ಮಕ್ಕಳ ಭವಿಷ್ಯಕ್ಕೆ ಶಿಕ್ಷಣವೇ ಬೆಳಕು
Team Udayavani, Jun 13, 2018, 4:38 PM IST
ಧಾರವಾಡ: ಮಕ್ಕಳಿಗೆ ನೀಡುವ ಶಿಕ್ಷಣ ಅವರ ಭವಿಷ್ಯವನ್ನು ಬೆಳಕಾಗಿಸಬಲ್ಲದು ಎಂದು ಪ್ರಭಾರ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಹೊಸಮನಿ ಸಿದ್ದಪ್ಪ ಹೇಳಿದರು.
ಇಲ್ಲಿನ ಲಕ್ಷ್ಮೀ ನಗರದ ಸರಸಗಂಗಾ ದೊಡವಾಡ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸೇರಿದಂತೆ ವಿವಿಧ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯಾವುದೇ ಮಗು ಶಾಲೆ ತೊರೆದು ಬಾಲ ಕಾರ್ಮಿಕನಾಗಿ ದುಡಿಯುವಂತಾಗಬಾರದು. ಶಿಕ್ಷಣವು ಮಕ್ಕಳ ಹಕ್ಕಾಗಿದ್ದು, ಈ ಹಕ್ಕಿಗೆ ಯಾವ ಕಾರಣಕ್ಕೂ ಧಕ್ಕೆ ಬಾರದಂತೆ ನೋಡಿಕೊಳ್ಳುವಲ್ಲಿ ಪ್ರತಿಯೊಬ್ಬ ಪ್ರಜ್ಞಾವಂತರ ಪಾತ್ರವಿದೆ ಎಂದರು. ಕಾರ್ಮಿಕ ಅಧಿಕಾರಿ ತರನುಮ್ ಬೆಂಗಾಲಿ ಮಾತನಾಡಿದರು. ಜಿಪಂ ಸಿಇಒ ಸ್ನೇಹಲ್ ರಾಯಮಾನೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್.ಎಸ್. ಚಿಣ್ಣನ್ನವರ್ ಪ್ರತಿಜ್ಞಾವಿಧಿ ಬೋಧಿಸಿದರು.
ಬಾಲವಿಕಾಸ ಅಕಾಡೆಮಿ ಯೋಜನಾಧಿಕಾರಿ ಬಿ.ಎಸ್. ಕಲಾದಗಿ, ಡಿಡಿಪಿಐ ಎನ್.ಎಚ್. ನಾಗೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನ್ನಪೂರ್ಣಾ ಸಂಗಳದ ಇದ್ದರು. ಹರ್ಲಾಪುರದ ಸಿವೈಸಿಡಿ ಕಲಾತಂಡದ ಎಸ್.ಎಸ್. ಹಿರೇಮಠ ಸಂಗಡಿಗರಿಂದ ಬಾಲಕಾರ್ಮಿಕ ಪದ್ಧತಿ ನಿಷೇಧದ ಕುರಿತು ಜಾಗೃತಿ ಗೀತೆ ಹಾಗೂ ನಾಟಕ ಪ್ರದರ್ಶನ ಜರುಗಿತು. ಇದಕ್ಕೂ ಮುನ್ನ ಜಾಥಾ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.