ಶಾಂತಿ ಕದಡುವವರ ಮೇಲೆ ಕಣ್ಣಿಡಲಿದೆ ಡ್ರೋಣ್‌: ರಾಣೆ


Team Udayavani, Mar 17, 2017, 1:18 PM IST

hub5.jpg

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮೀಷನರೇಟ್‌ ಕೆಲವೇ ದಿನಗಳಲ್ಲಿ ಶಸ್ತ್ರಸಜ್ಜಿತವಾದ ಮಾನವ ರಹಿತ ಅಂತರಿಕ್ಷ ವಾಹನ “ದ್ರೋಣ್‌’ ಹೊಂದಲಿದೆ. ಕಮೀಷನರೇಟ್‌ ಘಟಕ ಅವಳಿ ನಗರದಲ್ಲಿ ಮಾನವ ರಹಿತ ವಾಹನ ಪರಿಚಯಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.

ಇದಕ್ಕೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ಅನುಮೋದನೆ ಅಗತ್ಯವಿದ್ದು, ಅದು ದೊರೆತಿದೆ. ಪೊಲೀಸ್‌ ಆಯುಕ್ತ ಪಾಂಡುರಂಗ ರಾಣೆ “ಉದಯವಾಣಿ’ಯೊಂದಿಗೆ ಮಾತನಾಡಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಮಯದಲ್ಲಿ ದ್ರೋಣ್‌ ಪ್ರಮುಖ ಪಾತ್ರ ನಿರ್ವಹಿಸುತ್ತದೆ.

ಇದು 100ರಿಂದ 200 ಅಡಿ ಎತ್ತರದಿಂದ ಹೈರೆಸಲ್ಯೂಷನ್‌ ಚಿತ್ರಗಳನ್ನು ಸೆರೆ ಹಿಡಿಯಬಲ್ಲದು. ದ್ರೋಣ್‌ ಸಾಮೂಹಿಕ ಮೆರವಣಿಗೆ, ಪ್ರತಿಭಟನೆ, ಪ್ರಮುಖ ಹಬ್ಬ-ಹರಿದಿನಗಳ ಆಚರಣೆ ಸಂದರ್ಭದಲ್ಲಿ ಸಹಾಯಕವಾಗುತ್ತದೆ. ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದೆ. 

ಇಂತಹ ಸಂದರ್ಭದಲ್ಲಿ ಸಾಮಾಜಿಕ ವಿರೋಧಿ ಚಟುವಟಿಕೆಗಳಂತಹ ಅಂಶಗಳ ಮೇಲೆ ಕಣ್ಣಿಡಲು ಸೂಕ್ತವಾಗುತ್ತದೆ. ದ್ರೋಣ್‌ಗೆ ಅಂದಾಜು 2ಲಕ್ಷ ರೂ. ವೆಚ್ಚ ತಗುಲಲಿದೆ. ಕಾನೂನು-ವ್ಯವಸ್ಥೆ ಉಲ್ಲಂಸುವ, ಹಿಂಸಾಚಾರ ಸೃಷ್ಟಿಸುವ ಸನ್ನಿವೇಶಗಳ ನಿಯಂತ್ರಣದ ಸಮರ್ಪಕ ಮಾಹಿತಿಗೆ ಇದನ್ನು ಬಳಸಲಾಗುತ್ತದೆ. 

ಮುಂಬರುವ ದಿನಗಳಲ್ಲಿ ಅವಳಿ ನಗರದ ಪ್ರಮುಖ ಸ್ಥಳಗಳಲ್ಲಿ 100ಕ್ಕೂ ಅಧಿಕ ಹೆಚ್ಚಿನ ರೆಸಲ್ಯೂಷನ್‌ವುಳ್ಳ ಕ್ಯಾಮರಾಗಳನ್ನು ಅಳವಡಿಸಲು ಯೋಜಿಸಲಾಗಿದೆ. ಪ್ರತಿ ಕ್ಯಾಮರಾಗೆ ಸುಮಾರು 1ಲಕ್ಷ ರೂ. ವೆಚ್ಚವಾಗಲಿದೆ ಎಂದರು. 

ಕಮಾಂಡ್‌ ವಾಹನ: ಹೈಟೆಕ್‌ನತ್ತ ಕಮೀಷನರೇಟ್‌ ಘಟಕ ಬೆಂಗಳೂರು ನಂತರ ಹುಬ್ಬಳ್ಳಿ-ಧಾರವಾಡ ಮಹಾನಗರವು ಕಮಾಂಡ್‌ ವಾಹನ ಹೊಂದಲಿರುವ ಎರಡನೆಯ ನಗರವಾಗಲಿದೆ. ಕಮಾಂಡ್‌ ವಾಹನವು ಎಲ್ಲ ಆಧುನಿಕ ತಂತ್ರಜ್ಞಾನಗಳನ್ನು ಹೊಂದಿರಲಿದ್ದು, ಸ್ಥಳದಿಂದಲೇ ಸಂಚಾರ ನಿರ್ವಹಣಾ ಕೇಂದ್ರಕ್ಕೆ ಮಾಹಿತಿಗಳನ್ನು ರವಾನಿಸುತ್ತದೆ.

ಇದು ಅವಳಿ ನಗರದ ಭದ್ರತಾ ವ್ಯವಸ್ಥೆಗೆ ಶಕ್ತಿ ತುಂಬಲಿದೆ ಎಂದರು. ಕಮಾಂಡ್‌ ವಾಹನವು ಒಂದು ವಿಡಿಯೊ ವಾಲ, ಪಾನ್‌-ಟಿಲ್ಟ ಜೂಮ ಕ್ಯಾಮರಾ ಸೇರಿದಂತೆ ಎಲ್ಲ ಸಂವಹನ ವ್ಯವಸ್ಥೆ ಹೊಂದಿರುತ್ತದೆ. ಇದು ಮೊಬೈಲ ಪೊಲೀಸ್‌ ಠಾಣೆಯಂತೆ ಇರಲಿದೆ. ತಂಡದ ಪುರುಷ ಪೊಲೀಸರು ನಿಸ್ತಂತು ಕ್ಯಾಮರಾಗಳನ್ನು ಹಾಕಿಕೊಂಡಿರುತ್ತಾರೆ. 

ಮೆರವಣಿಗೆ, ಅಹಿತರ ಘಟನೆ, ಚುನಾವಣೆ ರ್ಯಾಲಿ ಸಂದರ್ಭಗಳಲ್ಲಿ ಸಮಾಜ ವಿರೋಧಿ ಚಟುವಟಿಕೆ ನಡೆಸುತ್ತಿರುವ ಗುಂಪಿನಲ್ಲಿನವರನ್ನು ಗುಪ್ತ ಕ್ಯಾಮೆರಾಗಳನ್ನು ಧರಿಸಿರುವ ಸಿಬ್ಬಂದಿ ಮೂಲಕ ಫೋಟೋ ಸೆರೆ ಹಿಡಿಯಲಾಗುತ್ತದೆ. ಕಮಾಂಡ್‌ ವಾಹನದಲ್ಲಿ ಸೆರೆ ಹಿಡಿಯಲಾದ ಪೋಟೋಗಳು ಹಾಗೂ ಸಂದೇಶಗಳು ನೇರವಾಗಿ ಸಂಚಾರ ನಿರ್ವಹಣಾ ಕೇಂದ್ರಕ್ಕೆ ತಲುಪುತ್ತವೆ. ಅಲ್ಲಿಂದಲೇ ಮೇಲಾಧಿಕಾರಿಗಳು ಪರಿಸ್ಥಿತಿ ನಿಭಾಯಿಸಬಹುದು ಎಂದು ಪಿ.ಎಚ್‌. ರಾಣೆ ತಿಳಿಸಿದರು. 

ಟಾಪ್ ನ್ಯೂಸ್

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

Sunil-kumar

Naxal Surrender: ನಕ್ಸಲ್‌ ಶರಣಾಗತಿ ಪೂರ್ವಯೋಜಿತ ಸ್ಟೇಜ್‌ ಶೋ ಅಲ್ಲವೇ?

Debt

Finance Debt: ಫೈನಾನ್ಸ್‌ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!

CT-Ravi

Naxal Surrender: ರಾಜ್ಯ ಸರಕಾರವೇ ನಕ್ಸಲರಿಗೆ ಶರಣಾಗಿದೆಯೋ?: ಸಿ.ಟಿ. ರವಿ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

vidhana-Soudha

Cast Census: ಲಿಂಗಾಯತ, ಒಕ್ಕಲಿಗ ಜಂಟಿ ಸಮರ?

1-bajaj

L&T CEO ಹೇಳಿಕೆಗೆ ತಿರುಗೇಟು;ಮೊದಲು ಬಾಸ್‌ ವಾರಕ್ಕೆ 90 ಗಂಟೆ ದುಡಿಯಲಿ: ಬಜಾಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-alnavar

Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

Sunil-kumar

Naxal Surrender: ನಕ್ಸಲ್‌ ಶರಣಾಗತಿ ಪೂರ್ವಯೋಜಿತ ಸ್ಟೇಜ್‌ ಶೋ ಅಲ್ಲವೇ?

Debt

Finance Debt: ಫೈನಾನ್ಸ್‌ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!

CT-Ravi

Naxal Surrender: ರಾಜ್ಯ ಸರಕಾರವೇ ನಕ್ಸಲರಿಗೆ ಶರಣಾಗಿದೆಯೋ?: ಸಿ.ಟಿ. ರವಿ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.