ಡಾ| ಜೋಶಿ ಕಾರ್ಯ ಶ್ಲಾಘನೀಯ
Team Udayavani, Feb 28, 2017, 3:06 PM IST
ಹುಬ್ಬಳ್ಳಿ: ಬಡಜನರಿಗೆ ಉಚಿತವಾಗಿ ನೇತ್ರ ತಪಾಸಣೆ-ಶಸ್ತ್ರಚಿಕಿತ್ಸೆ ಮಾಡುತ್ತಿರುವ ಡಾ| ಎಂ.ಎಂ.ಜೋಶಿ ಅವರ ಕಾರ್ಯ ಶ್ಲಾಘನೀಯ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ರಾಜ್ಯ ಸಚಿವ ಫಗ್ಗನ್‌ಸಿಂಗ್ ಕುಲಾಸ್ತೆ ಹೇಳಿದರು.
ಡಾ| ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆಯ ಸುವರ್ಣ ಮಹೋತ್ಸವ ಪ್ರಯುಕ್ತ ಗೋಕುಲ ಗಾರ್ಡನ್‌ನಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸುಮಾರು 1,80,000 ಜನರಿಗೆ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿರುವುದು ಅದ್ಭುತ ದಾಖಲೆಯಾಗಿದೆ ಎಂದರು.
ಸಂಸದ ಪ್ರಹ್ಲಾದ ಜೋಶಿ ಮಾತನಾಡಿ, ಡಾ| ಎಂ.ಎಂ. ಜೋಶಿಯವರು ಸಮಾಜಕ್ಕೆ ಕೊಡುಗೆ ನೀಡಬೇಕೆಂಬ ಉದ್ದೇಶದಿಂದ ಬಡ ಜನರಿಗೆ ಉಚಿತ-ಗುಣಮಟ್ಟದ ಚಿಕಿತ್ಸೆ ನೀಡುತ್ತಿದ್ದಾರೆ ಎಂದರು. ಅಧ್ಯಕ್ಷತೆ ವಹಿಸಿದ್ದ ಡಾ| ಎಂ.ಎಂ. ಜೋಶಿ ಮಾತನಾಡಿ, ಬಡವರ ಸೇವೆಯೇ ಜನಾರ್ಧನ ಸೇವೆ ಎಂಬುದು ನನ್ನ ನಂಬಿಕೆ ಎಂದರು.
ಡಾ| ಶ್ರೀನಿವಾಸ ಜೋಶಿ ಸಂಸ್ಥೆಯ ಪ್ರಗತಿ ಪಥ ಅವಲೋಕಿಸಿದರು. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ, ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಆರ್‌ಎಸ್‌ಎಸ್ ಅಖೀಲ ಭಾರತ ವ್ಯವಸ್ಥಾ ಪ್ರಮುಖ ಮಂಗೇಶ ಭೆಂಡೆ, ಡಾ| ಕೃಷ್ಣಪ್ರಸಾದ, ಡಾ| ಗುರುಪ್ರಸಾದ, ಡಾ| ಸತ್ಯಮೂರ್ತಿ, ಡಾ| ಉದಪುಡಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
KLE Technological University: ಮುರುಗೇಶ್ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
MUST WATCH
ಹೊಸ ಸೇರ್ಪಡೆ
ಗಂಭೀರ್ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್ ಪೇನ್
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು
BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.