ಹಳ್ಳಿಗಳಲ್ಲಿ ಸಾಮಾಜಿಕ ಅಂತರ ಪರೀಕ್ಷೆಗೆ ಡ್ರೋಣ್ ಬಳಕೆ
Team Udayavani, Apr 27, 2020, 12:56 PM IST
ಧಾರವಾಡ: ಗ್ರಾಮೀಣ ಭಾಗದಲ್ಲಿ ಸಾಮಾಜಿಕ ಅಂತರ ಕಾಪಾಡುವ ಹಿತದೃಷ್ಟಿಯಿಂದ ಪೊಲೀಸರು ಡ್ರೋಣ್ ತಂತ್ರಜ್ಞಾನಕ್ಕೆ ಮೊರೆ ಹೋಗಿದ್ದಾರೆ.
ಮೊನ್ನೆಯಷ್ಟೇ ಎಸ್‌ಪಿ ವರ್ತಿಕ ಕಟಿಯಾರ್ ಡ್ರೋಣ್ ಬಳಕೆಗೆ ಚಾಲನೆ ನೀಡಿದ್ದು, ಸದ್ಯ ಕೇವಲ 2 ಡ್ರೋಣ್ (ಮ್ಯಾವಿಕ್ ಪ್ರೋ) ಕ್ಯಾಮೆರಾಗಳನ್ನು ಬಳಸಿಕೊಳ್ಳಲಾಗಿದೆ. ಈ ಎರಡು ಡ್ರೋಣ್‌ಗಳನ್ನು 2 ದಿನಕ್ಕೊಮ್ಮೆ ಎಸ್‌ಪಿ ವ್ಯಾಪ್ತಿಯ ಎಲ್ಲ ಠಾಣೆಗೆ ಹಂತ ಹಂತವಾಗಿ ಹಸ್ತಾಂತರ ಆಗಲಿದ್ದು, ಪ್ರತಿಯೊಂದು ಠಾಣೆಯಲ್ಲಿ ಎರಡು ದಿನ ಈ ಬಳಕೆಗೆ ಅವಕಾಶ ಮಾಡಿಕೊಡಲಾಗಿದೆ. ಈ ಡ್ರೋಣ್ ಕ್ಯಾಮೆರಾಗಳು 500 ಮೀಟರ್ ಎತ್ತರದಲ್ಲಿ ಹಾರಲಿದ್ದು, 5 ಕಿ.ಮೀ. ದೂರದವರೆಗೂ ಕ್ರಮಿಸಬಲ್ಲವಾಗಿವೆ. ಹಳ್ಳಿಗಳಲ್ಲಿ ಗುಂಪು ಗುಂಪು ಜನ ನಿಲ್ಲುತ್ತಾರೋ? ಹಾಗೂ ಎಲ್ಲಿ ಪಡಿತರ ಅಂಗಡಿ ಮುಂದೆ ಸಾಮಾಜಿಕ ಅಂತರ ಕಾಪಾಡುತ್ತಿಲ್ಲವೋ? ಅಂತವುಗಳನ್ನು ನಿಯಂತ್ರಣ ಮಾಡಲು ಈ ಡ್ರೋಣ್ ಕ್ಯಾಮೆರಾಗಳನ್ನು ಬಳಕೆ ಮಾಡಲಾಗುತ್ತಿದೆ.
ಸದ್ಯ ನರೇಂದ್ರ ಗ್ರಾಮದಲ್ಲಿ ಇದಕ್ಕೆ ಒಳ್ಳೆಯ ಸ್ಪಂದನೆಯೂ ಸಿಕ್ಕಿದೆ. ಡ್ರೋಣ್ ಕ್ಯಾಮೆರಾ ಬಳಕೆ ಮಾಡಿದ್ದರಿಂದ ಉತ್ತಮ ಫಲಿತಾಂಶ ಸಿಕ್ಕಿದೆ. ಡ್ರೋಣ್ ಬಳಕೆ ಮಾಡಿದ ಜನ ಅದಕ್ಕೆ ಹೆದರಿ ಮನೆಯಿಂದ ಹೊರಗಡೆ ಹೋಗದಂತೆ ತಡೆಯಲು ಸಹಕಾರಿ ಆಗಿದೆ. ನರೇಂದ್ರ ಗ್ರಾಮದಲ್ಲಿ ಇದರಿಂದ ಒಳ್ಳೆಯ ಫಲಿತಾಂಶ ಸಿಕ್ಕಿದೆ ಎಂದು ಹೇಳುತ್ತಾರೆ ನರೇಂದ್ರ ಗ್ರಾಪಂ ಮಾಜಿ ಅಧ್ಯಕ್ಷ ಮಂಜುನಾಥ ತಿರ್ಲಾಪೂರ
ಜಿಲ್ಲೆಯಲ್ಲಿ ಇದೀಗ 2 ಡ್ರೋಣ್ ಕ್ಯಾಮೆರಾ ಬಳಕೆ ಮಾಡಿಕೊಂಡಿದ್ದು, ಜಿಲ್ಲೆಯ ಪ್ರತಿ ಠಾಣೆಗೆ ಎರಡು ದಿನಗಳ ಬಳಕೆಗೆ ಅವಧಿ ನಿಗದಿ ಮಾಡಲಾಗಿದೆ. ಅದರಂತೆ ಡ್ರೋಣ್ ಬಳಕೆ ಎಲ್ಲ ಠಾಣೆಗೂ ವಿಸ್ತರಣೆ ಆಗಲಿದ್ದು, ಇದರಿಂದ ಸದ್ಯಕ್ಕೆ ಒಳ್ಳೆಯ ಸ್ಪಂದನೆ ಲಭಿಸಿದೆ. – ವರ್ತಿಕ ಕಟಿಯಾರ್, ಎಸ್‌ಪಿ, ಧಾರವಾಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.