ಶಿಕ್ಷಣಕ್ಕಿದೆ ಸಮಸ್ಯೆಗಳಿಗೆ ಸ್ಪಂದಿಸುವ ಶಕ್ತಿ: ಡಾ| ನ.ವಜ್ರಕುಮಾರ
ಎಲ್ಲವೂ ದೊರೆತಾಗ ಶಿಕ್ಷಣ ಸಂಸ್ಥೆ ಪ್ರಗತಿ ಸಾಧಿಸಲು ಸಾಧ್ಯ
Team Udayavani, Feb 19, 2022, 4:26 PM IST
ಧಾರವಾಡ: ಇಂದಿನ ಎಲ್ಲ ಸಾಮಾಜಿಕ ಸಮಸ್ಯೆಗಳಿಗೆ ಸ್ಪಂದಿಸುವ ಶಕ್ತಿ ಶಿಕ್ಷಣಕ್ಕಿದೆ ಎಂದು ಜೆಎಸ್‌ಎಸ್ ಸಂಸ್ಥೆಯ ಕಾರ್ಯದರ್ಶಿ ಡಾ|ನ.ವಜ್ರಕುಮಾರ ಹೇಳಿದರು. ನಗರದ ವಿದ್ಯಾಗಿರಿಯ ಜೆಎಸ್ಸೆಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯ ದಶಮಾನೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿಕ್ಷಣವೆಂಬುದು ನಿಧಾನವಾದರೂ ನಿರಂತರ ಸಾಧನೆ, ತಪಸ್ಸು. ಶಿಕ್ಷಣ ಎಂದೂ ನಿಲ್ಲದ ಪ್ರವಾಹ. ಅದು ವ್ಯಕ್ತಿಯ ಸಮಗ್ರ ವ್ಯಕ್ತಿತ್ವ ಆಳ್ವಿಕೆ. ಇದಕ್ಕೆ ವಯಸ್ಸಿನ, ಲಿಂಗಭೇದಗಳ ಜಾತಿ-ಮತಗಳ, ಅಧಿ ಕಾರ-ಅಂತಸ್ತಿನ ಅಡ್ಡಗೋಡೆಗಳಿಲ್ಲ. ಶಿಕ್ಷಣದಲ್ಲಿ ಒತ್ತಡವಿರಬಾರದು. ಮನಸಾರೆ ಒಪ್ಪಿ ಸಂತೋಷದಿಂದ ಪಡೆಯುವ ಶಿಕ್ಷಣ ಹೆಚ್ಚು ಪರಿಣಾಮಕಾರಿ ಹಾಗೂ ಶಾಶ್ವತವಾದುದು ಎಂದರು.
ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ-ಸ್ನಾತಕೋತ್ತರ ಅಧ್ಯಯನ ಸಂಸ್ಥೆ ಇದೀಗ ದಶಮಾನೋತ್ಸವ ಆಚರಿಸಿಕೊಳ್ಳುತ್ತಿದೆ. ಸಾಂಪ್ರದಾಯಿಕ ಶಿಕ್ಷಣ ಜತೆಗೆ ವಿಭಿನ್ನವಾಗಿ ಗುರುತಿಸಿಕೊಂಡಿರುವ ಈ ಸಂಸ್ಥೆ 2500 ವಿದ್ಯಾರ್ಥಿಗಳನ್ನು ಹೊಂದಿದ್ದು, ಡಾ|ಅಜಿತ ಪ್ರಸಾದ ಅವರ ದೂರದೃಷ್ಟಿ ಈ ಸಂಸ್ಥೆಯನ್ನು ಅಗ್ರ ಶ್ರೇಯಾಂಕದಲ್ಲಿ ಇರುವಂತೆ ಮಾಡಿದೆ ಎಂದರು.
ಜೆಎಸ್‌ಎಸ್ ವಿತ್ತಾಧಿಕಾರಿ ಡಾ|ಅಜಿತ ಪ್ರಸಾದ ಮಾತನಾಡಿ, ಯಾವುದೇ ಒಂದು ಶಿಕ್ಷಣ ಸಂಸ್ಥೆ ಬೆಳೆಯಬೇಕಾದರೆ ಪ್ರತಿಯೊಬ್ಬ ಸಿಬ್ಬಂದಿ ಸಹಕಾರ ಅಗತ್ಯವಾದುದು. ಎಲ್ಲವೂ ದೊರೆತಾಗ ಶಿಕ್ಷಣ ಸಂಸ್ಥೆ ಪ್ರಗತಿ ಸಾಧಿಸಲು ಸಾಧ್ಯ ಎಂದರು. ಡಾ|ವೆಂಕಟ್ ನರಸಿಂಹ ಜೋಶಿ ಮಾತನಾಡಿ, ಹಸಿದವರಿಗೆ ಅನ್ನ ನೀಡಿದಾಗ ಅದು ಕ್ಷಣಿಕ ಆದರೆ ಅದೆ ವಿದ್ಯೆ ನೀಡಿದಾಗ ಅದು ವಿದ್ಯಾರ್ಥಿ ಜೀವನ ಪರ್ಯಂತ ಉಳಿಯುವಂತಹದ್ದು. ಈ ದೂರದೃಷ್ಟಿಯನ್ನಿಟ್ಟುಕೊಂಡು ದೂರದ ದಕ್ಷಿಣ ಕನ್ನಡದ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ರಾಜರ್ಷಿ ಡಾ|ಡಿ.ವೀರೇಂದ್ರ ಹೆಗ್ಗಡೆ ಅವರು, ಪೂಜ್ಯ ವಿಶ್ವೇಶತೀರ್ಥ ಶ್ರೀಪಾದಂಗಳವರ ಅಪೇಕ್ಷೆಯಂತೆ 1973ರಲ್ಲಿ ಜೆಎಸ್‌ಎಸ್ ಶಿಕ್ಷಣ ಸಂಸ್ಥೆ ಪಡೆದು ಅದಕ್ಕೆ ಸಾರಥಿಯನ್ನಾಗಿ ಪ್ರೊ|ನ. ವಜ್ರಕುಮಾರ ಅವರನ್ನು ಕಳುಹಿಸಿಕೊಟ್ಟರು ಎಂದರು.
ಅದರಲ್ಲಿ ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ 2011ರ ಫೆ.16ರಂದು ಸ್ಥಾಪನೆಗೊಂಡು ಇದೀಗ 2500ಕ್ಕೂ ಅಧಿಕ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ದಾರಿ ಮಾಡಿಕೊಟ್ಟಿರುವುದು ಹೆಮ್ಮೆಯ ಸಂಗತಿ. ಡಾ|ನ.ವಜ್ರಕುಮಾರ, ಅಜಿತ ಪ್ರಸಾದ ಅವರ ನಿರಂತರ ಪರಿಶ್ರಮ, ಶಿಸ್ತು, ಸಂಯಮಗಳ ಪ್ರತೀಕವಾಗಿ ಜೆಎಸ್ ಎಸ್ ಸಂಸ್ಥೆಯ ಅಂಗಸಂಸ್ಥೆಗಳನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿರುವುದು ಶ್ಲಾಘನೀಯ ಎಂದರು.
ಹಿರಿಯ ಕವಿ ನಾಡೋಜ ಡಾ|ಚನ್ನವೀರ ಕಣವಿ ಅವರ ನಿಧನಕ್ಕೆ ಎರಡು ನಿಮಿಷ ಮೌನ ಆಚರಿಸಿ, ಸಂತಾಪ ಸೂಚಿಸಲಾಯಿತು. ದೀಪಾ ಪ್ರಾರ್ಥಿಸಿದರು. ಡಾ|ಸೂರಜ್ ಜೈನ್ ಸ್ವಾಗತಿಸಿದರು.ಡಾ|ಜಿನದತ್ತ ಹಡಗಲಿ ನಿರೂಪಿಸಿದರು. ಮಹಾವೀರ ಉಪಾಧ್ಯೆ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.