ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ
Team Udayavani, Apr 19, 2021, 8:02 PM IST
ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಆವರಣ ದಲ್ಲಿಯೇ ಕಾಡಾನೆಯೊಂದು ರವಿವಾರ ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಕವಿವಿ ಭದ್ರತಾ ಸಿಬ್ಬಂದಿ ಶನಿವಾರ ರಾತ್ರಿ ಗಸ್ತು ಸುತ್ತುವಾಗ ಹೊಸ ವಸತಿ ಗೃಹದ ಬಳಿ ಆನೆ ಕಂಡಿದೆ. ಕೂಡಲೇ ಅರಣ್ಯ ಇಲಾಖೆ ಅ ಧಿಕಾರಿಗಳಿಗೆ ಮಾಹಿತಿ ನೀಡಿ, ಕವಿವಿ ಅಧಿಕಾರಿಗಳು, ನಿವಾಸಿಗಳಿಗೆ ಹಾಗೂ ವಿದ್ಯಾರ್ಥಿಗಳು ಹೊರ ಬರದಂತೆ ಸೂಚನೆ ನೀಡಲಾಗಿದೆ. ಆ
ನೆಯು ಉತ್ತರ ಕನ್ನಡ ಜಿಲ್ಲೆಯ ಕಾಡು ಪ್ರದೇಶದಿಂದ ಆಹಾರ ಅರಸುತ್ತ ಹಾದಿ ತಪ್ಪಿ ಬಂದಿರುವ ಸಾಧ್ಯತೆಯಿದೆ. ಈಗಾಗಲೇ ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ್ ಕ್ಷೀರಸಾಗರ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ. ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಪರಿಶೀಲನೆ ಬಳಿಕ ಆನೆ ಇರುವ ಸ್ಥಳ ಪತ್ತೆ ಮಾಡಿದ್ದು, ರವಿವಾರ ಇಡೀ ರಾತ್ರಿ ಕಾರ್ಯಾಚರಣೆ ಕೈಗೊಂಡು ಸೋಮವಾರ ಬೆಳಗ್ಗೆಯೊಳಗೆ ಆನೆಯನ್ನು ಮರಳಿ ಕಾಡಿಗೆ ಕಳುಹಿಸುವತ್ತ ಅರಣ್ಯ ಇಲಾಖೆ ಸಿಬ್ಬಂದಿ ಕಾಯೋನ್ಮುಖರಾಗಿದ್ದಾರೆ.
ಕವಿವಿ, ಪಾವಟೆನಗರ, ಗಣೇಶನಗರ, ಹನುಮಂತನಗರ, ಹೊಯ್ಸಳ ನಗರ, ಶಾಂಭವಿ ನಗರ, ನವೋದಯನಗರ, ಕಲ್ಯಾಣನಗರ ನಿವಾಸಿಗಳು, ವಸತಿ ನಿಲಯಗಳ ವಿದ್ಯಾರ್ಥಿಗಳು ಅನಗತ್ಯವಾಗಿ ಹೊರಗೆ ಸಂಚರಿಸಬಾರದು. ಗುಂಪು ಸೇರಿ ಗೊಂದಲದ ವಾತಾವರಣ ಸೃಷ್ಟಿಸಬಾರದು. ಜನರಿಗೆ ತೊಂದರೆಯಾಗದಂತೆ ಕಾರ್ಯಾಚರಣೆ ನಡೆಸಿ ಪರಿಸ್ಥಿತಿ ಸಹಜತೆಗೆ ತರಲಾಗುವುದು. ಜನರು ಯಾವುದೇ ಕಾರಣಕ್ಕೂ ಭಯಪಡಬೇಕಿಲ್ಲ ಎಂದು ಉಪ ಅರಣ್ಯ ಸಂರಕÒಣಾ ಧಿಕಾರಿ ಯಶಪಾಲ್ ಕ್ಷೀರಸಾಗರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.