ಶಿಕ್ಷಣ ವ್ಯಾಪಾರೀಕರಣ ದುರದೃಷ್ಟಕರ
Team Udayavani, May 9, 2017, 3:16 PM IST
ಧಾರವಾಡ: ಇಂದು ಶಿಕ್ಷಣ ಹೆಸರು ನಾಮಕರಣಕ್ಕೇನು ಕಾರಣ ವ್ಯಾಪಾರೀಕರಣವಾಗುವುದು ದುರದೃಷ್ಟಕರ. ಸ್ಥಿತಿವಂತರು ಹೆಚ್ಚು ಹಣ ನೀಡಿ ದುಬಾರಿ ಶಾಲೆಗಳಲ್ಲಿ ತಮ್ಮ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವುದರಿಂದ ಆರ್ಥಿಕವಾಗಿ ದುಸ್ಥಿತಿಯಲ್ಲಿರುವ ಮಕ್ಕಳ ಭವಿಷ್ಯವೇನು? ಎಂದು ಭಾರತ ಜ್ಞಾನ ವಿಜ್ಞಾನ ಸಮಿತಿ ರಾಜ್ಯ ಉಪಾಧ್ಯಕ್ಷ ಎಫ್.ಸಿ. ಚೇಗರೆಡ್ಡಿ ಆತಂಕ ವ್ಯಕ್ತಪಡಿಸಿದರು.
ನಗರದ ಕವಿಸಂನಲ್ಲಿ ಶಿಕ್ಷಣ ಮಂಟಪದ ಆಶ್ರಯದಲ್ಲಿ ಆಯೋಜಿಸಿದ್ದ ಎಸ್ಡಿಎಂಸಿ ಸಮನ್ವಯ ಸಮಿತಿಯ 2ನೇ ಹಂತದ ಸಭೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ಸರ್ಕಾರದ ಕಾಳಜಿಯಾಗಿ ಉಳಿಯದೆ ಬೆಂಗಳೂರಿನಂತಹ ನಗರದಲ್ಲಿ ಇಂಗ್ಲಿಷ್ ಶಾಲೆಗಳು ನಾಯಿ ಕೊಡೆಯಂತೆ ತಲೆ ಎತ್ತುವ ಪರಿಸ್ಥಿತಿ ಬಂದಿದೆ.
ಜಾಗತೀಕರಣದ ಈ ಸಂದರ್ಭದಲ್ಲಿ ಮಕ್ಕಳನ್ನು ಮಾರುಕಟ್ಟೆಯ ಬಳಕೆದಾರರನ್ನಾಗಿ ರೂಪಿಸುತ್ತಿರುವುದು ದುರ್ದೈವದ ಸಂಗತಿ. ಶಿಕ್ಷಣದಲ್ಲಿ ಸಮಾನತೆ ಹಾಗೂ ಗುಣಮಟ್ಟ ಸುಧಾರಣೆಗಾಗಿ ಎಸ್ಡಿಎಂಸಿ ಸಮನ್ವಯ ಸಮಿತಿ ಜಾರಿಗೆ ತಂದಿದ್ದು, ಬಿಜಿವಿಎಸ್, ಕರ್ನಾಟಕ ರಾಜ್ಯಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ನ ಸಹಯೋಗದಲ್ಲಿ ಪೂರಕ ವಾತಾವರಣ ನಿರ್ಮಿಸುವುದು ಇಂದಿನ ಅಗತ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಬಿಜಿವಿಎಸ್ ಜಿಲ್ಲಾಧ್ಯಕ್ಷ ಗುರು ತಿಗಡಿ ಮಾತನಾಡಿ, ಸಮನ್ವಯ ಸಮಿತಿಯ ಜೊತೆ ಶೈಕ್ಷಣಿಕ ಸುಧಾರಣೆಗಾಗಿ ಚಿಂತನ-ಮಂಥನ ಹಾಗೂ ನೀರು ಉಳಿಸಿ ಜನಜಾಗೃತಿ ಮತ್ತು ವೈಜ್ಞಾನಿಕ ಚಿಂತನೆ ಮೂಡಿಸುವ ಪ್ರಗತಿಪರ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು. ಶಿಕ್ಷಣ ಸುಧಾರಣೆ ವಾರಸುದಾರರಾದ ನಾವು ಸಮಾನ ಶಿಕ್ಷಣ ನೀತಿ ಜಾರಿಗೆಗೆ ಬದ್ಧತೆ ಹೊಂದಬೇಕು ಎಂದು ಹೇಳಿದರು.
ಬಿಜಿವಿಎಸ್ ಜಿಲ್ಲಾ ಕಾರ್ಯದರ್ಶಿ ವೀರಣ್ಣ ಒಡ್ಡೀನ ಮಾತನಾಡಿ, ಎಸ್ಡಿಎಂಸಿ ಸಮನ್ವಯ ಸಮಿತಿಯ ಜಿಲ್ಲಾ ಸಮಾವೇಶ ಸಂಘಟಿಸಲಾಗುವುದು. ಜೊತೆಗೆ ಜಿಲ್ಲಾದ್ಯಂತ ಭಾರತ ಜ್ಞಾನ ವಿಜ್ಞಾನ ಸಮಿತಿಯಿಂದ ಎಸ್ ಡಿಎಂಸಿಯ ಸಹಕಾರದಲ್ಲಿ ಸರಕಾರಿ ಶಾಲೆಗಳ ಸಬಲೀಕರಣ ಮಾಡಲಾಗುವುದು ಎಂದರು.
ಕೆ.ಎಂ. ಗೆದಗೇರಿ, ಜಗದೀಶ ಕುರ್ಲಗೇರಿ, ಶಿವರುದ್ರಗೌಡ ಪಾಟೀಲ, ಎನ್.ಜಿ. ಕೊಡ್ಲಿ, ಚಂದ್ರು ತಿಗಡಿ, ಎ.ಎ. ಗೆದ್ದಿಕೇರಿ, ಆರ್. ಎಸ್. ಪಾಟೀಲ, ಅಶೋಕ ಬಳಿಗೇರ ಇದ್ದರು. ಬಿಜಿವಿಎಸ್ ಕೋಶಾಧ್ಯಕ್ಷ ಎಲ್.ಐ. ಲಕ್ಕಮ್ಮನವರ ಸ್ವಾಗತಿಸಿದರು. ವೈ.ಜಿ. ಭಗವತಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.