ನೌಕರಿ ತೊರೆದು ಸಾವಯವ ರೈತರಾದ ಎಂಜಿನಿಯರಿಂಗ್ ಕಾಲೇಜು ಪ್ರಾಚಾರ್ಯ
ಪತ್ನಿಯ ಕೃಷಿ ಆಸಕ್ತಿಯೇ ಪ್ರೇರಣೆ | ಗ್ರಾಹಕರ ಮನೆ ಬಾಗಿಲಿಗೇ ತರಕಾರಿ
Team Udayavani, Jul 2, 2021, 6:42 PM IST
ಹುಬ್ಬಳ್ಳಿ: ಸಾವಯವ ಕೃಷಿಯಲ್ಲಿ ಅಪಾರ ಆಸಕ್ತಿ ಹೊಂದಿದ್ದ ಪತ್ನಿಯ ಉತ್ಸಾಹದಿಂದ ಪ್ರೇರಣೆ ಪಡೆದ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರೊಬ್ಬರು ಸಾವ ಯವ ಕೃಷಿಕರಾಗಿ ಯಶಸ್ವಿ ಹೆಜ್ಜೆಗಳನ್ನಿರಿಸಿದ್ದಾರೆ. ಸಾವಯವ ಪದ್ಧತಿಯಲ್ಲಿ ಬೆಳೆದ ತರಕಾರಿ ಇನ್ನಿತರ ಉತ್ಪನ್ನಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುತ್ತಿದ್ದಾರೆ.
ಇಲ್ಲಿನ ಬಿ.ವಿ. ಭೂಮರಡ್ಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದ, ಗದುಗಿನ ತೋಂಟದಾರ್ಯ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ| ಪ್ರಕಾಶ ಹುಬ್ಬಳ್ಳಿ ಅವರು ಹುದ್ದೆ ತೊರೆದು ಕೃಷಿಯಲ್ಲಿ ತೊಡಗಿ ಸಾವಯವ ಕೃಷಿಯ ಮಹತ್ವ ಸಾರುತ್ತಿದ್ದಾರೆ. ಪತ್ನಿ ಕುಸುಮಾ ಹುಬ್ಬಳ್ಳಿ ಅವರು ಸಾವಯವ ಕೃಷಿಯಲ್ಲಿ ಹೊಂದಿದ ಆಸಕ್ತಿಯಿಂದ ಪ್ರಭಾವಿತರಾಗಿ ಪ್ರಾಚಾರ್ಯ ಹುದ್ದೆ ತೊರೆದಿದ್ದು, ದಂಪತಿಯಿಬ್ಬರೂ ಕಲಘಟಗಿ ತಾಲೂಕಿನ ಹಿಂಡಸಗೇರಿ ಗ್ರಾಮದ ಒಟ್ಟು 4 ಎಕರೆ ಜಮೀನಿನಲ್ಲಿ ತರಕಾರಿ ಬೆಳೆಯುವ ಮೂಲಕ ಸಾವಯವ ಬೇಸಾಯ ಪ್ರಾರಂಭಿಸಿದ್ದಾರೆ.
ಆನ್ ಲೈನ್ ಮತ್ತು ವಾಟ್ಸ್‌ಆ್ಯಪ್ ಮೂಲಕ ಆರ್ಡರ್ ಪಡೆದುಕೊಂಡು ಹುಬ್ಬಳ್ಳಿ ನಗರದ ಗ್ರಾಹಕರ ಮನೆ ಬಾಗಿಲಿಗೆ ಗುಣಮಟ್ಟದ ತರಕಾರಿಗಳನ್ನು ತಮ್ಮ “ನೇಚರ್‌ಫÓr… ಫಾರ್ಮ್’ ಮೂಲಕ ಸರಬರಾಜು ಮಾಡುತ್ತಿದ್ದಾರೆ. ಮಾಹಿತಿ ಯುಗದ ತಂತ್ರಾಂಶಗಳ ಸದ್ಬಳಕೆ ಮಾಡಿಕೊಳ್ಳುತ್ತಿದ್ದಾರೆ.
40 ಬಗೆಯ ದೇಶಿ ಹಾಗೂ 15 ಬಗೆಯ ವಿದೇಶಿ ತರಕಾರಿ ಬೆಳೆಯುತ್ತಿದ್ದು, ಜಮೀನಿನಲ್ಲಿ ನಾಟಿ ಮಾಡುವುದರಿಂದ ಹಿಡಿದು ಕಟಾವು ಮಾಡುವವರೆಗೆ ಬೆಳೆಯ ಪೋಷಣೆ ಮತ್ತು ಸಂರಕ್ಷಣೆಯನ್ನು ಸಂಪೂರ್ಣ ಸಾವಯವ ಪದ್ಧತಿಯಲ್ಲಿ ನಿರ್ವಹಿಸುತ್ತಿದ್ದಾರೆ. ಎರೆಹುಳು ಗೊಬ್ಬರ, ಬೇವಿನ ಹಿಂಡಿ ,ಬೇವಿನ ಎಣ್ಣೆ, ಬೇವಿನ ಅಸ್ತ್ರ , ಅಗ್ನಿ ಅಸ್ತ್ರ , ಹುಳಿ ಮಜ್ಜಿಗೆ, ಕೀಟಗಳ ನಿರ್ವಹಣೆಗೆ ಸ್ಟಿಕಿ ಟ್ರಾÂಪ್, ಲೈಟ್ ಟ್ರಾಪ್ ವಿಧಾನ ಅನುಸರಿಸುತ್ತಿದ್ದಾರೆ.
ತೋಟಗಾರಿಕೆ ಉಪನಿರ್ದೇಶಕ ಕಾಶಿನಾಥ ಭದ್ರುನವರ, ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಮಹಾಂತೇಶ ಪಟ್ಟಣಶೆಟ್ಟಿ, ಸಹಾಯಕ ತೋಟಗಾರಿಕೆ ಅಧಿಕಾರಿ ಕೆ.ವಿ. ಅಂಗಡಿ ಅವರ ಮಾರ್ಗದರ್ಶನದಲ್ಲಿ ತೋಟಗಾರಿಕೆ ಇಲಾಖೆ ಯೋಜನೆಗಳಾದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಮತ್ತು ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಹೊದಿಕೆ ಮತ್ತು ಐಐಎಚ್‌ಆರ್ ತರಕಾರಿ ಸ್ಪೆಷಲ್ ಸೌಲಭ್ಯಗಳನ್ನು ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.