ದಲಿತರ ಏಳ್ಗೆಗೆ ಶ್ರಮಿಸಿದ್ದ ಡಾ| ಜಗಜೀವನರಾಮ್‌


Team Udayavani, Apr 7, 2017, 1:15 PM IST

hub3.jpg

ಧಾರವಾಡ: ದಲಿತರ ಏಳ್ಗೆಗೆ ಶ್ರಮಿಸಿದ ಡಾ|ಬಾಬು ಜಗಜೀವನರಾಮ್‌ ಸ್ವಾತಂತ್ರ ಹೋರಾಟಗಾರ ಹಾಗೂ ರಾಷ್ಟ್ರೀಯವಾದಿ ಕೂಡ ಆಗಿದ್ದರು ಎಂದು ಮೈಸೂರು ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ|ಕೆ.ಸದಾಶಿವ ಹೇಳಿದರು. 

ಕರ್ನಾಟಕ ವಿವಿಯಲ್ಲಿ ಪ್ರಸಕ್ತ ಸಾಲಿಗೆ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಡಾ|ಬಾಬು ಜಗಜೀವನರಾಮ್‌ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದಿಂದ ಗೋಲ್ಡನ್‌ ಜ್ಯುಬಿಲಿ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ಡಾ|ಬಾಬು ಜಗಜೀವನರಾಮ್‌ ಅವರ 110 ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಡಾ|ಬಾಬು ಜಗಜೀವನರಾಮ್‌ ಇಂಗ್ಲಿಷ್‌, ಹಿಂದಿ, ಬಂಗಾಳಿ, ಸಂಸ್ಕೃತ, ಭಾಷೆಗಳಲ್ಲಿ ಪರಿಣಿತಿ ಹೊಂದಿದ್ದರು. ಗಾಂಧಿಧೀಜಿ ತಮ್ಮ ಹರಿಜನ ಪತ್ರಿಕೆಯಲ್ಲಿ “ಅಗ್ನಿಯಲ್ಲಿ ಪುಟವಿಟ್ಟ ಚಿನ್ನ’ ಎಂದು ಅವರನ್ನು ಕೊಂಡಾಡಿದ್ದರು. ಪ್ರತಿಯೊಬ್ಬ ವ್ಯಕ್ತಿ ತಮ್ಮ ಜಾತಿಯನ್ನು ಮೀರಿ ಬೆಳೆಯಬೇಕೆಂಬುದು ಅವರ ಆಶಯವಾಗಿತ್ತು ಎಂದರು. 

ಮತಾಂತರ ವಿಷಯದಲ್ಲಿ ಡಾ|ಬಿ.ಆರ್‌ ಅಂಬೇಡ್ಕರ್‌ ಅವರೊಂದಿಗೆ ತಾತ್ವಿಕ ವಿರೋಧ ಹೊಂದಿದ್ದ ಬಾಬು ಜಗಜೀವನರಾಮ್‌ ಅವರು ಅಂಬೇಡ್ಕರ್‌ ಮತಾಂತರವಾಗುವುದನ್ನು ತಡೆಯಲು ಪ್ರಯತ್ನಿಸಿದ್ದರು. ಆದರೆ ದಲಿತರ ಹಕ್ಕುಗಳು ನ್ಯಾಯದ ವಿಷಯದಲ್ಲಿ ಇಬ್ಬರಿಗೂ ಸಾಮ್ಯತೆ ಇತ್ತು ಎಂದರು. 

ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ|ಪ್ರಮೋದ ಬಿ ಗಾಯಿ ಮಾತನಾಡಿ, ಡಾ|ಬಾಬು ಜಗಜೀವನರಾಮ್‌ ಭಾರತ ಕಂಡ ಅಪರೂಪದ ನಾಯಕ. ದೇಶದ ವಿವಿಧ ವಿವಿಗಳಲ್ಲಿ ಅವರ ಹೆಸರಿನ ಅಧ್ಯಯನ ಪೀಠಗಳು ಕಾರ್ಯ ನಿರ್ವಹಿಸುತ್ತಿವೆ ಎಂದರು. ಮೈಸೂರು ವಿವಿಯಲ್ಲಿ ಡಾ|ಬಾಬು ಜಗಜೀವನರಾಮ್‌ ಅವರ ಕುರಿತು 12  ಸಂಪುಟಗಳನ್ನು ಹೊರ ತಂದಿರುವ ಪ್ರೊ| ಕೆ.ಸದಾಶಿವ ಅವರನ್ನು ಕುಲಪತಿಗಳು ಶಾಲು ಹೊದಿಸಿ ಸನ್ಮಾನಿಸಿದರು. 

ಕುಲಸಚಿವ ಪ್ರೊ|ಎಮ್‌.ಎನ್‌.ಜೋಶಿ ಸ್ವಾಗತಿಸಿದರು. ಮೌಲ್ಯಮಾಪನ ಕುಲಸಚಿವ ಎನ್‌.ವಾಯ್‌. ಮಟ್ಟಿಹಾಳ ಪರಿಚಯಿಸಿದರು. ವಿತ್ತಾಧಿಧಿಕಾರಿ ಆರ್‌.ಎಲ್‌. ಹೈದ್ರಾಬಾದ ಉಪಸ್ಥಿತರಿದ್ದರು. ಸಂಯೋಜಕ ಪ್ರೊ|ಹರೀಶ ರಾಮಸ್ವಾಮಿ ವಂದಿಸಿದರು.

ಟಾಪ್ ನ್ಯೂಸ್

bairati suresh

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

1-rss

Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

bairati suresh

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.