ಮಳೆನೀರು ಕೊಯ್ಲಿಗೆ ಒತ್ತು ನೀಡಿ: ಮಂಜುಲ
Team Udayavani, Jul 12, 2019, 8:09 AM IST
ಧಾರವಾಡ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಂಜುಲ ಪ್ರಗತಿ ಪರಿಶೀಲಿಸಿದರು.
ಧಾರವಾಡ: ನರೇಗಾ ಯೋಜನೆಯಡಿ ಮಳೆನೀರು ಕೊಯ್ಲಿಗೆ ಒತ್ತು ಕೊಟ್ಟು ಕೃಷಿಹೊಂಡಗಳ ನಿರ್ಮಾಣ, ಬದುಗಳಲ್ಲಿ ಗಿಡ ಬೆಳೆಸುವುದಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಮಂಜುಲ ಹೇಳಿದರು.
ಜಿಪಂ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಶೇ. 87.33 ಸಾಧನೆಯಾಗಿದೆ. ಈ ಬಾರಿ ಶೇ.100 ಮಾನವ ದಿನಗಳ ಸೃಜನೆ ಮಾಡಿ ಗ್ರಾಮೀಣ ಜನರಿಗೆ ಉದ್ಯೋಗ ಒದಗಿಸಬೇಕು. ಕಾರ್ಮಿಕರಿಗೆ 8 ದಿನಗಳ ನಿಗದಿತ ಕಾಲಮಿತಿಯೊಳಗೆ ವೇತನ ಪಾವತಿಸಬೇಕು. ಜಿಲ್ಲೆಯಾದ್ಯಂತ ನಿರ್ಮಾಣವಾಗಿರುವ ಕೃಷಿಹೊಂಡಗಳ ಮಾಹಿತಿಯನ್ನು ಸಂಬಂಧಿಸಿದ ಇತರ ಇಲಾಖೆಗಳೊಂದಿಗೆ ಹಂಚಿಕೊಂಡು ಬದುವಿನಲ್ಲಿ ಗಿಡ ನೆಡುವುದು ಸೇರಿದಂತೆ ಬಲವರ್ಧನಾ ಕಾರ್ಯಗಳಿಗೆ ಒತ್ತು ನೀಡಬೇಕು ಎಂದರು.
ಮಾತೃಪೂರ್ಣ ಯೋಜನೆಯಡಿ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಪೌಷ್ಟಿಕ ಆಹಾರ ಒದಗಿಸುವಲ್ಲಿ ಜಿಲ್ಲೆಯಲ್ಲಿ ಶೇ.83.07 ಸಾಧನೆಯಾಗಿದೆ. ಮಾತೃಶ್ರೀ, ಮಾತೃವಂದನ ಯೋಜನೆಯಡಿ ಪೌಷ್ಟಿಕ ಆಹಾರಕ್ಕಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಬಿಡುಗಡೆ ಮಾಡುತ್ತಿರುವ ಅನುದಾನ ನಿರ್ದಿಷ್ಟ ಉದ್ದೇಶಕ್ಕೆ ಬಳಕೆಯಾಗುತ್ತಿದೆಯೇ ಎಂಬುದನ್ನು ಅಧಿಕಾರಿಗಳು ನಿರಂತರವಾಗಿ ಖಚಿತಪಡಿಸಿಕೊಳ್ಳಬೇಕು ಎಂದು ಮಂಜುಲ ಸೂಚಿಸಿದರು. ಜಿಲ್ಲೆಯ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಫಲಿತಾಂಶದಲ್ಲಿ ಸುಧಾರಣೆ ತರಲು ಎಲ್ಲ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಸಂಸ್ಥೆಗಳಿಂದ ಕ್ರಿಯಾ ಯೋಜನೆ ಪಡೆಯಬೇಕು. ಕಳೆದ ಬಾರಿ ಕಡಿಮೆ ಫಲಿತಾಂಶ ಬಂದಿರುವ ಶಾಲಾ-ಕಾಲೇಜುಗಳಲ್ಲಿ ಪರಿಹಾರ ಬೋಧನೆ, ಹೆಚ್ಚುವರಿ ಅವಧಿಗಳ ನಿರ್ವಹಣೆ, ರಜಾದಿನಗಳಲ್ಲಿ ವಿಶೇಷ ತರಗತಿಗಳನ್ನು ಏರ್ಪಡಿಸಬೇಕು ಎಂದು ಸಲಹೆ ನೀಡಿದರು.
ಜಿಪಂ ಸಿಇಒ ಡಾ| ಬಿ.ಸಿ. ಸತೀಶ, ಪಾಲಿಕೆ ಆಯುಕ್ತ ಪ್ರಶಾಂತಕುಮಾರ ಮಿಶ್ರಾ, ಡಿಎಫ್‌ಒ ಡಿ. ಮಹೇಶಕುಮಾರ್, ಪ್ರೊಬೆಷನರಿ ಐಎಎಸ್ ಅಧಿಕಾರಿ ಆಕೃತಿ ಬನ್ಸಾಲ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.