ಮದುವೆಗೆ ಹೋಗಲು ತುರ್ತು ಪಾಸ್ ದುರ್ಬಳಕೆ
Team Udayavani, Apr 16, 2020, 12:01 PM IST
ಧಾರವಾಡ: ತುರ್ತು ವೈದ್ಯಕೀಯ ಅಗತ್ಯಕ್ಕಾಗಿ ನೀಡಿದ್ದ ಪಾಸ್ ದುರುಪಯೋಗಪಡಿಸಿಕೊಂಡು ಮದುವೆಗೆ ಹೋಗಿ ಬಂದವರನ್ನು ಹೋಮ್ ಕ್ವಾರಂಟೈನ್ ಮಾಡಿದ್ದಲ್ಲದೇ ಇನೊವಾ ವಾಹನ ಜಪ್ತಿ ಮಾಡಿದ ಘಟನೆ ಬುಧವಾರ ನಡೆದಿದೆ.
ಪಾಸ್ ದುರುಪಯೋಗಪಡಿಸಿಕೊಂಡು ಹುಬ್ಬಳ್ಳಿಯಲ್ಲಿ ಮಂಗಳವಾರ ಮದುವೆ ಕಾರ್ಯ ಮುಗಿಸಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸ್ಥಾಪಿಸಿರುವ ಚೆಕ್‌ಪೋಸ್ಟ್‌ಗಳನ್ನು ತಪ್ಪಿಸಿ ಇನ್ನೊವಾ ವಾಹನದಲ್ಲಿ ಹೊರಟಿದ್ದರು. ಡಿವೈಎಸ್‌ಪಿ ರವಿ ನಾಯಕ ವಾಹನ ನಿಲ್ಲಿಸಿ ಪರಿಶೀಲಿಸಿದಾಗ ತುರ್ತು ವೈದ್ಯಕೀಯ ಅಗತ್ಯಕ್ಕಾಗಿ ನೀಡಿದ್ದ ಪಾಸ್ ದುರುಪಯೋಗ ಪಡಿಸಿಕೊಂಡಿದ್ದು ಗಮನಕ್ಕೆ ಬಂತು.
ಎಸ್‌ಪಿ ವರ್ತಿಕಾ ಕಟಿಯಾರ್ ಅವರ ಮಾರ್ಗದರ್ಶನದಲ್ಲಿ ತಕ್ಷಣ ಕಾರ್ಯಪ್ರವೃತ್ತರಾದ ಡಿವೈಎಸ್‌ಪಿ ರವಿ ನಾಯಕಇನೊವಾ ವಾಹನದಲ್ಲಿದ್ದ 9ಜನರನ್ನು ಪೊಲೀಸ್ ವಾಹನದಲ್ಲಿವೈದ್ಯಕೀಯ ತಪಾಸಣೆಗೆಂದು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕಳುಹಿಸಿದ್ದಲ್ಲದೇ ಇನೊವಾ ವಾಹನ ಜಪ್ತಿ ಮಾಡಿದ್ದಲ್ಲದೇ ತಪಾಸಣೆ ನಂತರ 9 ಜನರನ್ನೂ ಹೋಮ್ ಕ್ವಾರಂಟೈನ್ ಕಡ್ಡಾಯಗೊಳ್ಳಿಸಿ ಸಂಬಂಧಿಸಿದವರಿಗೆ ನಿರ್ದೇಶನ ನೀಡಿದ್ದಾರೆ. ಪಾಸ್ ದುರುಪಯೋಗ ಪಡಿಸಿಕೊಂಡ 9 ಜನರು ವಧುವಿನ ಕಡೆಯವರಾಗಿದ್ದು, ಉಪ್ಪಿನಬೆಟಗೇರಿ ಗ್ರಾಮದವರೆಂದು ತಿಳಿಸಿದ್ದಾರೆ.
ಅಗತ್ಯ ಮತ್ತು ತುರ್ತು ನೆರವಿಗೆ ಜಿಲ್ಲಾಡಳಿತ ನೀಡುವ ಪಾಸ್ ದುರುಪಯೋಗ ಪಡಿಸಿಕೊಂಡವರ ವಾಹನಗಳನ್ನು ಜಪ್ತಿ ಮಾಡಿ ವಶಕ್ಕೆ ಪಡೆದು ಹೆಚ್ಚಿನ ಮೊತ್ತದ ದಂಡ ವಿ ಸಲಾಗುವುದು ಅಲ್ಲದೇ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಧಾರವಾಡ ಗ್ರಾಮೀಣ ಜಿಲ್ಲೆಯಲ್ಲಿ ಲಾಕ್‌ಡೌನ್ ಉಲ್ಲಂಘಿಸಿ ಅನಗತ್ಯವಾಗಿ ರಸ್ತೆಗಿಳಿದ ಒಂದು ಸಾವಿರಕ್ಕೂ ದ್ವಿಚಕ್ರ ವಾಹನಗಳನ್ನು ಈಗಾಗಲೇ ಜಪ್ತಿ ಮಾಡಲಾಗಿದೆ. -ರವಿ ನಾಯಕ, ಡಿವೈಎಸ್‌ಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.