ಸೂಚನಾ ಫ‌ಲಕವಿಲ್ಲದೆ ಚಾಲಕರ ಪರದಾಟ

•ದೇಸಾಯಿ ವೃತ್ತದಲ್ಲಿ ಕಾಮಗಾರಿ ಹಿನ್ನೆಲೆ ರಸ್ತೆ ಬಂದ್‌•ಸಿಲುಕಿಕೊಳ್ಳುತ್ತಿರುವ ಭಾರೀ ವಾಹನಗಳು

Team Udayavani, May 10, 2019, 11:48 AM IST

hubali-tdy-3..

ಹುಬ್ಬಳ್ಳಿ: ದೇಸಾಯಿ ವೃತ್ತದಲ್ಲಿ ನಡೆಯುತ್ತಿರುವ ಅಂಡರ್‌ಪಾಸ್‌-ಮೇಲ್ಸೆತುವೆ ಕಾಮಗಾರಿ.

ಹುಬ್ಬಳ್ಳಿ: ಇಲ್ಲಿನ ದೇಸಾಯಿ ವೃತ್ತದ ಬಳಿ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ವಾಹನ ಸಂಚಾರ ಸಂಪೂರ್ಣ ಬಂದ್‌ ಮಾಡಲಾಗಿದೆ. ಆದರೆ, ಹೊರ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ಬರುವ ಭಾರಿ ವಾಹನಗಳ ಚಾಲಕರಿಗೆ ಸಮರ್ಪಕ ಮಾಹಿತಿ ಇಲ್ಲದೆ ಇದೇ ಮಾರ್ಗದಲ್ಲಿ ಸಂಚರಿಸಿ ನಂತರ ಪರದಾಡುವಂತಾಗಿದೆ.

ಒಂದು ವಾರದಿಂದ ಕೋರ್ಟ್‌ ವೃತ್ತದಿಂದ ಕೇಶ್ವಾಪುರ ಮಾರ್ಗವಾಗಿ ತೆರಳುವ ರಸ್ತೆ ಸಂಪೂರ್ಣ ಬಂದ್‌ ಮಾಡಲಾಗಿದೆ. ಆದರೆ ಈ ಮಾರ್ಗದಿಂದ ತೆರಳುವ ವಾಹನಗಳಿಗೆ ಈ ಭಾಗದಲ್ಲಿ ರಸ್ತೆ ಬಂದ್‌ ಆಗಿದೆ ಎಂದು ಒಂದೇ ಒಂದು ಫಲಕವಿಲ್ಲ. ಅದೂ ಅಲ್ಲದೇ ದ್ವಿಪಥದಲ್ಲಿ ಒಂದು ರಸ್ತೆ ಬಂದ್‌ ಮಾಡಿ, ಇನ್ನೊಂದು ರಸ್ತೆ ತೆರೆದು ಬಿಟ್ಟಿದ್ದು, ಆ ರಸ್ತೆಯ ಮೂಲಕ ಸಾಗುವ ವಾಹನಗಳು ಮುಂದೆ ದಾರಿ ಇಲ್ಲದೆ ಸಿಕ್ಕಿಹಾಕಿಕೊಳ್ಳುತ್ತಿವೆ. ಸೋಮವಾರ ರಾತ್ರಿ ಭಾರಿ ವಾಹನವೊಂದು ರಸ್ತೆ ಮಧ್ಯದಲ್ಲಿ ಸಿಕ್ಕಿಕೊಂಡಿತ್ತು. ಹಿಂಬದಿ ವಾಹನ ಚಲಾಯಿಸಲೂ ಆಗದೆ, ಮುಂದೆ ಸಾಗಲೂ ಆಗದೆ ರಸ್ತೆಯ ಮಧ್ಯದಲ್ಲಿ ಸಿಕ್ಕಿಕೊಂಡಿತ್ತು.

ಮಾರ್ಗಸೂಚಿ ಅವಶ್ಯ: ದೇಸಾಯಿ ವೃತ್ತದಲ್ಲಿ ಅಂಡರ್‌ಪಾಸ್‌ ನಿರ್ಮಾಣ ಮಾಡುವ ಕಾರಣಕ್ಕೆ ಕಳೆದ ಕೆಲವು ತಿಂಗಳಿಂದ ಕೇಶ್ವಾಪುರ ಮಾರ್ಗದಲ್ಲಿ ತೆರಳುವ ಭಾರಿ ವಾಹನಗಳನ್ನು ಬಂದ್‌ ಮಾಡಲಾಗಿತ್ತು. ಆದರೆ ಯಾವುದೇ ಮಾರ್ಗಸೂಚಿ ಇರಲಿಲ್ಲ. ಇದರಿಂದ ಸಾರಿಗೆ ಬಸ್‌ ಸೇರಿದಂತೆ ಹಲವು ವಾಹನಗಳು ಇದೇ ಮಾರ್ಗದಲ್ಲಿಯೇ ಸಾಗುತ್ತಿದ್ದವು. ಆದರೆ ಇದೀಗ ಸಂಪೂರ್ಣ ರಸ್ತೆ ಬಂದ್‌ ಮಾಡಲಾಗಿದೆ. ಆದರೆ ವಾಹನ ಚಾಲಕರು ಹೇಗೆ ತೆರಳಬೇಕು ಎನ್ನುವ ಒಂದೇ ಒಂದು ಫಲಕ ಹಾಕಲಾಗಿಲ್ಲ. ಸಂಬಂಧಿಸಿದ ಇಲಾಖೆಯವರು ಕೂಡಲೇ ವಾಹನ ಸಂಚಾರಕ್ಕೆ ಸೂಕ್ತ ಮಾರ್ಗಸೂಚಿ ಅಳವಡಿಡಿ ಆಗುತ್ತಿರುವ ತೊಂದರೆ ಸರಿಪಡಿಸಬೇಕು ಎಂಬುದು ವಾಹನ ಚಾಲಕರ ಅಳಲಾಗಿದೆ.

ದೇಸಾಯಿ ವೃತ್ತದಲ್ಲಿ ರಸ್ತೆ ಕಾಮಗಾರಿ ನಡೆಸುತ್ತಿದ್ದು, ಸ್ಥಳೀಯರಿಗೆ ತಿಳಿದಿದೆ. ಆದರೆ ಪರ ಊರುಗಳಿಂದ ಆಗಮಿಸುವ ವಾಹನ ಚಾಲಕರಿಗೆ ತಿಳಿಯದೇ ಸಮಸ್ಯೆ ಉಂಟಾಗುತ್ತಿದೆ. ಆದ್ದರಿಂದ ಚನ್ನಮ್ಮ ವೃತ್ತದಲ್ಲಿ ಹಾಗೂ ಕೋರ್ಟ್‌ ವೃತ್ತದಲ್ಲಿ ರಸ್ತೆ ಬಂದ್‌ ಮಾಡಿರುವ ಕುರಿತು ದೊಡ್ಡ ಫಲಕಗಳನ್ನು ಅಳವಡಿಸುವ ಮೂಲಕ ವಾಹನ ಚಾಲಕರಿಗೆ ತಿರುವು ಪಡೆದುಕೊಂಡು ತೆರಳಲು ಅವಕಾಶ ಕಲ್ಪಿಸಿಕೊಡಬೇಕು.-ಮಹ್ಮದ್‌ ಜುಬೇರ, ಲಾರಿ ಚಾಲಕ

ಚನ್ನಮ್ಮ ವೃತ್ತದಿಂದ ದೇಸಾಯಿ ವೃತ್ತದ ಮೂಲಕ 45 ದಿನಗಳ ವರೆಗೆ ಯಾವುದೇ ವಾಹನಗಳನ್ನು ಬಿಡುವುದಿಲ್ಲ. ಈಗಾಗಲೇ ಕ್ಲಬ್‌ ರಸ್ತೆ ಒಂದು ಭಾಗವನ್ನು ಬಂದ್‌ ಮಾಡಿದ್ದು, ಇನ್ನೊಂದು ಭಾಗವನ್ನು ಬಂದ್‌ ಮಾಡಿ ಯಾವುದೇ ದೊಡ್ಡ ವಾಹನಗಳನ್ನು ಬಿಡದಂತೆ ನೋಡಿಕೊಳ್ಳಲಾಗುವುದು. ಕೋರ್ಟ್‌ ವೃತ್ತದಲ್ಲಿ ಸಿಬ್ಬಂದಿ ನೇಮಿಸಿ ಮುಂಚಿತವಾಗಿ ವಾಹನ ಸವಾರರಿಗೆ ತಿಳಿಯುವಂತೆ ಮಾರ್ಗಸೂಚಿ ಅಳವಡಿಸಲಾಗುವುದು.-ಎಸ್‌.ಎಂ. ಸಂದಿಗವಾಡ, ಸಂಚಾರಿ ಎಸಿಪಿ

ಮೇ 12ರಂದು ಅಂಡರ್‌ಪಾಸ್‌ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಹೇಳಲಾಗುತ್ತಿದೆ. ಆದರೆ ಅದು ಕೂಡಾ ದೇಶಪಾಂಡೆ ನಗರ ಕಡೆಯಿಂದ ಆಗಮಿಸುವ ಹಾಗೂ ಪಿಂಟೋ ರಸ್ತೆಯಿಂದ ಆಗಮಿಸುವ ವಾಹನಗಳ ಸಂಚಾರಕ್ಕೆ ಮುಕ್ತವಾಗಲಿದೆ. ಇನ್ನುಳಿದಂತೆ ಕೇಶ್ವಾಪುರ ಮಾರ್ಗವಾಗಿ ಬಿಜಾಪುರ, ಬಾಗಲಕೋಟೆಗೆ ತೆರಳುವ ವಾಹನಗಳು ಗದಗ ರಸ್ತೆ ಅಂಡರ್‌ಪಾಸ್‌ ಮೂಲಕ ಹಾಯ್ದು ಕೇಶ್ವಾಪುರ ರಸ್ತೆ ಮೂಲಕ ತೆರಳುವುದು ಅನಿವಾರ್ಯವಾಗಿದೆ.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ

ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Waqf

Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್‌ ಬಿಸಿ!

ಕುರಿ ಕಾಯುತ್ತಲೇ ಹಾಡು ಕಲಿತ ಇಮಾಮಸಾಬಗೆ ರಾಜ್ಯೋತ್ಸವ ಪ್ರಶಸ್ತಿ ಗರಿ; ಡೊಳ್ಳಿನ ಭಾವೈಕ್ಯತೆ

ಕುರಿ ಕಾಯುತ್ತಲೇ ಹಾಡು ಕಲಿತ ಇಮಾಮಸಾಬಗೆ ರಾಜ್ಯೋತ್ಸವ ಪ್ರಶಸ್ತಿ ಗರಿ; ಡೊಳ್ಳಿನ ಭಾವೈಕ್ಯತೆ

ಹುಬ್ಬಳ್ಳಿ ಟೆಕ್ಕಿ 24 ತಾಸು ಡಿಜಿಟಲ್‌ ಅರೆಸ್ಟ್!‌ ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿರ್ಬಂಧ

ಹುಬ್ಬಳ್ಳಿ ಟೆಕ್ಕಿ 24 ತಾಸು ಡಿಜಿಟಲ್‌ ಅರೆಸ್ಟ್!‌ ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿರ್ಬಂಧ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.