಿಶಿಷ್ಟ ಪಂಗಡಗಳ ಜಿಲ್ಲಾ ಕಲ್ಯಾಣಾಧಿಕಾರಿ ಉಮಾ ಸಾಲಿಗೌಡರ ಇದ್ದರು.
ಅಂಬೇಡ್ಕರ್‌ಗೆ ಗಣ್ಯರ ನಮನ
ಡಾ| ಅಂಬೇಡ್ಕರ ಉದ್ಯಾನವನದಲ್ಲಿ ಬೆಳಗ್ಗೆ ಜಿಲ್ಲಾಧಿಕಾರಿ ಜಿಯಾವುಲ್ಲಾ ಎಸ್. ಡಾ| ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಬೆಳಗಾವಿ ಉತ್ತರ ವಲಯ ಐಜಿಪಿ ಅಲೋಕಕುಮಾರ, ನಗರ ಪೊಲೀಸ್ ಆಯುಕ್ತ ಡಾ| ಡಿ.ಸಿ. ರಾಜಪ್ಪ, ಡಿಸಿಪಿ ಸೀಮಾ ಲಾಟ್ಕರ, ಎಸ್‌ಪಿ ಸುಧಿಧೀರಕುಮಾರ ರೆಡ್ಡಿ, ಜಿಪಂ ಸಿಇಒ ರಾಮಚಂದ್ರನ್ ಆರ್., ಅಪರ ಜಿಲ್ಲಾ ಧಿಕಾರಿ ಎಚ್.ಬಿ. ಬೂದೆಪ್ಪ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎನ್. ಮುನಿರಾಜು ಸೇರಿದಂತೆ ಇತರರು ಇದ್ದರು. ನಂತರ ಜಿಲ್ಲಾ ಧಿಕಾರಿ ಜಿಯಾವುಲ್ಲಾ ಎಸ್. ಹಾಗೂ ಐಜಿಪಿ ಅಲೋಕ ಕುಮಾರ ಅವರು ಡಾ| ಬಿ.ಆರ್. ಅಂಬೇಡ್ಕರ್ ಅವರ ತೊಟ್ಟಿಲು ತೂಗಿ ತೊಟ್ಟಿಲೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಹಿಳೆಯರು ಪಾಲ್ಗೊಂಡಿದ್ದರು.
ಗಮನ ಸೆಳೆದ ಮೆರವಣಿಗೆ
ನಗರದ ಧರ್ಮವೀರ ಸಂಭಾಜಿ ವೃತ್ತದಲ್ಲಿ ಜಿಲ್ಲಾಧಿಕಾರಿ ಜಿಯಾವುಲ್ಲಾ ಎಸ್. ಡಾ| ಬಾಬಾಸಾಹೇಬರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಡಾ| ಬಿ.ಆರ್. ಅಂಬೇಡ್ಕರ್ ಅವರ ಜೀವನ ಸಾಧನೆ ಸಾರುವ ರೂಪಕ ವಾಹನಗಳು ಗಮನ ಸೆಳೆದವು. ಜಾನಪದ ಕಲಾ ತಂಡಗಳ ಮೆರಗು ಗಮನ ಸಳೆಯಿತು. ಅಲಂಕೃತ ವಾಹನದಲ್ಲಿ ಡಾ| ಅಂಬೇಡ್ಕರ್ ನಿಂತ ಭಂಗಿಯ ಭಾವಚಿತ್ರ ಹಾಗೂ ಗೌತಮ ಬುದ್ಧ ಅವರ ಭಾವಚಿತ್ರ ಗಮನ ಸೆಳೆಯಿತು. ಧ್ವನಿವರ್ಧಕಗಳಿಂದ ಮೊಳಗುತ್ತಿದ್ದ ಗೀತೆಗಳಿಗೆ ಹೆಜ್ಜೆ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.