ಕಳಕಳಿಯಿದ್ದರೆ ಮೀಸಲು ಜಾರಿಗೊಳಿಸಿ

•ಸಾರ್ವತ್ರಿಕ ಹೋರಾಟಕ್ಕೆ ಮುಂದಾಗಬೇಕು•ಸಮಾಜ ಅಭಿವೃದ್ಧಿಗೆ ಇರುತ್ತೆ ಸಹಕಾರ

Team Udayavani, Jun 30, 2019, 9:23 AM IST

hubali-tdy-3..

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ ಹುಬ್ಬಳ್ಳಿ ತಾಲೂಕು ಘಟಕ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗಣ್ಯರು ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಿದರು.

ಹುಬ್ಬಳ್ಳಿ:ಕೇಂದ್ರ ಸರಕಾರ ಆರ್ಥಿಕವಾಗಿ ಹಿಂದುಳಿದ ಸಮಾಜದವರಿಗೆ ಶೈಕ್ಷಣಿಕ ಹಾಗೂ ಉದ್ಯೋಗದಲ್ಲಿ ಶೇ. 10 ಮೀಸಲಾತಿ ಜಾರಿಗೊಳಿಸಿದೆ. ಆದರೆ ರಾಜ್ಯದಲ್ಲೂ ಇದನ್ನು ಅನುಷ್ಠಾನಗೊಳಿಸಲು ಸಮ್ಮಿಶ್ರ ಸರಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.

ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ ಹುಬ್ಬಳ್ಳಿ ತಾಲೂಕು ಘಟಕ ವತಿಯಿಂದ ಇಲ್ಲಿನ ಗೋಕುಲ ರಸ್ತೆಯ ಚವ್ಹಾಣ ಗ್ರೀನ್‌ ಗಾರ್ಡನ್‌ದಲ್ಲಿ ಶನಿವಾರ ಹಮ್ಮಿಕೊಂಡಿದ್ದ ತಾಲೂಕಿನ ಸಮಾಜದ ಸಾಧಕರ ಸಂಗಮ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿ, ಸಮ್ಮಿಶ್ರ ಸರಕಾರ ರಾಜ್ಯದಲ್ಲೂ ಜಾರಿಗೊಳಿಸಿದರೆ ವೀರಶೈವ-ಲಿಂಗಾಯತ ಸಮಾಜ ವಿದ್ಯಾರ್ಥಿಗಳಿಗೂ ತುಂಬಾ ಅನುಕೂಲವಾಗುತ್ತದೆ ಎಂದರು.

ವೀರಶೈವ ಮತ್ತು ಲಿಂಗಾಯತ ಮಹಾಸಭಾದವರು ಲಿಂಗಾಯತ-ವೀರಶೈವ ಅಭಿವೃದ್ಧಿ ಮಂಡಳಿ ರಚಿಸಬೇಕು. ಮೀಸಲಾತಿ ನೀಡಬೇಕೆಂದು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ. ಮಂಡಳಿ ರಚಿಸಿದರೆ 50-100 ಕೋಟಿ ರೂ. ಮೀಸಲಿಡುತ್ತಾರೆ. ಅದನ್ನು ಯಾವ್ಯಾವುದಕ್ಕೋ ಖರ್ಚು ಮಾಡಲಾಗುತ್ತದೆ. ಇದರಿಂದ ಬೇರೆಯವರಿಗೆ ಲಾಭವಾಗುತ್ತದೆ ವಿನಃ ಸಮಾಜ ಅಭಿವೃದ್ಧಿಯಾಗಲ್ಲ. ಸಮಾಜ ಬಗ್ಗೆ ಕಳಕಳಿ ಇದ್ದರೆ ಕೇಂದ್ರ ಜಾರಿಗೊಳಿಸಿದ ಮೀಸಲಾತಿಯನ್ನು ರಾಜ್ಯದಲ್ಲೂ ಜಾರಿಗೊಳಿಸಿದರೆ ಸಮಾಜ ಬಗ್ಗೆ ನಿಮಗಿರುವ ಕಾಳಜಿ ಗೊತ್ತಾಗುತ್ತದೆ. ಅದು ಅನುಷ್ಠಾನಗೊಂಡಿದ್ದರೆ ಸಮಾಜದ ನೂರಾರು ವಿದ್ಯಾರ್ಥಿಗಳು ನೌಕರಿ ಪಡೆಯುತ್ತಿದ್ದರು. ಈಗ ಅದರಿಂದ ಅವರು ವಂಚಿತಗೊಂಡಿದ್ದಾರೆ. ರಾಜ್ಯ ಸರಕಾರ ಶೇ.10 ಮೀಸಲಾತಿ ಜಾರಿಗೊಳಿಸದಿದ್ದರೆ ಸಮಾಜದವರು ಸಾರ್ವತ್ರಿಕ ಹೋರಾಟಕ್ಕೆ ಮುಂದಾಬೇಕು. ಸಮಾಜ ಅಭಿವೃದ್ಧಿಗೆ ತಮ್ಮ ಸಹಕಾರ ಯಾವಾಗಲೂ ಇರುತ್ತದೆ ಎಂದರು.

ಡಿವೈಎಸ್‌ಪಿ ಪ್ರಿಯದರ್ಶಿನಿ ಸಾಣಿಕೊಪ್ಪ ಸನ್ಮಾನ ಸ್ವೀಕರಿಸಿ ಮಾತನಾಡಿ, ವಿದ್ಯಾರ್ಥಿಗಳು ಋಷಿಮುನಿಗಳಂತೆ ಓದಿನತ್ತ ಗಮನ ಹರಿಸಬೇಕು. ಪುಸ್ತಕಗಳೊಂದಿಗೆ ಸಂಬಂಧ ಬೆಳೆಸಿಕೊಳ್ಳಬೇಕೇ ವಿನಃ ಮೊಬೈಲ್, ಇಲೆಕ್ಟ್ರಾನಿಕ್ಸ್‌ ಉಪಕರಣಗಳೊಂದಿಗೆ ಅಲ್ಲ. ಇನ್ನೊಬ್ಬರ ಜೀವನ ತುಲನೆ ಮಾಡಿಕೊಳ್ಳುವುದನ್ನು ಬಿಟ್ಟು ನಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದರು.

ಐಎಎಸ್‌ ತೇರ್ಗಡೆಯಾದ ರಾಹುಲ್ ಸಂಕನೂರ ಮಾತನಾಡಿ, ಸಾಧಕರು ಈ ಮಟ್ಟಕ್ಕೆ ಬರಲು ಅವರು ಹಿಂದೆ ಪಟ್ಟಿರುವ ಕಷ್ಟಗಳ ಬಗ್ಗೆ ತಿಳಿಯಬೇಕು. ಪ್ರಶ್ನಿಸುವ ಹಾಗೂ ರಿಸ್ಕ್ ತೆಗೆದುಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ಅಂದಾಗ ನಾವು ಏನನ್ನಾದರೂ ಸಾಧಿಸಲು ಸಾಧ್ಯ. ಪಾಲಕರು ಸಹಿತ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು. ಅದನ್ನೇ ಅವರ ಮಕ್ಕಳು ಅನುಸರಿಸುತ್ತಾರೆ ಎಂದರು.

ಪಿಯುಸಿ, ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣರಾದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಸಂಶಿ ಮತ್ತು ರಬಕವಿ ಶ್ರೀ ಗುರುದೇವ ಬ್ರಹ್ಮಾನಂದ ಆಶ್ರಮದ ಗುರುಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಘಟಕ ಅಧ್ಯಕ್ಷ ಆನಂದ ಉಪ್ಪಿನ ಅಧ್ಯಕ್ಷತೆ ವಹಿಸಿದ್ದರು. ಗೋವಿಂದ ಜೋಶಿ, ಡಾ| ಶಿವಬಸಪ್ಪ ಹೆರೂರು, ಶಂಕರಣ್ಣ ಮುನವಳ್ಳಿ, ವಿಜಯಕುಮಾರ ಶೆಟ್ಟರ, ವೀರೇಂದ್ರ ಕೌಜಲಗಿ, ಶಿವಣ್ಣ ಅಂಗಡಿ, ವೀರಣ್ಣ ಮಳಗಿ, ಸೋಮಶೇಖರ ಉಮರಾಣಿ, ಮುತ್ತಣ್ಣ ಉಪ್ಪಿನ, ಶರಣಪ್ಪ ಮತ್ತಿಗಟ್ಟಿ ಇನ್ನಿತರಿದ್ದರು.

ವಿರೂಪಾಕ್ಷಿ ಬಿಸರಳ್ಳಿ ಸ್ವಾಗತಿಸಿದರು. ವೀರೇಶ ಹಂಡಗಿ, ವಿಜಯಲಕ್ಷ್ಮಿಶೆಟ್ಟಿ ನಿರೂಪಿಸಿದರು. ಚನ್ನಬಸಪ್ಪ ಧಾರವಾಡಶೆಟ್ಟರ ವಂದಿಸಿದರು.

ಟಾಪ್ ನ್ಯೂಸ್

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

1-koneru

Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.