ಗುತ್ತಿಗೆದಾರರ ಧರಣಿ ಅಂತ್ಯ
Team Udayavani, Aug 2, 2017, 12:13 PM IST
ಹುಬ್ಬಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ನೀಡಿದ ಭರವಸೆಯಿಂದಾಗಿ ಕಳೆದ ನಾಲ್ಕು ದಿನಗಳಿಂದ ಜಿಎಸ್‌ಟಿ ವಿರೋಧಿಸಿ ನಡೆಯುತ್ತಿದ್ದ ಮಹಾನಗರ ಪಾಲಿಕೆ ಗುತ್ತಿಗೆದಾರರ ಸಂಘದ ಧರಣಿ ಅಂತ್ಯಗೊಂಡಿದೆ. ಮಹಾನಗರ ಪಾಲಿಕೆಯಿಂದ ಈ ಹಿಂದೆ ಮಾಡಲಾಗುತ್ತಿದ್ದ ವಿವಿಧ ಕಾಮಗಾರಿಗಳಿಗೆ ಶೇ.4ರಷ್ಟು ತೆರಿಗೆ ನೀಡಲಾಗುತ್ತಿತ್ತು.
ಆದರೆ ಇತ್ತೀಚೆಗೆ ಕೇಂದ್ರ ಸರಕಾರ ಜಾರಿಗೆ ತಂದಿರುವ ಜಿಎಸ್‌ಟಿಯಿಂದ ಶೇ.18ರಷ್ಟು ತೆರಿಗೆ ಕಟ್ಟಬೇಕಾಗಿದೆ. ಇದರಿಂದ ಗುತ್ತಿಗೆದಾರರಿಗೆ ಹಾನಿಯಾಗುತ್ತಿದ್ದು, ಇದನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಹೋರಾಟ ನಡೆಸುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ ಸಚಿವ ವಿನಯ ಕುಲಕರ್ಣಿ, ಈ ಕುರಿತು ಮುಖ್ಯಮಂತ್ರಿ ಹಾಗೂ ಪಿಡಬುಡಿ ಸಚಿವರೊಂದಿಗೆ ಮಾತನಾಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು.
ತಾವು ಕೂಡಾ ಒಂದು ನಿಯೋಗದೊಂದಿಗೆ ಆಗಮಿಸಿದಲ್ಲಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಬಹುದು ಎಂದು ಭರವಸೆ ನೀಡಿದರು. ಸಚಿವರ ಭರವಸೆ ಹಿನ್ನೆಲೆಯಲ್ಲಿ ಗುತ್ತಿಗೆದಾರರು ಪ್ರತಿಭಟನೆ ಕೈ ಬಿಟ್ಟಿದ್ದಾರೆ. ಬೇಡಿಕೆಗಳು ಈಡೇರದೇ ಇದಲ್ಲಿ ಮತ್ತೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಪ್ರಸಾದ ಅಬ್ಬಯ್ಯ, ಅರಣ್ಯ ನಿಗಮ ಮಂಡಳಿ ಅಧ್ಯಕ್ಷ ನಾಗರಾಜ ಛಬ್ಬಿ, ಪಾಲಿಕೆ ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ, ಶರದ ದೊಡ್ಡಮನಿ, ಶೀತಲ್ ಬಾಗಿ, ಆರ್.ಬಿ. ದಾಸಣ್ಣವರ, ಶಿವಪ್ರಸಾದ, ಎಂ.ಎಸ್. ಚಿಕ್ಕಯ್ಯನವರ, ವಿನಯ ಪಾಸ್ತೆ, ಟಿ.ಡಿ. ನಾಯಕ, ಎನ್.ಎನ್. ಕರನಂದಿ ಸೇರಿದಂತೆ ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.