ಸಣ್ಣ ಕೈಗಾರಿಕೆಗಳ ಅಭಿವೃದಿಯಿಂದ ಉದ್ಯೋಗ ಸೃಷ್ಟಿ

Team Udayavani, Aug 15, 2018, 4:13 PM IST

15-agust-18.jpg

ಹುಬ್ಬಳ್ಳಿ: ಸಣ್ಣ-ಮಧ್ಯಮ ಕೈಗಾರಿಗಳು ಅಭಿವೃದ್ಧಿಗೊಂಡರೆ ಮಾತ್ರ ಉದ್ಯೋಗ ಸೃಷ್ಟಿ ಸಾಧ್ಯವೆಂದು ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ಹೇಳಿದರು. ಇಲ್ಲಿನ ಗೋಕುಲ ಕೈಗಾರಿಕಾ ಪ್ರದೇಶದಲ್ಲಿ 6.5 ಕೋಟಿ ವೆಚ್ಚದ ಗಟಾರು ಹಾಗೂ ಮೂಲಸೌಲಭ್ಯ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಬೃಹತ್‌ ಕೈಗಾರಿಕೆಗಳಲ್ಲಿ ರೋಬೋಟಿಕ್‌ ತಂತ್ರಜ್ಞಾನಕ್ಕೆ ಹೆಚ್ಚು ಮಹತ್ವ ನೀಡುತ್ತಿದ್ದು, ಇದರಿಂದ ಉದ್ಯೋಗಗಳು ಕಡಿಮೆಯಾಗುತ್ತಿವೆ. ಹೀಗಾಗಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದರೆ ಸಾಕಷ್ಟು ಉದ್ಯೋಗ ಸೃಷ್ಟಿಯಾಗಲಿದೆ ಎಂದರು.

ಇಲಾಖೆಯಲ್ಲಿ ಹೆಗ್ಗಣಗಳಿವೆ: ಸಣ್ಣ ಕೈಗಾರಿಕೆ ಸಚಿವ ಎಸ್‌.ಆರ್‌. ಶ್ರೀನಿವಾಸ ಮಾತನಾಡಿ, ಇಲಾಖೆಯಲ್ಲಿನ ಲೋಪದೋಷಗಳನ್ನು ಗುರುತಿಸುವ ಕಾರ್ಯ ನಡೆದಿದೆ. ಇಲಾಖೆಯಲ್ಲಿರುವ ಕೆಲ ಹೆಗ್ಗಣಗಳನ್ನು ಹೊರಹಾಕುವ ಪ್ರಯತ್ನ ನಡೆಸಿದ್ದು, ಆ ನಿಟ್ಟಿನಲ್ಲಿ ಕಾರ್ಯಗಳು ನಡೆದಿವೆ. ಜನರ ಹಣ ದುರ್ಬಳಕೆ ಮಾಡುತ್ತಿರುವ ಅಧಿಕಾರಿಗಳ ನೈಜ ಮುಖವಾಡ ಕಳಚುವ ದಿನಗಳು ದೂರವಿಲ್ಲ ಎಂದರು.

ತೆರಿಗೆ ಹಣದಲ್ಲಿ ನಡೆಯುವ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಎಲ್ಲರಿಗೂ ಕಾಳಜಿಯಿರಲಿ. ಇಂದಿನ ದಿನದಲ್ಲಿ ಏಕಕಾಲಕ್ಕೆ ಪರಿಹಾರ ನೀಡುವುದು ಸವಾಲಿನ ಕೆಲಸ. ಕೈಗಾರಿಕೆ ನಿವೇಶನ ಪಡೆದವರಿಗೆ ಖರೀದಿ ಪತ್ರ ನೀಡದಿರುವುದು ಯಕ್ಷಪ್ರಶ್ನೆ ಮೂಡಿಸಿದೆ ಎಂದು ಹೇಳಿದರು.

ಹೊಸತನ ಅಳವಡಿಸಿಕೊಂಡಿಲ್ಲ: ಸಣ್ಣ ಕೈಗಾರಿಕೆ ವ್ಯಾಪ್ತಿಯ ತೆಂಗು ನಾರು ನಿಗಮದಲ್ಲಿ ಯಾವುದೇ ಹೊಸತನ ಅಳವಡಿಸಿಕೊಳ್ಳದ ಪರಿಣಾಮ ಇಂದಿಗೂ ನಷ್ಟದಲ್ಲಿದೆ. ತಮಿಳುನಾಡಿನಲ್ಲಿ ತೆಂಗು ನಾರು ನಿಗಮ ಲಾಭದಲ್ಲಿದೆ. ರಾಜ್ಯದಲ್ಲಿ ಅಂದಾಜು 43 ಸಾವಿರ ಕೋಟಿಯಷ್ಟು ತೆಂಗಿನ ಕಚ್ಚಾ ಸಾಮಗ್ರಿ ದೊರೆಯುತ್ತದೆ. ಇದರಿಂದ ಸುಮಾರು 1ರಿಂದ 1.5 ಸಾವಿರ ಕೋಟಿ ರೂ. ವಹಿವಾಟು ಮಾಡಬಹುದಾಗಿದೆ. ಈ ಕುರಿತು ಸಿಎಂ ನೇತೃತ್ವದಲ್ಲಿ ಸಭೆ ಮಾಡಲಾಗಿದೆ ಎಂದು ಸಚಿವ ಶ್ರೀನಿವಾಸ ಹೇಳಿದರು.

ಶಾಸಕ ಪ್ರಸಾದ ಅಬ್ಬಯ್ಯ, ಕಾಸಿಯಾ ಅಧ್ಯಕ್ಷ ಬಸವರಾಜ ಜವಳಿ, ಉ-ಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ವಿಶ್ವನಾಥ ಗೌಡರ, ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಪಿ. ನಾಗೇಶ, ಉದ್ಯಮಿಗಳಾದ ನಾಗರಾಜ ದಿವಟೆ, ನಿಂಗಣ್ಣ ಬಿರಾದರ, ಗಿರೀಶ ನಲವಡಿ, ಮಲ್ಲೇಶ ಜಾಡರ, ಮನೋಹರ ಕೊಟ್ಟೂರಶೆಟ್ಟರ, ವಿಜಯ ಹಟ್ಟಿಹೊಳಿ ಮೊದಲಾದವರಿದ್ದರು.

 ಇಂದಿನ ಪರಿಸ್ಥಿತಿಯಲ್ಲಿ ಕೈಗಾರಿಕೆಗೆ ಕೆಐಡಿಬಿಯಿಂದ ಭೂಮಿ ಪಡೆಯುವುದೇ ಕಷ್ಟವಾಗಿದೆ. ಅದು ರೈತರಿಂದ ಕಡಿಮೆ ದರಕ್ಕೆ ಪಡೆದು ಉದ್ಯಮಿಗಳಿಗೆ ದುಬಾರಿ ದರಕ್ಕೆ ಮಾರಾಟ ಮಾಡುತ್ತಿದ್ದು, ಕೆಐಡಿಬಿ ರಿಯಲ್‌ ಎಸ್ಟೇಟ್‌ ಕಂಪನಿಯಾಗಿದೆ.
 ಜಗದೀಶ ಶೆಟ್ಟರ, ಮಾಜಿ ಮುಖ್ಯಮಂತ್ರಿ

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.