ಸ್ಯಾನಿಟೈಸರ್ ಸೇವನೆ ಒಳ್ಳೆಯದಲ್ಲ
Team Udayavani, Apr 21, 2020, 12:55 PM IST
ಧಾರವಾಡ: ಕೋವಿಡ್ 19 ಸೋಂಕು ಹರಡುವುದನ್ನು ತಡೆಯಲು ಹ್ಯಾಂಡ್ ಸ್ಯಾನಿಟೈಸರ್ ಅನ್ನು ಬಳಸಲಾಗುತ್ತಿದ್ದು, ಆದರೆ ಕೆಲವರು ಇದನ್ನು ಮದ್ಯದ ಬದಲಾಗಿ ಸೇವಿಸುತ್ತಿರುವುದು ವರದಿಯಾಗಿದೆ.
ಹ್ಯಾಂಡ್ ಸ್ಯಾನಿಟೈಸರ್‌ನ್ನು ಈಥೆನಾಲ್, ಐಸೊಪ್ರೊಪೈಲ್ ಅಲ್ಕೋಹಾಲ್ ಹಾಗೂ ಇತರೆ ರಾಸಾಯನಿಕಗಳ ಮಿಶ್ರಣದೊಂದಿಗೆ ತಯಾರಿಸಿದ್ದು, ಇದು ಬಾಹ್ಯ ಉಪಯೋಗಕ್ಕೆ ಮಾತ್ರ ಸೀಮಿತವಾಗಿದೆ. ಸೇವನೆಗೆ ಯೋಗ್ಯವಾಗಿರಲ್ಲ. ಇದನ್ನು ಸೇವಿಸಿದಲ್ಲಿ ಬಹು ಅಂಗಾಂಗಗಳ ವೈಫಲ್ಯ ಮತ್ತು ಮಾರಣಾಂತಿಕ ಆಗಿರುವುದರಿಂದ ಸಾರ್ವಜನಿಕರು ಇದನ್ನು ಬಾಹ್ಯವಾಗಿ ಮಾತ್ರ ಉಪಯೋಗಿಸಬೇಕು. ಯಾವುದೇ ಕಾರಣಕ್ಕೂ ಸೇವಿಸಬಾರದು. ಔಷಧ ವ್ಯಾಪಾರಿಗಳು ಇದನ್ನು ಗ್ರಾಹಕರಿಗೆ ಜಾಗರೂಕತೆಯಿಂದ ಮಾರಬೇಕು. ಬಿಲ್‌ಗಳಲ್ಲಿ ಗ್ರಾಹಕರ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕೆಂದು ಜಿಲ್ಲೆಯ ಎಲ್ಲಾ ಔಷಧ ವ್ಯಾಪಾರಸ್ಥರಿಗೆ ಈಗಾಗಲೇಸೂಚಿಸಲಾಗಿರುತ್ತದೆ. ಕೆಲ ಕಂಪನಿಯ ಸ್ಯಾನಿಟೈಸರ್ ಅನ್ನು ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಮಾರದಂತೆ ಸೂಚಿಸಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.
ಸ್ಯಾನಿಟೈಸರ್ ಸ್ವರೂಪ ಬದಲಾವಣೆ: ಉಗಾರ ಸಕ್ಕರೆ ಕಾರ್ಖಾನೆಯ ಸ್ಯಾನಿಟೈಸರ್, ಪ್ಯಾಕಿಂಗ್ ಸ್ವರೂಪ ಮತ್ತು ಬಣ್ಣ ಬದಲಾಯಿಸಲು ಡಿಸಿ ದೀಪಾ ಚೋಳನ್ ಅವರು ನಿರ್ದೇಶಿಸಿದ ಹಿನ್ನೆಲೆಯಲ್ಲಿ ಔಷಧ ನಿಯಂತ್ರಣ ಇಲಾಖೆ ಉಪ ಔಷಧ ನಿಯಂತ್ರಕ ಮಲ್ಲಿಕಾರ್ಜುನಕೆ.ಎಸ್. ಹಾಗೂ ಸಹಾಯಕ ಔಷಧ ನಿಯಂತ್ರಕ ಅಜಯ್ ಮುದಗಲ್ ಕೃಷ್ಣಪ್ಪ ಅವರು ತಯಾರಿಕಾ ಸಂಸ್ಥೆಯನ್ನು ಸಂಪರ್ಕಿಸಿ ಹ್ಯಾಂಡ್ ಸ್ಯಾನಿಟೈಸರ್‌ನ ಬಣ್ಣ, ಜಿಗುಟುತನ ಮತ್ತು ಪ್ಯಾಕಿಂಗ್ ಬದಲಾಯಿಸಲು ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.