ದೇಶದಲ್ಲಿ ಈಗ ಉದ್ಯೋಗ ನಷ್ಟದ ಅಭಿವೃದ್ಧಿ ಶಕೆ..
Team Udayavani, Apr 21, 2019, 11:49 AM IST
ಇದು ‘ಉದಯವಾಣಿ’ ಜತೆ ಮಾತನಾಡಿದ ಜಯಪ್ರಕಾಶ ನಾರಾಯಣ (ಜೆಪಿ)ಅವರಿಂದ ಸ್ಥಾಪಿಸಲ್ಪಟ್ಟ ಸಿಟಿಜನ್ಸ್ ಫಾರ್ ಡೆಮಾಕ್ರಸಿ (ಸಿಎಫ್ಡಿ)ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಾಮಾಜಿಕ ಕಾರ್ಯಕರ್ತ ಎಸ್.ಆರ್.ಹಿರೇಮಠ ಅಭಿಮತ.
ಒಟ್ಟಾರೆ ಅವರು ಹೇಳಿದ್ದು
ಕಾರ್ಪೊರೆಟ್ ಜಗತ್ತಿಗೆ ಏನೆಲ್ಲಾ ಬೇಕೋ ಅದಕ್ಕೆ ಪೂರಕವಾಗಿ ಆಡಳಿತ ಹೆಜ್ಜೆ ಇರಿಸುವ ಮೂಲಕ, ಇದೇ ದೇಶದ ನಿಜವಾದ ಅಭಿವೃದ್ಧಿ ಎಂದು ಬಿಂಬಿಸುವ ದುರಂತಮಯ ಸ್ಥಿತಿ ನಿರ್ಮಾಣವಾಗಿದೆ. ಇದನ್ನು ಯಾವ ಅಭಿವೃದ್ಧಿ ಎಂದು ಕರೆಯಬೇಕು ?
-ಭ್ರಷ್ಟಾಚಾರ ಹೆಚ್ಚುತ್ತಿದೆ ಕೃಷಿ, ಶಿಕ್ಷಣ, ಆರೋಗ್ಯದಂತಹ ಕ್ಷೇತ್ರಗಳು ನಿರ್ಲಕ್ಷ್ಯಕ್ಕೊಳಗಾಗುತ್ತಿವೆ. ಪಿ.ವಿ.ನರಸಿಂಹರಾವ್ ನೇತೃತ್ವದ ಸರಕಾರ ಹೊಸ ಆರ್ಥಿಕ ನೀತಿ ಮೂಲಕ ದೇಶದಲ್ಲಿ ಹಲವು ಸಮಸ್ಯೆಗಳನ್ನು ಸೃಷ್ಟಿಸಿತ್ತು. ಅದರ ಮುಂದುವರಿದ ಭಾಗವಾಗಿ ಇಂದಿನ ಸರಕಾರ ಇನ್ನಷ್ಟು ಅನಾಹುತಗಳನ್ನು ಸೃಷ್ಟಿಸಲು ಮುಂದಾಗಿದೆ.
-ಸಾಂವಿಧಾನಿಕ ಸಂಸ್ಥೆಗಳಾದ ಸಿಬಿಐ, ಕೇಂದ್ರ ವಿಚಕ್ಷಣ ದಳ ಇನ್ನಿತರ ಸಂಸ್ಥೆಗಳನ್ನು ಕಾಂಗ್ರೆಸ್ ದುರುಪಯೋಗ ಪಡಿಸಿಕೊಂಡಿತ್ತು. ಇದೀಗ ಎನ್‌ಡಿಎ ಸರಕಾರ ಈ ಸಂಸ್ಥೆಗಳನ್ನು ಧ್ವಂಸಗೊಳಿಸುವ ಮಟ್ಟಕ್ಕೆ ಇಳಿದಿದೆ ಎಂದೆನಿಸುತ್ತದೆ. ಸಿಬಿಐ ನಿರ್ದೇಶಕರ ನೇಮಕ ವಿಚಾರದಲ್ಲಿ ನಡೆದ ಡೊಂಬರಾಟ ಇದಕ್ಕೆ ಪುಷ್ಟಿ ನೀಡುತ್ತದೆ. ದೇಶದ ಒಟ್ಟಾರೆ ಆರ್ಥಿಕ ಸ್ಥಿತಿ ನಿರ್ಧರಿಸುವ ಭಾರತೀಯ ರಿಸರ್ವ್ ಬ್ಯಾಂಕ್ ಗಮನಕ್ಕೂ ತಾರದೆ ಘೋಷಣೆಯಾದ ನೋಟು ಅಮಾನ್ಯೀಕರಣವೂ ಇದಕ್ಕೆ ಸಾಕ್ಷಿ.
-ಭ್ರಷ್ಟಾಚಾರ ತೊಡೆದು ಹಾಕುವ ಕುರಿತು ದೇಶದಲ್ಲಿ ದೊಡ್ಡ ದೊಡ್ಡ ಭಾಷಣಗಳು ಮೊಳಗುತ್ತಿವೆ. ರಫೇಲ್ ಹಗರಣದಲ್ಲಿ ಇನ್ನಾರಿಗೊ ಲಾಭ ಮಾಡಿಕೊಡುವ ಯತ್ನ ಮಾಡಲಾಗಿದೆ ಎಂಬ ಕೂಗು ಕೇಳಿ ಬರುತ್ತಿರುವುದು ಭ್ರಷ್ಟಾಚಾರ ಅಲ್ಲವೇ? 2014 ಲೋಕಸಭೆ ಚುನಾವಣೆ ವೇಳೆ ಪ್ರಚಾರಕ್ಕೆ ಆಗಿರುವ ವೆಚ್ಚ ಎಷ್ಟು? ಅಷ್ಟು ಹಣ ಎಲ್ಲಿಂದ ಬಂತು ಎಂಬುದನ್ನು ದೇಶದ ಮತದಾರರ ಮುಂದಿಡಬೇಕಲ್ಲವೇ?
-ವಿದೇಶಗಳಿಂದ ದೇಣಿಗೆ ಪಡೆಯುವ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸಮಾನ ಹಿತಾಸಕ್ತಿ ಹೊಂದಿವೆ. ದೇಣಿಗೆ ಪಡೆಯುವುದಕ್ಕಿದ್ದ ನಿರ್ಬಂಧ ತೊಡೆದು ಹಾಕುವ ನಿಟ್ಟಿನಲ್ಲಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಭಾವನೆಗಳನ್ನು ಭಿತ್ತಿ, ಸುಳ್ಳುಗಳನ್ನು ಪೋಣಿಸುತ್ತಲೇ, ಜನರ ಭಾವನೆಗಳ ಮೇಲೆ ಆಡುವ ಆಟ ಬಹಳ ದಿನ ನಡೆಯುವುದಿಲ್ಲ ಎಂಬ ಸತ್ಯವನ್ನು ರಾಜಕೀಯ ಪಕ್ಷಗಳು ಅರಿತುಕೊಳ್ಳಬೇಕಾಗಿದೆ. ಇಲ್ಲವಾದರೆ ಕಾಲವೇ ಇದಕ್ಕೆ ಪಾಠ ಕಲಿಸಲಿದೆ.
-ಇಂದಿರಾಗಾಂಧಿ ಕಾಲದ ತುರ್ತು ಪರಿಸ್ಥಿತಿಗಿಂತ 20 ಪಟ್ಟು ಹೆಚ್ಚಿನ ಗಂಡಾಂತರ ಸ್ಥಿತಿಗೆ ದೇಶ ತಲುಪಿದೆ. ಅಂದು ಇಂದಿರಾ ಇಡೀ ವ್ಯವಸ್ಥೆಯನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಯತ್ನಿಸಿದ್ದರೆ, ಇಂದು ಪ್ರಧಾನಿ ನರೇಂದ್ರ ಮೋದಿ-ಅಮಿತ್ ಶಾ ಜೋಡಿ ತಮ್ಮ ಅಂಕುಶಕ್ಕೆ ಯತ್ನಿಸುತ್ತಿದೆ. ಇಂದಿರಾಗಾಂಧಿಗೆ 1977ರ ಲೋಕಸಭಾ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಿದ್ದರು. ಅಂತಹ ತಪ್ಪುಗಳು ಪುನಾರಾವರ್ತನೆ ಆಗದಂತೆ ನೋಡಿಕೊಳ್ಳಬೇಕಾದರೆ, ಆಡಳಿತ ನಡೆಸುವವರು ಇತಿಹಾಸದಿಂದ ಪಾಠ ಕಲಿಬೇಕು. ಇಲ್ಲವಾದರೆ ಪಾಠ ಕಲಿಸಲು ಜನ ಸಿದ್ಧರಿರುತ್ತಾರೆ.
ಅಮರೇಗೌಡ ಗೋನವಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.