ಡಿಸಿ ನೇತೃತ್ವದಲ್ಲಿ ಪರಿಣಾಮಕಾರಿ ಕೆಲಸ: ಸಚಿವ ಶೆಟ್ಟರ
Team Udayavani, Apr 18, 2020, 12:59 PM IST
ಧಾರವಾಡ: ಕೋವಿಡ್ 19 ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ದೀಪಾ ಚೋಳನ್ ನೇತೃತ್ವದಲ್ಲಿ ಎಲ್ಲ ಅಧಿಕಾರಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈವರೆಗೆ 682 ಮಾದರಿ ಸಂಗ್ರಹಿಸಲಾಗಿದೆ. ಅದರಲ್ಲಿ 632 ನೆಗೆಟಿವ್, 6 ವರದಿಗಳು ಪಾಸಿಟಿವ್ ಬಂದಿದ್ದರೆ ಇನ್ನೂ 44 ಮಾದರಿ ವರದಿ ಬರಬೇಕಿದೆ. ಬೆಳಗಾವಿ ಜಿಲ್ಲೆಯಲ್ಲಿ ಗುರುವಾರದವರೆಗೆ 36 ಪ್ರಕರಣಗಳು ದಾಖಲಾಗಿದ್ದು, ಕುಡಚಿ, ಬಾಗೇವಾಡಿ ಭಾಗದಲ್ಲೇ ಹೆಚ್ಚಿನ ಪ್ರಕರಣಗಳು ದಾಖಲಾಗಿದೆ. ಈ ಗ್ರಾಮಗಳ ಜನರನ್ನು ಕ್ವಾರಂಟೈನ್ ನಲ್ಲಿಡಲಾಗಿದೆ. ಆಶಾ ಕಾರ್ಯಕರ್ತೆಯರು ಪ್ರತಿ ಮನೆಗಳ ಸರ್ವೇ ನಡೆಸುತ್ತಿದ್ದಾರೆ. ಎಲ್ಲೆಡೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಡಿಸಿ-ಎಸ್ಪಿ ಜತೆ ಸಂಪರ್ಕದಲ್ಲಿದ್ದು, ಅಗತ್ಯ ಸೂಚನೆ ನೀಡಲಾಗಿದೆ ಎಂದರು.
ದೆಹಲಿ ಜಮಾತ್‌ನಿಂದ ಬಂದವರಿಂದಲೇ ಬಹಳಷ್ಟು ಪ್ರಕರಣಗಳು ಕಂಡು ಬಂದಿವೆ. ಯಾವುದೇ ಧರ್ಮ, ಜಾತಿಗೆ ಈ ವೈರಸ್ ಸೀಮಿತವಾಗಿಲ್ಲ. ದೆಹಲಿಯಿಂದ ಬಂದವರು ಕದ್ದು ಮುಚ್ಚಿ ಕುಳಿತುಕೊಳ್ಳದೆ, ಪ್ರಾಮಾಣಿಕವಾಗಿ ಮಾಹಿತಿ ನೀಡಬೇಕು. ಮಾಹಿತಿ ಕೇಳಲು ಸಹಕಾರ ನೀಡಬೇಕು. ತೊಂದರೆ ನೀಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸ್ವಯಂ ಪ್ರೇರಿತವಾಗಿ ಬಂದರೆ ಯಾವುದೇ ಸಮಸ್ಯೆ ಉದ್ಭವಿಸಲ್ಲ. ಇದರಿಂದ ತಮ್ಮ ಕುಟುಂಬ ಮಾತ್ರವಲ್ಲ ಇಡೀ ರಾಜ್ಯ-ದೇಶದ ಜನರಿಗೆ ಅನುಕೂಲವಾಗಲಿದೆ. – ಜಗದೀಶ ಶೆಟ್ಟರ, ಜಿಲ್ಲಾ ಉಸ್ತುವಾರಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.