ಕೌಟುಂಬಿಕ ಕಲಹ; ಚಿಕ್ಕಪ್ಪನಿಂದಲೇ ಯುವಕನ ಹತ್ಯೆ
ಧಾರವಾಡ ಮುರುಘಾ ಮಠ ಬಳಿ ಘಟನೆ | ಜಗಳ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯ |ಆರೋಪಿ ಪರಾರಿ
Team Udayavani, Feb 15, 2021, 5:29 PM IST
ಧಾರವಾಡ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಅಣ್ಣನ ಮಗನನ್ನು ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿದ ಘಟನೆ ಮುರುಘಾ ಮಠದ ಬಳಿ ರವಿವಾರ ನಡೆದಿದೆ.
ಆಕಾಶ್ ಕೋಟೂರು (26) ಕೊಲೆಯಾದವ. ಈತನ ಚಿಕ್ಕಪ್ಪ ಪ್ರಕಾಶ ಕೋಟೂರು ಕೊಲೆ ಮಾಡಿರುವ ಬಗ್ಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಕೌಟುಂಬಿಕ ಕಲಹದಿಂದ ಮನೆಯಲ್ಲಿ ಆಗಾಗ ಕಿರಿಕಿರಿ ಮಾಡುತ್ತಿದ್ದ ಆಕಾಶನು ರವಿವಾರವೂ ಮನೆಯಲ್ಲಿ ಜಗಳ ಮಾಡಿದ್ದಾನೆ. ಈ ಜಗಳ ವಿಕೋಪಕ್ಕೆ ತಿರುಗಿದ ಕಾರಣ ಚಿಕ್ಕಪ್ಪ ಪ್ರಕಾಶನು ಮನೆಯಲ್ಲಿದ್ದ ಮಾರಕಾಸ್ತ್ರದಿಂದ ಹೊಡೆದಿದ್ದಾನೆ. ಇದರಿಂದ ತೀವ್ರ ಗಾಯಗೊಂಡ ಆಕಾಶ ಮನೆಯಲ್ಲಿಯೇ ಮೃತಪಟ್ಟಿದ್ದಾನೆ.
ಘಟನೆ ಮಾಹಿತಿ ಪಡೆದ ಡಿಸಿಪಿ ಕೆ. ರಾಮರಾಜನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸದ್ಯ ಪ್ರಕಾಶ ಕೋಟೂರ ಪರಾರಿಯಾಗಿದ್ದು, ಶೋಧ ಕಾರ್ಯ ನಡೆದಿದೆ. ಕೊಲೆ ಹಿಂದೆ ಬೇರೆ ಏನಾದರೂ ಕಾರಣವಿದೆಯೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ ಎಂದು ಡಿಸಿಪಿ ಕೆ. ರಾಮರಾಜನ್ ತಿಳಿಸಿದ್ದಾರೆ. ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.