ನೆಮ್ಮದಿ ಬದುಕಿಗೆ ಪ್ರೇರಣೆಯಾಗಲಿ ಶಿಕ್ಷಣ
Team Udayavani, Aug 10, 2018, 4:37 PM IST
ಧಾರವಾಡ: ಇಂದಿನ ಬದಲಾದ ಪರಿಸ್ಥಿತಿಯಲ್ಲಿ ಶಿಕ್ಷಣವು ಹಣ ಗಳಿಸುವುದನ್ನೇ ಪ್ರಧಾನ ಗುರಿಯಾಗಿಸಿಕೊಂಡಿದ್ದು, ವಿದ್ಯಾರ್ಥಿ ಸಮುದಾಯದಲ್ಲಿ ಮೌಲ್ಯಗಳು ಕುಸಿಯುತ್ತಿರುವುದಕ್ಕೆ ಕಾರಣವಾಗಿದೆ ಎಂದು ಅಮ್ಮಿನಬಾವಿಯ ಪಂಚಗೃಹ ಹಿರೇಮಠದ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಇಲ್ಲಿಯ ವಿದ್ಯಾಗಿರಿಯ ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಪಿಯು ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ 2018-19ನೇ ಸಾಲಿನ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘದ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಮೌಲ್ಯಯುತವಾದ ಗುಣಗಳ ಸಂಸ್ಕಾರ ನೀಡುವ ಶಿಕ್ಷಣದ ಅಗತ್ಯವಿದ್ದು, ಅದು ವ್ಯಕ್ತಿ ಮತ್ತು ಸಮುದಾಯದ ಏಳ್ಗೆಗೆ ತಳಹದಿಯಾಗಿ ನೆಮ್ಮದಿಯ ಬದುಕನ್ನು ಕಟ್ಟಿಕೊಳ್ಳಲು ಪ್ರೇರಣೆಯಾಗಬಲ್ಲದು ಎಂದರು. ಅಧ್ಯಕ್ಷತೆ ವಹಿಸಿದ್ದ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ನ. ವಜ್ರಕುಮಾರ ಮಾತನಾಡಿ, ವಿದ್ಯಾರ್ಥಿಗಳು ಹಿರಿಯರನ್ನು ಹಾಗೂ ಪರಸ್ಪರರನ್ನು ಗೌರವಿಸುವುದರಲ್ಲಿ ಇರುವ ಆನಂದವನ್ನು ಗುರುತಿಸಿಕೊಳ್ಳಬೇಕು. ಇದು ಅವರಿಗೆ ಪ್ರತಿಯಾಗಿ ಗೌರವವನ್ನು ಮಾತ್ರವಲ್ಲ ಸಾಮಾಜಿಕ ಸಾಮರಸ್ಯಕ್ಕೂ ಕಾರಣವಾಗುತ್ತದೆ ಎಂದರು.
ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳ ವಿತ್ತಾಧಿಕಾರಿ ಡಾ| ಅಜಿತ ಪ್ರಸಾದ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರಾಚಾರ್ಯರಾದ ಡಾ| ವೈ.ಎಸ್. ರಾಯಬಾಗಿ ಪ್ರಾಸ್ತಾವಿಕ ಮಾತನಾಡಿದರು. ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘದ ಉಪಾಧ್ಯಕ್ಷ ಪ್ರೊ|ಬಸವರಾಜ ವಕ್ಕುಂದ ಹಾಗೂ ಕ್ರೀಡಾ ನಿರ್ದೇಶಕ ಪವನ ಗೊರವರ, ದರ್ಶನ ಸಿದ್ದಪ್ಪಗೌಡರ, ವೈಷ್ಣವಿ ದಲಾಲ ಇದ್ದರು. ಶಶಿಕಲಾ ಬಗಲಿ ಹಾಗೂ ನಿಶಾ ದೇಶಪಾಂಡೆ ನಿರೂಪಿಸಿದರು. ದರ್ಶನ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi-Dharwad ಪ್ರತ್ಯೇಕ ಮಹಾನಗರ ಪಾಲಿಕೆ: ಸರ್ಕಾರದಿಂದ ಮಧ್ಯಂತರ ರಾಜ್ಯಪತ್ರ
ಸದ್ಯಕ್ಕೆ ಸಿಎಂ ಚರ್ಚೆ ಗೊಡವೆಯೇ ನನಗೆ ಬೇಡ: ಡಿ.ಕೆ.ಶಿವಕುಮಾರ್
Hubli: ಸರ್ಕಾರ ಮತ್ತು ವಿಜಯೇಂದ್ರ ನಡುವೆ ಉತ್ತಮ ಅಡ್ಜಸ್ಟ್‌ಮೆಂಟ್ ಇದೆ: ಯತ್ನಾಳ್ ಆರೋಪ
Hubli: ಕಸದ ವಾಹನಕ್ಕೆ ಸ್ಕೂಟಿ ಡಿಕ್ಕಿ: ಓರ್ವ ವಿದ್ಯಾರ್ಥಿ ಸಾವು, ಮತ್ತೋರ್ವ ಗಂಭೀರ
BJP ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಗೊತ್ತಿಲ್ಲ: ಸಚಿವ ಜೋಶಿ
MUST WATCH
ಹೊಸ ಸೇರ್ಪಡೆ
Rohit, Pant, Jaiswal, Gill: ರಣಜಿ ಪುನರಾಗಮನದಲ್ಲಿ ವೈಫಲ್ಯ ಕಂಡ ಟೀಂ ಇಂಡಿಯಾ ಸ್ಟಾರ್ಸ್
UV Fusion: ಸ್ವಾಮಿ ವಿವೇಕಾನಂದರ ಕನಸಿನ ರಾಷ್ಟ್ರನಿರ್ಮಾಣದಲ್ಲಿ ಯುವಜನತೆಯ ಪಾತ್ರ
Tumkur: ತುಮುಲ್ ಅಧ್ಯಕರಾಗಿ ಕೈ ಬೆಂಬಲಿತ ಅಭ್ಯರ್ಥಿ ಗೆಲುವು
Tollywood: ಹಾಲಿವುಡ್‌ಗೆ ಜೂ. ಎನ್‌ಟಿಆರ್ ಎಂಟ್ರಿ? ಖ್ಯಾತ ನಿರ್ದೇಶಕ ಹೇಳಿದ್ದೇನು?
Shiva Rajkumar: ಜ.26ಕ್ಕೆ ಶಿವಣ್ಣ ವಾಪಸ್: ಸ್ವಾಗತಕ್ಕೆ ಅದ್ಧೂರಿ ತಯಾರಿ